BANTWAL
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಸಮಾರಂಭ
Published
1 year agoon
By
Adminಬಂಟ್ವಾಳ ತಾಲೂಕಿನ ವಿದ್ಯಾನಗರ ಪಾಳ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶಾಲಾ ವಿಜ್ಞಾನ ಸಂಘ’ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಬಂಟ್ವಾಳ: ಬಂಟ್ವಾಳ ತಾಲೂಕಿನ ವಿದ್ಯಾನಗರ ಪಾಳ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶಾಲಾ ವಿಜ್ಞಾನ ಸಂಘ’ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಹ್ಲಾದ್ ಜೆ ಶೆಟ್ಟಿ ಯವರು ಚಂದ್ರಯಾನ -3ರ ಉಡಾವಣೆಯ ಕಾರ್ಯವನ್ನು ಪ್ರಶಂಶಿಸುತ್ತಾ, ಭಾರತವನ್ನು ಗುರುತಿಸುವ ಕೆಲಸ ನಮ್ಮ ವಿಜ್ಞಾನಿಗಳಿಂದಾಗುತ್ತಿದೆ.
ನಮ್ಮ ಶಾಲಾ ವಿದ್ಯಾರ್ಥಿಗಳು ಅಂತಹ ವಿಜ್ಞಾನಿಗಳಾಗಬೇಕು ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪ್ರೌಢಶಾಲೆ ನೆರಳಕಟ್ಟೆಯ ವಿಜ್ಞಾನ ಅಧ್ಯಾಪಕರಾದ ಸುಧಾಕರ ಶೆಟ್ಟಿಯವರು ಹೊಸ ತಂತ್ರಜ್ಞಾನ ಯುಗದಲ್ಲಿ ಸಮೂಹ ಮಾಧ್ಯಮಗಳನ್ನು ಅವಶ್ಯಕತೆಗಳಿಗೆ ತಕ್ಕಂತೆ ಉಪಯೋಗಿಸಬೇಕು.
ಗ್ರಾಮೀಣ ಪ್ರದೇಶದಲ್ಲಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು ವಿದ್ಯಾರ್ಥಿಗಳಿಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿರುವುದು ಶ್ಲಾಘನೀಯ ಎಂದರು.
ಆಡಳಿತ ಅಧಿಕಾರಿ ರವೀಂದ್ರ ಡಿ ಯವರು ನಮ್ಮ ಪರಿಸರವೇ ಒಂದು ಪ್ರಯೋಗಾಲಯವಾಗಿದೆ.
ಪ್ರಶ್ನಿಸುವ ಕೌಶಲ್ಯ ಮತ್ತು ಉತ್ತರವನ್ನು ಕಂಡುಕೊಳ್ಳಲು ನಡೆಸುವ ಪ್ರಯತ್ನವೇ ನಮ್ಮ ವಿಜ್ಞಾನ ಸಂಘ ಅನ್ವೇಷ್’ ಆಗಿದೆ ಎಂದು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ ನಡೆಯಿತು.
ವೇದಿಕೆಯಲ್ಲಿ ವಿಜ್ಞಾನ ಸಂಘದ ಸಂಯೋಜಕರಾದ ಸುಧಾ ಮತ್ತು ಪ್ರಿಯದರ್ಶಿನಿ ಉಪಸ್ಥಿತರಿದ್ದರು.
ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮವನ್ನು ಹತ್ತನೇ ತರಗತಿಯ ವಿದ್ಯಾರ್ಥಿನಿ ಭುವಿ ಸ್ವಾಗತಿಸಿ, ಅನಿಷಾ ಆರ್ ವಂದಿಸಿ, ಸಹ ಶಿಕ್ಷಕಿ ಸಂಧ್ಯಾ ನಿರೂಪಿಸಿದರು.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BANTWAL
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ
Published
6 days agoon
09/01/2025By
NEWS DESK2ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.
LATEST NEWS
ಪೊಲೀಸ್ ವಾಹನದಲ್ಲಿ ಡ್ರೈವಿಂಗ್ ಕಲಿಯುತ್ತಿದ್ದ ಸಬ್ ಇನ್ಸ್ ಪೆಕ್ಟರ್: ತಪ್ಪಿದ ಅನಾಹುತ !
ಇದು ನಾಗಾ ಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿ : ಭಾಗ – 1
ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ
ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS1 day ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?