Saturday, August 20, 2022

ಕಡಬ: ಖಾಸಗಿ ಶಾಲಾ ಮಕ್ಕಳಿಗೆ ಚಿಕನ್ ಫಾಕ್ಸ್-1 ವಾರ ರಜೆ ಘೋಷಣೆ..!

ಕಡಬ: ಮಕ್ಕಳಿಗೆ ಚಿಕನ್‌ ಫಾಕ್ಸ್ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಒಂದು ವಾರ ಶಾಲೆ ಮುಚ್ಚಲಾದ ಘಟನೆ ಕಡಬದಲ್ಲಿ ನಡೆದಿದೆ.


ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಕಂಡುಬಂದಿದ್ದು ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಹರಡದಂತೆ ಶಾಲೆಗೆ ಒಂದು ವಾರದ ಮಟ್ಟಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವರದಿ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಕೆಲ ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಚಿಕನ್ ಫಾಕ್ಸ್ ರೋಗವು ಇದೀಗ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics