Connect with us

LATEST NEWS

ಉಡುಪಿ ಶಾಸಕರ ಕುಮ್ಮಕ್ಕು ಮತ್ತು ದ್ವೇಷ ರಾಜಕೀಯದಿಂದ ಮಸೀದಿ ಜಾಗದ ಕಟ್ಟಡ ನೆಲಸಮ: SDPI ಆರೋಪ

Published

on

ಉಡುಪಿ: ಇಲ್ಲಿನ ಜಾಮಿಯಾ ಮಸೀದಿಗೆ ಒಳಪಟ್ಟ ಕಟ್ಟಡದಲ್ಲಿ ಇದ್ದ ಝಾರ ಹಾಗೂ ಜೈತೂನ್ ಹೋಟೆಲ್‌ ಅನ್ನು ತೆರವುಗೊಳಿಸಿ ಕಟ್ಟಡವನ್ನು ನೆಲಸಮಗೊಳಿಸಿದ ಉಡುಪಿ ನಗರಸಭೆಯ ಕಾರ್ಯವನ್ನು ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ ಖಂಡಿಸಿದ್ದಾರೆ.


ಉಡುಪಿ ಜಾಮಿಯಾ ಮಸೀದಿಯ ಜಾಗದಲ್ಲಿ ಇದ್ದ ಕಟ್ಟಡವನ್ನ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಮತ್ತು ಅವರ ಸಹೋದರ ಬಾಡಿಗೆಗೆ ಪಡೆದು ಹೊಟೇಲ್ ಅನ್ನು ನಡೆಸುತ್ತಿದ್ದರು.

ಇತ್ತೀಚೆಗೆ ಉಡುಪಿ ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಕಟ್ಟಡವನ್ನೂ ಒಳಗೊಂಡಂತೆ 22 ಕಟ್ಟಡಗಳು ಅಕ್ರಮ ಎಂದು ಘೋಷಿಸಿ ತೆರವಿಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು

ಆದರೆ ಈ ಒಂದು ಕಟ್ಟಡವನ್ನು ಬಿಟ್ಟು ಬೇರೆ ಯಾವ ಕಟ್ಟಡದ ವಿರುದ್ಧ ಯಾವುದೇ ರೀತಿಯ ಕಾರ್ಯಾಚರಣೆ ನಡೆಸಿಲ್ಲ ಹಾಗೂ ಇವತ್ತು ನೆಲಸಮ ಗೊಳಿಸಿದ ಕಟ್ಟಡದ ಬದಿಯಲ್ಲೇ

ಇರುವ ಒಂದು ಕಟ್ಟಡದ ಮೇಲಿನ ಎರಡು ಮಹಡಿಗಳಿಗೆ ಪರವಾನಿಗೆ ಇರಲಿಲ್ಲ, ಆ ಕಟ್ಟಡಕ್ಕೆ ತರಾತುರಿಯಲ್ಲಿ ಕೆಲವು ದಿನಗಳ ಹಿಂದೆ ಡೋರ್ ನಂಬರ್ ನೀಡಲಾಗಿತ್ತು.

ಒಟ್ಟಾರೆಯಾಗಿ ರಾಜಕೀಯ ದ್ವೇಷ ಸಾಧಿಸುವ ಉದ್ದೇಶದಿಂದ ಉಡುಪಿ ಶಾಸಕ ರಘುಪತಿ ಭಟ್ ರವರ ಕುಮ್ಮಕ್ಕಿನಿಂದ ಈ ತೆರವು ಕಾರ್ಯ ನಡೆದಿದೆ

ಇದನ್ನು ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ಖಂಡಿಸುತ್ತದೆ ಹಾಗೂ ಇದರ ವಿರುದ್ಧ ಹೋರಾಟವನ್ನು ನಡೆಸಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್

Published

on

ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.


ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.

ಸಾಕು ಪ್ರಾಣಿ ಮಾಲೀಕರ ಹೊಣೆ :

ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕು ಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕು ಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ. ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ.

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending