DAKSHINA KANNADA
ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡಲು ಶಾಲೆಗೆ ರಜೆ ಕೊಟ್ಟು ಹಬ್ಬದ ಕಾರಣ ನೀಡಿದ ಜಿಲ್ಲಾಡಳಿತ: SDPI
Published
2 years agoon
By
Adminಮಂಗಳೂರು: ಸೆ. 2 ರಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಸರಕಾರಿ ಆದೇಶ ಹೊರಡಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅನಗತ್ಯ ವಿವಾದವನ್ನು ಉಂಟು ಮಾಡುವ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.
ಆಗಸ್ಟ್ 31 ರಂದು ಗಣೇಶ್ ಚತುರ್ಥಿಗೆ ಸರಕಾರಿ ರಜೆ ಇದ್ದರೂ ಪುನಃ ಸೆ. 2 ಗಣಪತಿ ವಿಸರ್ಜನೆ ಹೆಸರಿನಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿರುವುದು ಪ್ರಧಾನಿ ಮೋದಿ ಸಭೆಗೆ ಜನ ಸೇರಿಸಲು ನಡೆಸಿದ ಷಡ್ಯತ್ರದ ಭಾಗವಾಗಿದೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಆರೋಪಿಸಿದ್ದಾರೆ.
ಗಣಪತಿಯನ್ನು ವಿಸರ್ಜನೆ ಮಾಡಲು ನಿರ್ಧಿಷ್ಟ ದಿನ ಎಂಬುದಿಲ್ಲ. ಗಣೇಶ ಚತುರ್ಥಿ ಆರಂಭಗೊಂಡ ಅಂದಿನಿಂದ ಸುಮಾರು ಹತ್ತು ದಿನಗಳ ಕಾಲ ಬೇರೆ ಬೇರೆ ದಿನಗಳಲ್ಲಿ ಅದನ್ನು ವಿಸರ್ಜನೆ ಮಾಡುವ ಸಂಪ್ರದಾಯ ಅನಾದಿ ಕಾಲದಿಂದಲೂ ನಡೆದು ಬಂದ ಸಂಪ್ರದಾಯವಾಗಿದೆ.
ಒಂದು ವೇಳೆ ಶೋಭಾ ಯಾತ್ರೆಗೆ ಜನದಟ್ಟಣೆ ಅಧಿಕ ಇರಬಹುದು ಎಂದಾದರೆ ಎಲ್ಲಾ ಧರ್ಮಗಳ ಹಬ್ಬಗಳ ಸಂದರ್ಭದಲ್ಲಿ ವಿಶೇಷ ರಜೆ ಘೋಷಣೆ ಮಾಡುತ್ತೀರಾ?,
ಜಿಲ್ಲಾಡಳಿತವೇ ಹೇಳಿದ ಹಾಗೆ ಜನದಟ್ಟಣೆ ಜಾಸ್ತಿಯಾಗಿ ಇರುತ್ತದೆ ಎಂದಾದರೆ ಪ್ರಧಾನಿ ಕಾರ್ಯಕ್ರಮದ ಸಂದರ್ಭದಲ್ಲಿ ಭದ್ರತೆ ದ್ರಷ್ಠಿಯಿಂದ ಶೋಭಾ ಯಾತ್ರೆಗೆ ಅಂದು ಅನುಮತಿ ಯಾಕೆ ಕೊಟ್ಟದ್ದು.
ಒಂದು ವೇಳೆ ಅಂದು ಶೋಭಾ ಯಾತ್ರೆ ನಡೆಸಬೇಕು ಎಂಬುದು ಕಡ್ಡಾಯ ಆಗಿದ್ದಲ್ಲಿ ಆ ಕಾರಣದಿಂದ ಪ್ರಧಾನಿ ಕಾರ್ಯಕ್ರಮವನ್ನು ಮುಂದೂಡಲು ಸಾದ್ಯವಿರಲಿಲ್ಲವೇ, ಮಂಗಳೂರಿನಲ್ಲಿ ಅದೆಷ್ಟೋ ವರ್ಷಗಳಿಂದ ನೂರಾರು ಕಡೆಗಳಲ್ಲಿ ಅದ್ದೂರಿಯಾಗಿ ಗಣೇಶೋತ್ಸವ ನಡೆಯುತ್ತಿದೆ ಆ ಹೆಸರಿನಲ್ಲಿ ಎಂದಾದರೂ ಶಾಲಾ ಕಾಲೇಜುಗಳಿಗೆ ರಜೆ ನೀಡಿದ ಇತಿಹಾಸ ಇದೆಯಾ ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟ ಪಡಿಸಬೇಕು.
ಸೆಪ್ಟೆಂಬರ್ ಎರಡನೇ ತಾರೀಕಿನಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಭಾಗವಹಿಸಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಡಿಮೆ ಜನ ಸೇರಬಹುದು ಎಂಬ ಭಯದಿಂದ ಬಿಜೆಪಿ ನಾಯಕರು
ಅಧಿಕಾರ ಯಂತ್ರವನ್ನು ದುರುಪಯೋಗ ಪಡಿಸಿಕೊಂಡು ಜಿಲ್ಲಾಡಳಿತದ ಮೇಲೆ ಒತ್ತಡ ಹೇರಿ ಸ್ತ್ರೀ ಶಕ್ತಿ ಮಹಿಳಾ ಸಂಘಟನೆಯ ಎಲ್ಲರೂ ಕಡ್ಡಾಯ ಬಾಗವಹಿಸಲು ಆದೇಶ ಹೊರಡಿಸಿತ್ತು ಇದರ ಮುಂದುವರಿದ ಭಾಗವಾಗಿ ಗಣೇಶ ವಿಸರ್ಜನೆ ನೆಪದಲ್ಲಿ ಮಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವುದು ಸರಿಯಲ್ಲ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಲ್ಡಪ್ ಕೊಡುವ ಏಕೈಕ ಉದ್ದೇಶದಿಂದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುತ್ತಿರುವ ಬಿಜೆಪಿ ಸರಕಾರದ ನಿಲುವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ.
ಈ ವರ್ಷ ಸುರಿದ ಮಳೆ ಹಾಗೂ ಅತಿವೃಷ್ಟಿ ಕಾರಣದಿಂದ ಈಗಾಗಲೇ ಹಲವಾರು ದಿನ ಶಾಲಾ ಕಾಲೇಜುಗಳಿಗೆ ಅನಿವಾರ್ಯವಾಗಿ ರಜೆ ನೀಡಲಾಗಿದೆ.
ಇದೀಗ ಬಿಜೆಪಿ ಪಕ್ಷದ ರಾಜಕೀಯ ಉದ್ದೇಶಗಳಿಗಾಗಿ ಕ್ಷುಲ್ಲಕ ಕಾರಣಗಳನ್ನು ನೀಡಿ ಅನಗತ್ಯ ರಜೆ ನೀಡಿದರೆ ಅದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಅದ್ದರಿಂದ ಜಿಲ್ಲಾಡಳಿತ ಕೂಡಲೇ ಈ ಸುತ್ತೋಲೆಯನ್ನು ವಾಪಾಸು ಪಡೆಯಬೇಕೆಂದು ಅನ್ವರ್ ಸಾದತ್ ಬಜತ್ತೂರು ಒತ್ತಾಯಿಸಿದ್ದಾರೆ.
BIG BOSS
ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್
Published
10 minutes agoon
23/11/2024ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
BIG BOSS
ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ
Published
26 minutes agoon
23/11/2024ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.
ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.
ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?