Connect with us

BELTHANGADY

ಅಂತರ್ ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಬೆಳ್ತಂಗಡಿಯ ಬಾಲಕರು: ತವರೂರಿನಲ್ಲಿ ಅದ್ಧೂರಿ ಸ್ವಾಗತ

Published

on

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಮೂರನೇ ಅಂತರ್ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2022 ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ 2 ಚಿನ್ನ, 3 ಬೆಳ್ಳಿಯ ಪದಕ, ಹಾಗೂ 5 ಕಂಚಿನಪದಕ ಗೆದ್ದ ಬೆಳ್ತಂಗಡಿಯ ಇಬ್ಬರು ಬಾಲಕರನ್ನು ಶಾಸಕ ಹರೀಶ್ ಪೂಂಜಾ, ಜನಪ್ರತಿನಿದಿಗಳು, ಹಿರಿಯರು, ಗಣ್ಯರು, ಕ್ರೀಡಾಭಿಮಾನಿಗಳು ಹಾಗೂ ಗ್ರಾಮಸ್ಥರು, ಮತ್ತು ಸಂಬಂಧ ಪಟ್ಟ ಪಂಚಾಯತ್ ಸದಸ್ಯರು, ಹಾಗೂ ಪೋಷಕರು ಅದ್ಧೂರಿಯಾಗಿ ಸ್ವಾಗತಿಸಿದರು.


ನಂತರ ತೆರೆದ ಜಿಪಿನಲ್ಲಿ ಮೆರವಣಿಗೆ ಮೂಲಕ ಅವರನ್ನು ಕರೆತರಲಾಯಿತು. ಬಳಿಕ ಶಾಸಕರು ಮತ್ತು ನಾಗರಿಕರು ಅಭಿನಂದನೆ ಸಲ್ಲಿಸಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಕಾನ್ – ರಿಯೂ ಆರ್. ವಿ ಟೈಗರ್ ಸ್ಪೋರ್ಟ್ಸ್ ಕರಾಟೆ – ಡೊ ಕರ್ನಾಟಕ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯ ಶಿಕ್ಷಕರಾದ ಬೆಳ್ತಂಗಡಿಯ ಶಿಹಾನ್ ವಸಂತ ಕೆ ಬಂಗೇರರ ಆರು ಶಿಷ್ಯರು ಭಾಗವಹಿಸಿದ್ದರು.


ಏರಡು ಚಿನ್ನ, ಮೂರು ಬೆಳ್ಳಿ, ಐದು ಕಂಚಿನ ಪದಕ ಹಾಗೂ ಪ್ರಮಾಣ ಪತ್ರ ಸ್ವೀಕರಿಸಿದ್ದು ಈ ತಂಡವು ಮೊತ್ತ ಮೊದಲ ಬಾರಿಗೆ ದಾಖಲೆ ಸೃಷ್ಟಿಸಿದೆ.

ಬಂಟ್ವಾಳದ ಆಸ್ತೆನ್ ಲೋಬೋ ಕುಮಿತೆಯಲ್ಲಿ ಪ್ರಥಮ ಚಿನ್ನದ ಪದಕ, ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ, ಮಡಂತ್ಯಾರು ಸೆಕ್ರೆಡ್ ಹಾರ್ಟ್ ಆಂಗ್ಲ ಮಾದ್ಯಮ ಶಾಲೆಯ ಫ್ಲೋಯೇಡ್ ಮಸ್ಕಿತ್ ಕಟಾ ವಿಭಾಗದಲ್ಲಿ ತೃತೀಯ ಕಂಚಿನ ಪದಕ ಕುಮಿತೆಯಲ್ಲಿ ತೃತೀಯ ಬೆಳ್ಳಿಯ ಪದಕ ಮಹಮ್ಮದ್ ಮಾಝ್ ಕಟಾ ವಿಭಾಗದಲ್ಲಿ ತೃತೀಯ ಕಂಚಿನ ಪದಕ,

ಉರುವಾಲು ಶ್ರೀ ಭಾರತೀ ಶಾಲೆಯ ಆಯುಷ್ ಶೆಟ್ಟಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಬೆಳ್ಳಿಯ ಪದಕ ಕಟಾದಲ್ಲಿ ತೃತೀಯ ಕಂಚಿನ ಪದಕ ಯಜ್ಞೆಷ್ ಕಟಾ ವಿಭಾಗದಲ್ಲಿ ದ್ವಿತೀಯ ಬೆಳ್ಳಿಯ ಪದಕ, ಕುಮಿತೆಯಲ್ಲಿ ತೃತೀಯ ಕಂಚಿನ ಪದಕ ಮೊರಾರ್ಜಿ ಮಚ್ಚಿನ ಶಾಲೆಯ ಶ್ರೇಯಸ್ ಪೂಜಾರಿ ಕಟಾ ವಿಭಾಗದಲ್ಲಿ ಪ್ರಥಮ ಚಿನ್ನದ ಪದಕ ಪಡೆದು ತಾಲೂಕಿಗೆ ಹೊಸ ದಾಖಲೆ ಮಾಡಿದ್ದಾರೆ.

 

BELTHANGADY

ಕಾಂಗ್ರೆಸ್ ಹಿರಿಯ ಮುಖಂಡ ವಸಂತ ಬಂಗೇರ ವಿಧಿವಶ

Published

on

ಬೆಳ್ತಂಗಡಿ: ಕಾಂಗ್ರೆಸ್ ಹಿರಿಯ ಮುಖಂಡ ಬೆಳ್ತಂಗಡಿ ಮಾಜಿ ಶಾಸಕ, ಸಚಿವ ವಸಂತ ಬಂಗೇರ(79 ವ) ಇಂದು(ಮೇ.8) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

vasanth bangera

ಮುಂದೆ ಓದಿ..; ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

1946 ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಜನಿಸಿದ ಇವರು ದಿ. ಕೇದೆ ಸುಬ್ಬ ಪೂಜಾರಿ ಹಾಗೂ ದಿ. ದೇವಕಿ ದಂಪತಿ ಪುತ್ರ. 1972 ರಲ್ಲಿ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 1985 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1989 ರಲ್ಲಿ ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಮತ್ತೆ 1994 ರಲ್ಲಿ  ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುಮಾರು 52 ವರ್ಷಗಳ ಕಾಲ ರಾಜಕೀಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂಧು ವರ್ಗದವರನ್ನು ಅಗಲಿದ್ದಾರೆ.

ಮೇ. 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Continue Reading

BELTHANGADY

ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

Published

on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

Continue Reading

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending