ಎಸ್.ಡಿ.ಪಿ.ಐ ಮುಖಂಡ ರಿಯಾಝ್ ಉದ್ರೇಕಕಾರಿ ಹೇಳಿಕೆ ;ಹಿಂಜಾವೇ ದೂರು ನಿರ್ಲಕ್ಷ್ಯಕ್ಕೆ ಆಕ್ರೋಶ..!
SDPI leader Riaz makes an angry statement;VHP Outrage over neglect of complaint..
ಮಂಗಳೂರು: ಎಸ್.ಡಿ.ಪಿ.ಐ. ಮುಖಂಡ ರಿಯಾಝ್ ಫರಂಗಿಪೇಟೆ ಪದೇ ಪದೇ ನೀಡಿರುವ ಹೇಳಿಕೆಗಳ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ದೂರು ನೀಡಲಾಗಿದ್ದು, ಇಲಾಖೆ ಇನ್ನೂ ಕ್ರಮ ಕೈಗೊಂಡಿಲ್ಲ.
ರಿಯಾಝ್ ಫರಂಗಿಪೇಟೆಯನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟಕ್ಕೆ ನಾವು ತಯಾರಿದ್ದೇವೆ ಎಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕ ಹೇಳಿದೆ.
ಬಂಟ್ವಾಳ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ಜಿಲ್ಲಾ ಹಿಂಜಾವೇ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಹಿಂಜಾವೇ ರಾಜ್ಯ ಗೌರವಾಧ್ಯಕ್ಷ ವಜ್ರದೇಹಿ ಸ್ವಾಮೀಜಿ ಸಹಿತ ಹಿಂದು ಮುಖಂಡರನ್ನು ಗುರಿಯಾಗಿಸಿಕೊಂಡು ರಿಯಾಝ್ ಭಾಷಣಗಳನ್ನು ಮಾಡುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದಂತಾಗುತ್ತದೆ.
ಇದರ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದೇವೆ. ಆದರೆ ಪೊಲೀಸರು ಇನ್ನೂ ಸೂಕ್ತ ಕ್ರಮ ಕೈಗೊಂಡಿಲ್ಲ. ವಿಳಂಬ ನೀತಿ ಅನುಸರಿಸಿದರೆ, ಹೋರಾಟಕ್ಕೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಈತ ಇದೇರೀತಿ ಸಂಘಪರಿವಾರದ ನಾಯಕರನ್ನು ಸಂಘರ್ಷಕ್ಕೆ ಆಹ್ವಾನ ನೀಡುವ ಹೇಳಿಕೆನ್ನು ಮುಂದುವರಿಸಿದಲ್ಲಿ ಹಿಂ.ಜಾ.ವೇ.ಯ ಕಾರ್ಯಕರ್ತರು ಕೂಡ ಸೂಕ್ತ ಉತ್ತರ ನೀಡಲಿದ್ದು, ಈ ಸಂದರ್ಭದಲ್ಲಿ ಅಗಬಹುದಾದ ಯಾವುದೇ ಅನಾಹುತಕ್ಕೆ ಪೊಲೀಸ್ ಇಲಾಖೆಯೇ ಕಾರಣವಾಗಲಿದೆ ಎಂದು ಎಚ್ಚರಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿ ವಿವಿಧೆಡೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳನ್ನು ಅವರು ಖಂಡಿಸಿದರು. ಮಂಗಳೂರು ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ, ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಬಂಟ್ವಾಳ ತಾಲೂಕು ಸಂಪರ್ಕ ಪ್ರಮುಖ್ ರವಿ ಕೆಂಪುಗುಡ್ಡೆ ಉಪಸ್ಥಿತರಿದ್ದರು..