Tuesday, January 31, 2023

ಬಂಟ್ವಾಳ: ಶಾಲೆಗೆ ತೆರಳಿದ್ದ ಬಾಲಕಿ ನಾಪತ್ತೆ-ದೂರು ದಾಖಲು

ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ.


ಈಕೆ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಪುಟ್ಟರಾಜ್ ಅವರ ಮಗಳು ಪೃಥ್ವಿಯನ್ನು ವಿದ್ಯಾಭ್ಯಾಸದ ಸಲುವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು.

ಕಲ್ಲಡ್ಕದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಲ್ಲಿ ಬಾಲಕಿ ವಾಸವಾಗಿದ್ದು ಅಲ್ಲಿಂದ ಶಾಲೆಗೆ ಹೋಗಿ ಬರುತ್ತಿದ್ದಳು.

ಇಂದು ಕೂಡ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು. ಆದರೆ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ.

ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ...

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...

ಮಂಗಳೂರು : ಫಾರಿನ್ ಕರೆನ್ಸಿ ಕೊಡುವ ನೆಪದಲ್ಲಿ 4 ಲಕ್ಷ ಎಗರಿಸಿ  ಪರಾರಿ..!

ಮಂಗಳೂರು : ವಿದೇಶಿ ಕರೆನ್ಸಿ ಕೊಡುವ ನೆಪದಲ್ಲಿ ನಾಲ್ಕು ಲಕ್ಷ ಹಣವನ್ನು ಲಪಟಾಯಿಸಿ ವಂಚಕ ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಸೌದಿ ಅರೇಬಿಯಾದ ಕರೆನ್ಸಿ ಕೊಡುವುದಾಗಿ ನಂಬಿಸಿ 4 ಲಕ್ಷ ರೂ. ಪಡೆದುಕೊಂಡು...