Connect with us

    LATEST NEWS

    ಎಸ್.ಡಿ.ಪಿ.ಐ  ಮುಖಂಡ ರಿಯಾಝ್ ಉದ್ರೇಕಕಾರಿ ಹೇಳಿಕೆ ;ಹಿಂಜಾವೇ ದೂರು ನಿರ್ಲಕ್ಷ್ಯಕ್ಕೆ ಆಕ್ರೋಶ..!

    Published

    on

    ಎಸ್.ಡಿ.ಪಿ.ಐ  ಮುಖಂಡ ರಿಯಾಝ್ ಉದ್ರೇಕಕಾರಿ ಹೇಳಿಕೆ ;ಹಿಂಜಾವೇ ದೂರು ನಿರ್ಲಕ್ಷ್ಯಕ್ಕೆ ಆಕ್ರೋಶ..!

    SDPI leader Riaz makes an angry statement;VHP Outrage over neglect of complaint..

    ಮಂಗಳೂರು: ಎಸ್.ಡಿ.ಪಿ.ಐ. ಮುಖಂಡ ರಿಯಾಝ್ ಫರಂಗಿಪೇಟೆ ಪದೇ ಪದೇ ನೀಡಿರುವ ಹೇಳಿಕೆಗಳ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ದೂರು ನೀಡಲಾಗಿದ್ದು,  ಇಲಾಖೆ  ಇನ್ನೂ ಕ್ರಮ ಕೈಗೊಂಡಿಲ್ಲ.

    ರಿಯಾಝ್ ಫರಂಗಿಪೇಟೆಯನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟಕ್ಕೆ ನಾವು ತಯಾರಿದ್ದೇವೆ ಎಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕ ಹೇಳಿದೆ.

    ಬಂಟ್ವಾಳ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ಜಿಲ್ಲಾ ಹಿಂಜಾವೇ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಹಿಂಜಾವೇ ರಾಜ್ಯ ಗೌರವಾಧ್ಯಕ್ಷ ವಜ್ರದೇಹಿ ಸ್ವಾಮೀಜಿ ಸಹಿತ ಹಿಂದು ಮುಖಂಡರನ್ನು ಗುರಿಯಾಗಿಸಿಕೊಂಡು ರಿಯಾಝ್ ಭಾಷಣಗಳನ್ನು ಮಾಡುತ್ತಿದ್ದು,  ಇದರಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದಂತಾಗುತ್ತದೆ.

    ಇದರ ವಿರುದ್ಧ  ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದೇವೆ. ಆದರೆ ಪೊಲೀಸರು ಇನ್ನೂ ಸೂಕ್ತ ಕ್ರಮ ಕೈಗೊಂಡಿಲ್ಲ. ವಿಳಂಬ ನೀತಿ  ಅನುಸರಿಸಿದರೆ, ಹೋರಾಟಕ್ಕೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

    ಮುಂದಿನ ದಿನಗಳಲ್ಲಿ ಈತ ಇದೇರೀತಿ ಸಂಘಪರಿವಾರದ ನಾಯಕರನ್ನು ಸಂಘರ್ಷಕ್ಕೆ ಆಹ್ವಾನ ನೀಡುವ ಹೇಳಿಕೆನ್ನು ಮುಂದುವರಿಸಿದಲ್ಲಿ ಹಿಂ.ಜಾ.ವೇ.ಯ ಕಾರ್ಯಕರ್ತರು ಕೂಡ ಸೂಕ್ತ ಉತ್ತರ ನೀಡಲಿದ್ದು, ಈ ಸಂದರ್ಭದಲ್ಲಿ ಅಗಬಹುದಾದ ಯಾವುದೇ ಅನಾಹುತಕ್ಕೆ  ಪೊಲೀಸ್ ಇಲಾಖೆಯೇ ಕಾರಣವಾಗಲಿದೆ ಎಂದು ಎಚ್ಚರಿಸಿದರು.

    ಇದೇ ವೇಳೆ ಜಿಲ್ಲೆಯಲ್ಲಿ ವಿವಿಧೆಡೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳನ್ನು ಅವರು ಖಂಡಿಸಿದರು. ಮಂಗಳೂರು ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ, ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಬಂಟ್ವಾಳ ತಾಲೂಕು ಸಂಪರ್ಕ ಪ್ರಮುಖ್ ರವಿ ಕೆಂಪುಗುಡ್ಡೆ ಉಪಸ್ಥಿತರಿದ್ದರು..

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending