ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಸ್ಟೇಬಲ್ ಜಗನ್ನಾಥ ಇಂದು ಅವರು ಹೃದಯಾಘಾತದಿಂದ ಮರಣ ಹೊಂದಿದ ವಿಚಾರ ತಿಳಿದು ಬಹಳ ಅಘಾತವಾಯಿತು.
ಕೊಣಾಜೆ ಪೊಲೀಸ್ ಸ್ಟೇಷನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ರವರು ಎಲ್ಲರೊಂದಿಗೂ ಬಹಳ ಆತ್ಮೀಯರಾಗಿದ್ದರು. ಸ್ನೇಹಜೀವಿಯಾಗಿದ್ದುಕೊಂಡು ಜನಸ್ನೇಹಿ ಪೋಲಿಸ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದವರು.
ಜಗನ್ನಾಥ್ (44) ರವರು ಮೂಲತ: ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಇವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಇವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು SDPI ಮಂಗಳೂರು ವಿಧಾನಸಭಾ ಸಮಿತಿಯ ಕಾರ್ಯದರ್ಶಿ ಝಾಹಿದ್ ಮಲಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.