Thursday, December 1, 2022

ಆ್ಯಂಬುಲೆನ್ಸ್ ಒಳಗೆ ಮಹಿಳೆಯ ಚೀರಾಟ, ದೌಡಾಯಿಸಿದ ಪೊಲೀಸರು-ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಹೀಗೊಂದು ಅಣಕು ಪ್ರದರ್ಶನ

ಉಡುಪಿ: ಉಡುಪಿ ಜಿಲ್ಲೆಯ ಇಂದ್ರಾಳಿ ಸೇತುವೆ ಬಳಿಯಿಂದ ರೈಲು ನಿಲ್ದಾಣದವರೆಗಿನ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಕಳೆದ ಸುಮಾರು ಎರಡು ವರ್ಷಗಳಿಂದ ಪ್ರಯಾಣಿಕರು ಹಿಂಸೆ ಅನುಭವಿಸುತ್ತಿದ್ದಾರೆ. ವಾಹನ ಚಾಲಕರಂತೂ ಭೂಮಿ ಮೇಲಿನ ನರಕದಲ್ಲಿ ವಾಹನ ಓಡಿಸುವ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆ ಈ ಹಿನ್ನೆಲೆಯಲ್ಲಿ ಸಮಾಜ ಸೇವಾ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಅವರು ವಿಭಿನ್ನ ರೀತಿಯ ಪ್ರತಿಭಟನೆ ಮಾಡಿದ್ದಾರೆ.


ಈ ಬಗ್ಗೆ ನಗರ ಸಭೆಗೆ ಶಾಸಕರಿಗೆ ಹಲವು ಬಾರಿ ಮನವಿ ಕೊಟ್ಟರು ಸಮಸ್ಯೆ ಬಗೆಹರಿದಿಲ್ಲ.  ಪ್ರತಿನಿತ್ಯ ನಿಜ ಜೀವನದಲ್ಲಿ ಅನುಭವಿಸುವ ಸಮಸ್ಯೆಯನ್ನು ಅಣಕು ಪ್ರದರ್ಶನದ ಮೂಲಕ ಅವರು ಆಳುವ ಸರಕಾರದ ಮುಂದೆ ತೆರೆದಿಟ್ಟಿದ್ದಾರೆ.


ಗರ್ಭಿಣಿಯರು ಈ ರಸ್ತೆಯಲ್ಲಿ ಸಂಚರಿಸಿದರೆ ಹೋಂಡ ಗುಂಡಿಗೆ ವಾಹನ ಬಿದ್ದು ರಸ್ತೆಯಲ್ಲೇ ಹೆರಿಗೆ ಆಗುತ್ತದೆ ಎಂಬುದನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ ತೆರೆದಿಟ್ಟಿತು. ರಾಜು ಮತ್ತು ಹರೀಶ್ ಅಣಕು ಪ್ರದರ್ಶನದಲ್ಲಿ ನಟಿಸಿದರು.

ನಿತ್ಯಾನಂದ ಒಳಕಾಡು ಅವರ ಪ್ರತಿಭಟನೆಗೆ ರೈಲು ನಿಲ್ದಾಣದ ಆಟೋ ಚಾಲಕರು ಟ್ಯಾಕ್ಸಿಮನ್ ಅಸೋಸಿಯೇಷನ್ ಬೆಂಬಲ ನೀಡಿದೆ.


ಇಂದ್ರಾಳಿ ರೈಲು ನಿಲ್ದಾಣ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕೆಂದು ಆಟೋ ಚಾಲಕರು ಮತ್ತು ಟ್ಯಾಕ್ಸಿಯವರು ಒತ್ತಾಯಿಸಿದ್ದಾರೆ.


ಒಂದು ಕೋಟಿ ರೂಪಾಯಿ ಮೊತ್ತ ಕಾಂಕ್ರೀಟ್ ರಸ್ತೆಗೆ ಮಂಜೂರಾಗಿದ್ದರೆ ಬೇಗ ಕಾಮಗಾರಿ ಆರಂಭಿಸಿ ಎಂದು ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅಡಿಕೆ ಮರ ಕಡಿಯುತ್ತಿದ್ದಾಗ ತಲೆಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಹಳೆ ಅಡಕೆ ಮರ ಕಡಿಯುತ್ತಿರುವಾಗ ಆಕಸ್ಮಿಕವಾಗಿ ವೃದ್ಧನ ತಲೆ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಮುಂಡಾಜೆ ಗ್ರಾಮದ ಮಂಜು ಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು ನಾಲ್ಕೆ(66) ಮೃತ...