Connect with us

DAKSHINA KANNADA

ನೆಹರು ಮೈದಾನಕ್ಕೆ ಕೇಂದ್ರ ಮೈದಾನ ಎನ್ನುವುದು ಸಂಘಪರಿವಾರದ ಇತಿಹಾಸ ತಿರುಚಿದ ಮುಂದುವರಿದ ಭಾಗ : SDPI

Published

on

ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಸಂಘಪರಿವಾರದ ವಿವಿಧ ಸಂಘಟನೆಗಳು ಮಂಗಳೂರಿನ ಐತಿಹಾಸಿಕ ನೆಹರು ಮೈದಾನದ ಹೆಸರನ್ನು ಕೇಂದ್ರ ಮೈದಾನ ಎಂದು ಉಲ್ಲೇಖಿಸುತ್ತಿದ್ದರು.

ಇದೀಗ ಕರ್ನಾಟಕ ಸಾಹಿತ್ಯ ಅಕಾಡಮಿ ಇತ್ತೀಚೆಗೆ ಹೊರ ತಂದಿರುವ ಸ್ವಾತಂತ್ರ್ಯ ಹೋರಾಟದ ಕರ್ನಾಟಕ ಕೇಂದ್ರ ಮೈದಾನ ಎಂಬ ಪುಸ್ತಕದಲ್ಲಿ ಮಂಗಳೂರಿನ ನೆಹರೂ ಮೈದಾನವನ್ನು ಕೇಂದ್ರ ಮೈದಾನ ಎಂದು ಉಲ್ಲೇಖಿಸಿರುವುದು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರಿಗೆ ಮಾಡಿದ ಅವಮಾನವಾಗಿದೆ. ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ದೇಶದಲ್ಲಿ ಹಲವಾರು ದಶಕಗಳಿಂದ ಸಂಘಪರಿವಾರ ಪಠ್ಯ ಪುಸ್ತಕದ ಮೂಲಕ, ಮಾಧ್ಯಮದ ಮೂಲಕ ನಿರಂತರವಾಗಿ ಇತಿಹಾಸವನ್ನು ತಿರುಚಿ ನೈಜ ಹೋರಾಟಗಾರರಿಗೆ ಅವಮಾನ ಮಾಡಿ ಬ್ರಿಟೀಷರಿಗೆ ಕ್ಷಮಾಪನೆ ಪತ್ರ ಬರೆದ ಹೇಡಿಗಳನ್ನು ದೇಶ ಪ್ರೇಮಿಗಳೆಂದು ಚಿತ್ರೀಕರಿಸುತ್ತಿದ್ದಾರೆ.
ಇದರ ಮುಂದುವರಿದ ಭಾಗವಾಗಿ ಇದೀಗ ಮಂಗಳೂರಿನ ನೆಹರೂ ಮೈದಾನವನ್ನು ಕೇಂದ್ರ ಮೈದಾನ ಎಂದು ಸರಕಾರದ ಕರ್ನಾಟಕ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಉಲ್ಲೇಖಿಸಿರುವುದು ಅಕ್ಷಮ್ಯ ಅಪರಾಧವಾಗಿದೆ.

ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಹಲವಾರು ಸಭೆ ಸಮಾರಂಭಗಳಿಗೆ ಸಾಕ್ಷಿಯಾದ ಮಂಗಳೂರಿನ ಹೃದಯ ಭಾಗದಲ್ಲಿರುವ ಈ ಮೈಧಾನಕ್ಕೆ 1960 ರಲ್ಲಿ ನೆಹರು ಮೈದಾನ ಎಂದು ನಾಮಕರಣ ಮಾಡಲಾಗಿತ್ತು. 2016 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಈ ಮೈದಾನದಲ್ಲಿ ನೆಹರೂರವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.

ಸರಕಾರಿ ಕಾರ‍್ಯಕ್ರಮ ಸೇರಿದಂತೆ ಹಲವಾರು ಸಾಮಾಜಿಕ ಸಮಾರಂಭಗಳು ನಡೆಯುತ್ತಿದ್ದ ಮೈದಾನಕ್ಕೆ ಇದೀಗ ಸರಕಾರದ ಅದಿಕೃತ ಇಲಾಖೆಯ ಹೊರ ತಂದಿರುವ ಪುಸ್ತಕದಲ್ಲಿ ಕೇಂದ್ರ ಮೈದಾನ ಎಂದು ಉಲ್ಲೇಖಿಸಿರುವ ಉದ್ದೇಶ ಏನು ಎಂಬುದನ್ನು ಕನ್ನಡ, ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ರವರು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು.

ಇತಿಹಾಸ ಅರಿಯದವರು ಇತಿಹಾಸ ನಿರ್ಮಿಸಲಾರರು ಎಂಬ ಅಂಬೇಡ್ಕರ್‌ರವರ ಮಾತಿನಂತೆ ಯಾವುದೇ ಇತಿಹಾಸ ಅರಿಯದ ಇತಿಹಾಸದ ಯಾವುದೇ ಚಳುವಳಿಗಲ್ಲಿ ಬಾಗಿಯಾಗದ ಬಿಜೆಪಿಗರು ಇಂದು ಇತಿಹಾಸವನ್ನು ತಿರುಚುವ ಮೂಲಕ ನಾಡಿನ ಜನತೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಅನ್ವರ್ ಸಾದತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕೂಡಲೇ ಕೇಂದ್ರ ಮೈದಾನದ ಬದಲು ನೆಹರು ಮೈದಾನ ಎಂದು ಹೆಸರು ಬದಲಾಯಿಸಿ ಪುಸ್ತಕದ ಹೊಸ ಮುದ್ರಣವನ್ನು ಪ್ರಕಟಿಸಬೇಕು ಇಲ್ಲದಿದ್ದರೆ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸೇರಿ ಎಸ್‌ಡಿಪಿಐ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್‌ಗಳ ಹಗಲು ದರೋಡೆ..! ಏನಿದು ಘಟನೆ?

Published

on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್‌ಆರ್‌ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ‌ಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್‌2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್‌ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

subrahmanya

ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.

Continue Reading

DAKSHINA KANNADA

ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Published

on

ಮಂಗಳೂರು : ಬಿಗ್‌ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್‌ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ.  ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.

2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್​ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.

Continue Reading

DAKSHINA KANNADA

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ

Published

on

ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.

ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ,  ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’

ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.

ಭದ್ರತಾಕೋಶ ಉದ್ಘಾಟನೆ : 

ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.

ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.

ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.

ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”

ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು

Continue Reading

LATEST NEWS

Trending