ಬಂಟ್ವಾಳ: ಓವರ್‌ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್‌ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ದಿನೇಶ್ ಆಲಂಗಾರು ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ವಿಟ್ಲದ ದ್ವಿಚಕ್ರ ವಾಹನದಲ್ಲಿ ಓವರ್‌ಟೇಕ್ ಮಾಡುವ ವೇಳೆ ಎದುರಿನಿಂದ ಬರುತ್ತಿದ್ದ ಜೀಪ್‌ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.