Connect with us

    LATEST NEWS

    ಕಾರ್ಕಳ: ಕಂಚಿನ ಬದಲು ನಕಲಿ ಪ್ರತಿಮೆ ನಿರ್ಮಿಸಿಕೊಟ್ಟ ಶಿಲ್ಪಿಯ ಬಂಧನ

    Published

    on

    ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು.

    ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್ ನನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಲು ಯಶಸ್ವಿಯಾಗಿದ್ದಾರೆ.

    ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದರು.

    ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    FILM

    ಅಭಿಷೇಕ್‌-ಅವಿವಾ ಪುತ್ರನಿಗೆ ಅಂಬರೀಷ್‌ ಹೆಸರು

    Published

    on

    ಕನ್ನಡ ಚಿತ್ರರಂಗ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ದಂಪತಿ ತಮ್ಮ ಚೊಚ್ಚಲ ಮಗುವನ್ನು ಸ್ವಾಗತಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ನವೆಂಬರ್‌ 12) ಅವಿವಾ ಬಿದ್ದಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಸದ್ಯ ಅವಿವಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಆಗಸ್ಟ್‌ ತಿಂಗಳಿನಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸಿಹಿ ಸುದ್ದಿ ಹೊರಬಿದಿತ್ತು. ಅದರ ಬೆನ್ನಲ್ಲೇ ಸೆಪ್ಟೆಂಬರ್‌ 18, 2024ರಂದು ಅವಿವಾ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಅವಿವಾ ಸೀಮಂತದಲ್ಲಿ ಅನೇಕ ಸಿನಿಮಾ ತಾರೆಯರು ಭಾಗಿಯಾಗಿದ್ದು, ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು.

    ಸೀಮಂತ ಕಾರ್ಯಕ್ರಮದ ಅವಿವಾ ಫೋಟೋ ನೋಡಿದ ಅಭಿಮಾನಿಗಳು ಗಂಡು ಮಗುವೇ ಜನಿಸುವುದು ಎಂದು ಗೆಸ್‌ ಮಾಡಿದ್ದರು. ಅವಿವಾ ಬಿದ್ದಪ್ಪ ಸಾಮಾಜಿಕ ಜಾಲತಾಣದಲ್ಲಿಗಳಲ್ಲಿ ಫೋಟೋಗಳನ್ನು ಪೋಸ್ಟ್‌ ಮಾಡಿದಾಗಲೂ ಕೂಡ ಅನೇಕರು ಗಂಡು ಮಗು, ಅಂಬರೀಷ್‌ ಮತ್ತೆ ಹುಟ್ಟಿ ಬರುತ್ತಿದ್ದಾರೆ ಎನ್ನುವ ಕಮೆಂಟ್‌ಗಳನ್ನು ಮಾಡುತ್ತಿದ್ದರು.

    ಇದೀಗ ಎಲ್ಲರ ನಿರೀಕ್ಷೆಗಳು ಸರಿಯಾಗಿದ್ದು ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಗಂಡು ಮಗುವಾಗಿದೆ. ಹೀಗಾಗಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಾಗಿ ಅಂಬರೀಷ್‌ ಅವರೇ ಮತ್ತೆ ಹುಟ್ಟಿ ಬಂದಿದ್ದಾರೆ ಎನ್ನುವ ಮಾತುಗಳು ಎಲ್ಲರ ಬಾಯಲ್ಲಿ ಇದೆ. ಜೊತೆಗೆ ಇನ್ನೊಂದು ವಿಶೇಷವಾದ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಿಗೆ ಏನು ಹೆಸರಿಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದ್ದರೆ. ಮುದ್ದಾದ ಮೊಗ್ಗಗನಿಗೆ ತಾತನ ಹೆಸರೇ ಇಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

    ಅಂದರೆ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಮಗನಿಗೆ ಅಂಬರೀಷ್‌ ಅವರ ಹೆಸರೇ ಇಡಲಾಗುತ್ತದೆ. ಹಳೆಯ ಸಂಪ್ರದಾಯದಂತೆ ತಾತನ ಹೆಸರನ್ನೇ ಮೊಮ್ಮಗನಿಗೆ ಇಡುವ ಪದ್ಧತಿಯನ್ನು ಸುಮಲತಾ ಹಾಗೂ ಅಭಿಷೇಕ್‌ ಮುಂದುವರಿಸುತ್ತಾರೆ ಎನ್ನುವ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ ಕೆಲವರು ಹೊಸ ಹೆಸರಿಟ್ಟು ಸರ್‌ ನೇಮ್‌ ಅಂಬರೀಷ್‌ ಎಂದು ಇಡುವ ಸಾಧ್ಯತೆ ಎಂದು ಸಹ ಹೇಳುತ್ತಿದ್ದಾರೆ.

    ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಜೂನ್ 5, 2023ರಂದು ಪೋಷಕರ ಒಪ್ಪಿಗೆ ಪಡೆದು ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.

    Continue Reading

    LATEST NEWS

    ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್​ ಕೇಳಿದ ಗಂಡ!

    Published

    on

    ಬೀಜಿಂಗ್: ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ ಗಂಡ ಡಿಎನ್​ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ. ಹೆಂಡತಿಯ ಚಾರಿತ್ರ್ಯ ಸರಿಯಿಲ್ಲವೆಂದು ಆತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ.

    ಸುಮಾರು 1 ತಿಂಗಳ ಹಿಂದೆ 30 ವರ್ಷದ ಮಹಿಳೆ ಸಿ-ಸೆಕ್ಷನ್ ಮೂಲಕ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಅವರಿಗೆ ಕಪ್ಪು ಬಣ್ಣದ ಮಗು ಹುಟ್ಟಿತ್ತು. ಆಕೆ ಮತ್ತು ಆಕೆಯ ಗಂಡ ಬಿಳಿ ಬಣ್ಣದವರಾಗಿದ್ದು, ಕಪ್ಪು ಮಗು ಹೇಗೆ ಹುಟ್ಟಿತು ಎಂದು ಆಕೆಯ ಪತಿ ಆಘಾತಕ್ಕೊಳಗಾದ. ಇದೇ ಕಾರಣವನ್ನಿಟ್ಟುಕೊಂಡು ಆತ ವಿಚ್ಛೇದನ ಕೋರಿದ್ದಾನೆ.

    ಈ ಘಟನೆಯನ್ನು ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಸಲಹೆ ಕೇಳಿದ್ದಾರೆ. ತನ್ನ ಪತಿ ಮೊದಲು ಮಗುವನ್ನು ನೋಡಲು ಬಂದಾಗ ಅವನು ಆಶ್ಚರ್ಯಚಕಿತನಾದನು. ಕಪ್ಪು ಬಣ್ಣದ್ದೆಂಬ ಕಾರಣಕ್ಕೆ ಮಗುವನ್ನು ಹಿಡಿಯಲು ನಿರಾಕರಿಸಿದನು ಎಂದು ಆಕೆ ವಿವರಿಸಿದ್ದಾಳೆ. ನಂತರ ಡಿಎನ್ಎ ಪರೀಕ್ಷೆ ನಡೆಸಿ ಮಗು ಆತನಿಗೇ ಹುಟ್ಟಿದ್ದು ಎಂದು ದೃಢಪಡಿಸುವಂತೆ ಒತ್ತಾಯಿಸಿದನು. ಅದು ನಮ್ಮಿಬ್ಬರದೇ ಮಗು ಎಂದು ಎಷ್ಟೇ ಹೇಳಿದರೂ ಆತ ಕೇಳಲಿಲ್ಲ ಎಂದು ಆಕೆ ಹೇಳಿದ್ದಾಳೆ.

    ಮಗುವಿನ ಕಪ್ಪು ಮೈಬಣ್ಣದಿಂದ ತನಗೂ ಆಶ್ಚರ್ಯವಾಯಿತು ಎಂದು ಆಕೆ ಒಪ್ಪಿಕೊಂಡಿದ್ದಾಳೆ. ಆದರೆ, ಮಗುವಿನ ಬಣ್ಣದ ಕಾರಣಕ್ಕೆ ನಾನು ಹೆತ್ತ ಮಗುವನ್ನು ಕೈಬಿಡುವುದಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾಳೆ. ಆಕೆಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಈ ವಿಷಯವನ್ನು ಚರ್ಚಿಸಿದರೆ, ಇತರರು ಬಿಳಿ ಚರ್ಮದ ದಂಪತಿಗಳು ಕಪ್ಪು ಚರ್ಮದ ಮಗುವನ್ನು ಹೊಂದುವುದು ಅಸಾಮಾನ್ಯವೇನಲ್ಲ ಎಂದಿದ್ದಾರೆ.

    Continue Reading

    LATEST NEWS

    ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ಸಿಹಿಸುದ್ದಿ: ಎಲ್ಲಾ ನಿಲ್ದಾಣಗಳಲ್ಲಿ ‘ಡಿಜಿಟಲ್ ಲಗೇಜ್ ಲಾಕರ್’ ಸೌಲಭ್ಯ

    Published

    on

    ಬೆಂಗಳೂರು: ಬಸ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಗೇಜ್ ರೂಂಗಳ ವ್ಯವಸ್ಥೆ ಇದೆ. ಆದರೇ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇರಲಿಲ್ಲ. ಈಗ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲೂ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ.

    ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! SafeCloak ನ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವು ಈಗ ಮೆಜೆಸ್ಟಿಕ್ ಮತ್ತು ಇತರ ಆಯ್ದ ನಿಲ್ದಾಣಗಳಲ್ಲಿ ಲಭ್ಯ. ನಿಮ್ಮ ಬ್ಯಾಗ್‌ಗಳನ್ನು 6 ಗಂಟೆಗಳಿಗೆ (ಮಧ್ಯಮ ಗಾತ್ರ) ಕೇವಲ ₹70 ಮತ್ತು ದೊಡ್ಡ ಗಾತ್ರದ ಲಗೇಜ್ ಗೆ ₹100 ನಿಗದಪಡಿಸಲಾಗಿದೆ ಎಂದಿದೆ.

    ಸೋ ಇನ್ಮುಂದೆ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಂತ ಪ್ರಯಾಣಿಕರು ತಮ್ಮ ಲಗೇಜ್ ಗಳನ್ನು ಸೇಫ್ ಕ್ಲಾಕ್ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ನಲ್ಲಿ ಇರಿಸಿ ತೆರಳಬಹುದು. ಆದರೇ ಇದಕ್ಕೆ ಹಣವನ್ನು ಪಾವತಿಸಬೇಕಾಗುತ್ತದೆ.

    Continue Reading

    LATEST NEWS

    Trending