ಸರ್ಕಾರಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವಕರೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡು : ಸರ್ಕಾರಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವಕರೊಬ್ಬರು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರು ಕಡವತ್ ಮೊಘರ್ ನ ಅಬ್ದುಲ್ ಖಾದರ್ ಫೌಜಿಯಾ ದಂಪತಿಯ ಪುತ್ರ ಫಾಝಿಲ್ ತಬ್ಸೀರ್ (23) ಮೃತಪಟ್ಟ ಯುವಕನಾಗಿದ್ದಾನೆ.
ಫಾಝಿಲ್ ಕಾಸರಗೋಡಿನ ಹಳೆ ಬಸ್ ನಿಲ್ದಾಣದಲ್ಲಿ ಗಾರ್ಮೆಂಟ್ ಸಗಟು ವ್ಯಾಪಾರಿಯಾಗಿದ್ದು, ಕಾಸರಗೋಡಿನ ಹಳೆಯ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ಏಕಮುಖ ಸಂಚಾರದ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಕೂಡಲೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಕಾಸರಗೋಡು ನಗರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ ಮತ್ತು ಅಪಘಾತಕ್ಕೆ ಕಾರಣವಾದ ಕೆಎಸ್ಆರ್ ಟಿಸಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.