Connect with us

DAKSHINA KANNADA

ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಬಂಧನಕ್ಕೊಳಗಾದ ಆಸಿಫ್ ಆಪತ್ಭಾಂದವರನ್ನು ಕೂಡಲೇ ಬಿಡುಗಡೆಗಾಗಿ ಮಂಗಳೂರು ಪೋಲಿಸ್ ಕಮಿಷನರ್ ರನ್ನು ಭೇಟಿಯಾದ SDPI ನಿಯೋಗ

Published

on

ಮಂಗಳೂರು : ಸುರತ್ಕಲ್ ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಸ್ಥಳೀಯ ಜನಪರ ಹೋರಾಟಗಾರ ಆಸಿಫ್ ಆಪತ್ಭ್ಬಾಂದವ ರವರು ಟೋಲ್‌ಗೇಟ್ ಪಕ್ಕದಲ್ಲಿ ನ್ಯಾಯಯುತವಾಗಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದು, ದಿನ ಕಳೆದಂತೆ ಹೋರಾಟಕ್ಕೆ ಸಾರ್ವಜನಿಕರಿಂದ ಮತ್ತು ಸಂಘ ಸಂಸ್ಥೆಗಳಿಂದ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಇಂದು ಧಿಡೀರಾಗಿ ಸುಳ್ಳು ಕೇಸನ್ನು ಧಾಖಲಿಸಿ ಪೋಲಿಸ್ ಅಧಿಕಾರಿಗಳು ಅವರನ್ನು ಬಂಧಿಸಿರುತ್ತಾರೆ.

ಈ ಬಗ್ಗೆ ನಮ್ಮ ಆಕ್ಷೇಪವಿದ್ದು, ಸಂವಿಧಾನ ಬದ್ಧವಾಗಿ ಹೋರಾಟ ನಡೆಸುತ್ತಿದ್ದ ಆಸಿಫ್ ಆಪತ್ಭಾಂದವರನ್ನು ಬಂಧಿಸಿದ್ದಲ್ಲದೇ ಅವರು ಪ್ರತಿಭಟಣೆ ನಡೆಸಲು ಬಳಸುತ್ತಿದ್ದ ಶೆಡ್ಡನ್ನು ಪೋಲಿಸರು ದ್ವಂಸಗೊಳಿಸಿರುತ್ತಾರೆ. ಈ ಘಟನೆಯನ್ನು SDPI ಖಂಡಿಸುತ್ತದೆ.

ಬಂಧನಕ್ಕೊಳಗಾದ ಆಸಿಫ್ ಆಪತ್ಭಾಂದವರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಪ್ರತಿಭಟನೆ ನಡೆಸುತ್ತಿದ್ದ ಸಂಧರ್ಭದಲ್ಲಿ ಯಾರದೋ ಕುಮ್ಮಕ್ಕಿನಿಂದ ಆಸಿಫ್ ಹಾಗೂ ಅವರ ತಂಡದ ಮೇಲೆ ದಾಳಿ ನಡೆಸಲು ಬಂದ ತೃತೀಯ ಲಿಂಗಿಗಳ ಮೇಲೆ ಮತ್ತು ಅದಕ್ಕೆ ಪ್ರತಿಯಾಗಿ ಆಸಿಫ್ ರವರ ಮೇಲೆ ದಾಖಲಾದ ದೂರುಗಳನ್ನು ಹಿಂಪಡೆಯಬೇಕು.

ಅವೈಜ್ಞಾನಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಸುರತ್ಕಲ್ ಮತ್ತು ಬ್ರಹ್ಮರಕೊಟ್ಲು ಟೋಲ್ ಗೇಟ್ ಅನ್ನು ರದ್ದು ಪಡಿಸಿ ವಾಹನ ಸವಾರರಿಗೆ ಮುಕ್ತವಾಗಿ ಸಂಚರಿಸಲು ಅವಕಾಶ ಕಲ್ಪಿಸಬೇಕು. ನ್ಯಾಯಯುತವಾಗಿ ಹೋರಾಟ ನಡೆಸುವ ಹೋರಾಟಗಾರರನ್ನು ಬಂಧಿಸುವ ಜಿಲ್ಲಾಡಳಿತ, ಪೋಲಿಸ್ ಇಲಾಕೆಯ ಇಂತಹಾ ಕ್ರಮವನ್ನು ಕೊನೆಗೊಳಿಸಬೇಕೆಂದು ನಿಯೋಗವು ಈ ಮೂಲಕ ಒತ್ತಾಯಿಸಿತು.

ನಿಯೋಗದಲ್ಲಿ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಮಂಗಳೂರು ಉತ್ತರ ಕ್ಷೇತ್ರಧ್ಯಕ್ಷರಾದ ಯಾಸೀನ್ ಅರ್ಕುಳ, ಮೈಮುನಾ ಫೌಂಡೇಶನ್‌ನ , ದಾವೂದ್, ತೌಸೀಫ್ ರವರು ಉಪಸ್ಥಿತರಿದ್ದರು.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending