Connect with us

    BELTHANGADY

    ದಿನೇಶ್‌ ಹತ್ಯೆ ಖಂಡಿಸಿ ಮಾ.15ರಿಂದ ದಲಿತ ಸಂಘಟನೆಯೊಂದಿಗೆ ಬೆಳ್ತಂಗಡಿಯಿಂದ ಡಿ.ಸಿ ಕಚೇರಿಗೆ ಪಾದಾಯಾತ್ರೆ: ಎಸ್‌ಡಿಪಿಐ

    Published

    on

    ಮಂಗಳೂರು: ಬೆಳ್ತಂಗಡಿಯಲ್ಲಿ ಬಜರಂಗದಳದ ಕಾರ್ಯಕರ್ತನಿಂದ ಹತ್ಯೆಯಾದ ದಲಿತ ವರ್ಗದ ದಿನೇಶ್‌ ಕನ್ಯಾಡಿ ನ್ಯಾಯಕ್ಕಾಗಿ ಎಸ್‌ಡಿಪಿಐ ಹಾಗೂ ದಲಿತ ಸಂಘಟನೆಗಳಿಂದ ಮಾ.15ರಂದು ಬೆಳ್ತಂಗಡಿಯಿಂದ ಮಂಗಳೂರಿನ ಡಿಸಿ ಕಚೇರಿಗೆ ಬೃಹತ್‌ ಪಾದಾಯಾತ್ರೆ ನಡೆಯಲಿದೆ ಎಂದು ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಹೇಳಿದ್ದಾರೆ.


    ಈ ಬಗ್ಗೆ ಎಸ್‌ಡಿಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ. 23 ರಂದು ದಲಿತ ಕುಟುಂಬದ ದಿನೇಶ್‌ ಕನ್ಯಾಡಿ ಎಂಬುವವನಿಗೆ ಸಂಘಪರಿವಾರದ ಬಜರಂಗದಳದ ಕಾರ್ಯಕರ್ತ ಹಲ್ಲೆ ಮಾಡಿ ಕೊಲೆಗೈದಿದ್ದಾನೆ.

    ಸಂಘಪರಿವಾರದ ಕಾರ್ಯಕರ್ತ ಕೊಲೆಯಾದರೆ ಬಿಜೆಪಿಯ ಎಲ್ಲಾ ರಾಜಕೀಯ ನಾಯಕರು ಭೇಟಿ ನೀಡಿ ಸರಕಾರದಿಂದ 25 ಲಕ್ಷ ರೂಪಾಯಿ ಕೊಟ್ಟಿದ್ದಾರೆ.

    ಆದರೆ ಜನಪ್ರತಿನಿಧಿ, ಸರಕಾರ ಅಧಿಕಾರಿಗಳು ಮನೆಗೆ ಹೋಗಿಲ್ಲ. ಪರಿಹಾರ ನೀಡಿಲ್ಲ.ಇದು ಬಹಳ ಅನ್ಯಾಯ. ಎಸ್‌ಡಿಪಿ ಭೇಟಿ ನೀಡಿ ಸಾಂತ್ವನ ಹೇಳಿದ್ದೇವೆ.

    50 ಲಕ್ಷ ರೂಪಾಯಿ ಪರಿಹಾರ ನೀಡಿ, ಆತನ ಕುಟುಂಬಕ್ಕೆ ಸರ್ಕಾರಿ ಕೆಲಸ, ಎರಡು ಎಕ್ರೆ ಭೂಮಿ ಪರಿಹಾರವಾಗಿ ನೀಡಬೇಕು. ಜೊತೆಗೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
    ಈ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳು ಹಾಗೂ ಎಸ್‌ಡಿಪಿಐನಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಬೆಳ್ತಂಗಡಿಯಿಂದ ಮಾ. 15ರಂದು ಹೊರಟು ಮಾ.17ಕ್ಕೆ ಮಂಗಳೂರು ತಲುಪಲಿದೆ.

    ದಲಿತ ಸಂಘಟನೆಗಳು, ಹಾಗೂ ಎಸ್‌ಡಿಪಿನ ಮುಖಂಡ ಭಾಸ್ಕರ ಪ್ರಸಾದ್‌ ನೇತೃತ್ವದಲ್ಲಿ ಈ ಪಾದಾಯಾತ್ರೆ ನಡೆಯಲಿದೆ ಎಂದರು.

    ‘ವೈಯುಕ್ತಿಕ ದ್ವೇಷದಿಂದ ಹರ್ಷನ ಕೊಲೆ’
    ಶಿವಮೊಗ್ಗದಲ್ಲಿ ಕ್ರಿಮಿನಲ್‌ ಹಿನ್ನೆಲೆಯ ವ್ಯಕ್ತಿಯ ಕೊಲೆಯಾಗುತ್ತದೆ. ಇದು ವೈಯುಕ್ತಿಕ ದ್ವೇಷದಿಂದಾದ ಕೊಲೆ. ಇದನ್ನು ತನಿಖಾಧಿಕಾರಿಗಳು ಸಹ ಸ್ಪಷ್ಟಪಡಿಸಿದ್ದಾರೆ. ಆದರೆ ಇದನ್ನು ಸಂಘಪರಿವಾರ ಹಾಗೂ ಬಿಜೆಪಿಗರು ಕೋಮುಗಲಭೆ ಹುಟ್ಟು ಹಾಕಲು ಪ್ರಯತ್ನ ಪಟ್ಟಿದ್ದಾರೆ.

    ಅಲ್ಲಿ ಕೊಲೆಯಾದವನಿಗೆ ಪರಿಹಾರ ನೀಡಿದ್ದಾರೆ. ಅದನ್ನು ನಾವು ಖಂಡಿಸುವುದಿಲ್ಲ. ಬದಲಾಗಿ ತಾರತಮ್ಯದ ನೀತಿಯನ್ನು ಖಂಡಿಸುತ್ತೇವೆ. ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ವೈಯುಕ್ತಿಕ ದ್ವೇಷಕ್ಕೆ ಕೊಲೆಯಾದವನಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಕೊಟ್ಟಿದ್ದಾರೆ.

    ಅದಕ್ಕೆ ಕೆಲವು ಮಾನದಂಡಗಳು ಇವೆ. ಬಹುತೇಕ ಮಾಧ್ಯಮಗಳು ಸಹ ಮರೆತಿವೆ. 2 ಎಕ್ರೆ ಜಮೀನು ಕೊಡಬೇಕು.

    ಪತ್ರಿಕಾಗೋಷ್ಠಿಯಲ್ಲಿ ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಜಲೀಲ್.ಕೆ, ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು,ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಉಪಸ್ಥಿತರಿದ್ದರು.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending