LATEST NEWS
ಕಿರಿಕ್ ಕೀರ್ತಿ, ಮಹೇಶ್ ವಿಕ್ರಂ ಹೆಗ್ಡೆ ವಿರುದ್ಧ ಎಸ್ಡಿಪಿಐನಿಂದ ದೂರು
ಮಂಗಳೂರು: ನಕಲಿ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿನಿಯ ಪಾತ್ರವನ್ನು ಸೃಷ್ಟಿಸಿ ಎರಡು ಸಮುದಾಯವನ್ನು ಎತ್ತಿಕಟ್ಟುವ, ಅಶಾಂತಿ ಸೃಷ್ಟಿಸಿ ಪ್ರಚೋದನೆಗೊಳಪಡಿಸುವ,
ಧರ್ಮವನ್ನು ಅವಮಾನಿಸುವ ಅಪರಾಧ ಮಾಡಿರುವ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ,
ಮಹೇಶ್ ವಿಕ್ರಂ ಹೆಗ್ಡೆ ಮತ್ತು ಅನಾಮಿಕ ಬುರ್ಖಾಧಾರಿ ನಕಲಿ ಮಹಿಳೆಯ ವಿರುದ್ಧ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಫೆ. 18 ರಂದು ಟಿವಿ ವಿಕ್ರಮ (TV VIKRAMA) ಎಂಬ ಅನಧಿಕೃತ ಯೂಟ್ಯೂಬ್ ಅಕೌಂಟ್ ನಲ್ಲಿ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ ಎಂಬ ವ್ಯಕ್ತಿಯು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಸಂದರ್ಶನ ಮಾಡುವ ವಿಡಿಯೋ ವನ್ನು ಪ್ರಸಾರ ಮಾಡಲಾಗಿದೆ.
ಸದ್ರಿ ವಿಡಿಯೊದ ಮೊದಲಿಗೆ ಚಿಕ್ಕದಾಗಿ ಕಾಲ್ಪನಿಕ ಎಂದು ಬರೆದುಕೊಂಡು ಸಂದರ್ಶನದ ಮಧ್ಯ ಭಾಗದಲ್ಲಿ ನಕಲಿ ಮುಸ್ಲಿಂ ವಿದ್ಯಾರ್ಥಿನಿ ಬುರ್ಖಾ ಮತ್ತು ಹಲ್ಲಿನ ಚಿಕಿತ್ಸೆ ಬಗ್ಗೆ ಹೇಳಲಾದ ಮಾತುಗಳನ್ನು ತುಂಡರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.
ಇದೇ ವಿಡಿಯೋವನ್ನು ಈ ಅನಧಿಕೃತ ಯೂಟ್ಯೂಬ್ ಅಕೌಂಟ್ ನ ಸೃಷ್ಟಿಕರ್ತ ಮಹೇಶ್ ವಿಕ್ರಂ ಹೆಗ್ಡೆ ಕೂಡಾ ಹಂಚಿಕೊಂಡಿದ್ದಾರೆ.
ಈ ವಿಡಿಯೊದಿಂದ ಧರ್ಮನಿಂದನೆ ಆಗಿರುವುದಲ್ಲದೇ, ಎರಡು ಧರ್ಮಗಳ ಮಧ್ಯೆ ಅಪನಂಬಿಕೆ, ಗೊಂದಲ, ಅಸಹಜ ಅಶಾಂತಿ ಉಂಟಾಗಿದೆ.
ಹಿಜಾಬ್ ವಿವಾದ ಹೈಕೋರ್ಟಿನಲ್ಲಿ ವಿಚಾರಣೆಯಲ್ಲಿರುವ ದಿನಗಳಲ್ಲಿ ಧರ್ಮವನ್ನು ಬಳಸಿ ಗಲಭೆ ಸೃಷ್ಟಿಸುವ ಉದ್ದೇಶದಿಂದ ಮಹಿಳೆಯೊಬ್ಬಳಿಗೆ ಬುರ್ಖಾ ತೊಡಿಸಿ ನಕಲಿ ಮುಸ್ಲಿಂ ಮಹಿಳೆಯನ್ನು ಸೃಷ್ಟಿಸಿ ಗಲಭೆ,
ಅಶಾಂತಿ ಸೃಷ್ಟಿಸಲು ಪ್ರಚೋದನೆ ಮಾಡಲಾಗಿದೆ. ಈ ಮೂವರು ಆರೋಪಿಗಳನ್ನು ಬಂಧಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ದೂರು ಸಲ್ಲಿಸಿದರು. ಎಸ್.ಡಿ.ಟಿ.ಯು ಸಂಘಟನೆಯ ರಾಜ್ಯ ನಾಯಕ ಶರೀಫ್ ಪಾಂಡೇಶ್ವರ ಉಪಸ್ಥಿತರಿದ್ದರು.
LATEST NEWS
ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!
ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ. ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ
ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.
ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು
‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.
LATEST NEWS
ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ
ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!
ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- BANTWAL7 days ago
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!