Connect with us

LATEST NEWS

60 ಜನ ಹೊತ್ತಿದ್ದ ಶಾಲಾ ಪ್ರವಾಸ ಬಸ್ ಪಲ್ಟಿ- ಹಲವರಿಗೆ ಗಾಯ..!

Published

on

ಹಾವೇರಿ: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ ಬಸ್ ಪಲ್ಟಿಯಾದ ಘಟನೆ ಹಾವೇರಿಯ ಸವಣೂರಿನ ಬೇವಿನಹಳ್ಳಿ ಕ್ರಾಸ್ ಬಳಿ ನಡೆದಿದೆ.


ರಾಯಚೂರು ಜಿಲ್ಲೆ ಲಿಂಗಸೂರ ತಾಲೂಕಿನ ಸಜ್ಜಲಗುಡ್ಡದ ಹಿರಿಯ ಪ್ರಾರ್ಥಮಿಕ ಶಾಲಾ ವಿದ್ಯಾರ್ಥಿಗಳು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಬಸ್ ನಲ್ಲಿ 53 ವಿದ್ಯಾರ್ಥಿಗಳು ಹಾಗೂ 6 ಶಿಕ್ಷಕರು ಇದ್ದರು. ಎಲ್ಲರೂ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ರಾಕ್ ಗಾರ್ಡನ್ ವೀಕ್ಷಿಸಲು ಬಂದಿದ್ದರು. ಈ ವೇಳೆ 60 ಜನ ಹೊತ್ತಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿ ಸರ್ಕಾರಿ ಬಸ್ ಬೇವಿನಹಳ್ಳಿ ಕ್ರಾಸ್ ಬಳಿ ಎದುರಿಗೆ ವೇಗವಾಗಿ ಬಂದ ಕಾರನ್ನು ತಪ್ಪಿಸಲು ಹೋದಾಗ ಬಸ್ ಪಲ್ಟಿಯಾಗಿದೆ. ಈ ಅವಘಡದಿಂದ ಬಸ್ ಚಾಲಕ ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯವಾಗಿದೆ. ಡ್ರೈವರ್ ಮಲಪ್ಪ ಹೊಸೂರು ಅವರ ಬೆನ್ನು ಮುಳೆ ಮುರಿತಗೊಂಡಿದೆ. ವಿವ್ಯಾ ಸಜ್ಜನಗುಡ್ಡ, ಸವಿತಾರವಿ ರೆಡ್ಡಿ, ಗುರುನಗೌಡ ಎಂಬ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕ ಮತ್ತು ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending