Monday, January 24, 2022

ಸಾಮಾಜಿಕ ಕಾರ್ಯಕರ್ತ ತ್ವಾಹಿರ್ ಇಸ್ಮಾಯಿಲ್ ನಿಧನ: ಎಸ್‌ಡಿಪಿಐ ಸಂತಾಪ

ಮಂಗಳೂರು: ಇತ್ತೀಚೆಗೆ ನಿಧನರಾದ ಸಾಮಾಜಿಕ ಕಾರ್ಯಕರ್ತ ತ್ವಾಹಿರ್ ಇಸ್ಮಾಯಿಲ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿದ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ತ್ವಾಹಿರ್ ಉದ್ಯಮಿ ಆಗಿದ್ದು, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

ಇವರ ನಿಧನ ಸಮಾಜ ಮತ್ತು ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ಎಸ್‌ಡಿಪಿಐ ಪಕ್ಷದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ತ್ವಾಹಿರ್ ಪಕ್ಷದ ಹಿತವನ್ನು ಬಯಸುವವರಾಗಿದ್ದರು.

ಯಾವಾಗಲೂ ಸಮಾಜದ ಒಳಿತನ್ನು ಬಯಸುತ್ತಿದ್ದ ಇವರ ಸತ್ಕಾರ್ಯವನ್ನು ಜಗದೊಡೆಯ ಸ್ವೀಕರಿಸಲಿ ಹಾಗೂ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಇವರ ಕುಟುಂಬ, ಬಂಧು ಬಳಗಕ್ಕೆ ಸೃಷ್ಠಿಕರ್ತ ನೀಡಲಿ ಮತ್ತು ಇವರ ಪರಲೋಕ ಜೀವನವು ಸಮೃದ್ಧಿಯಿಂದ ಕೂಡಿರಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...