ನಾಗಮಂಗಲ: ತಾಲ್ಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿಯ ತುಮಕೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಹೊಣಕೆರೆ ಗ್ರಾಮದ ಜೆಡಿಎಸ್ ಮುಖಂಡ ಆನಂದಕುಮಾರ್ (62), ಮೊಮ್ಮಕ್ಕಳಾದ ಆರಾಧ್ಯ (10), ಗೌರವ್(5) ಮೃತ ದುರ್ದೈವಿಗಳು. ಘಟನೆಯಲ್ಲಿ ಆನಂದ್‌ಕುಮಾರ್ ಸೊಸೆ ಮೋನಿಕಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದಕುಮಾರ್ ತೋಟದ ಮನೆಯಿಂದ ಹೊಣಕೆರೆಗೆ ತಮ್ಮ ಇಬ್ಬರು ಮೊಮ್ಮಕ್ಕಳು ಹಾಗೂ ಸೊಸೆಯೊಂದಿಗೆ ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ವಿಷಯ ತಿಳಿದು ಸಿಪಿಐ ಸುಧಾಕರ್ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.