Connect with us

    LATEST NEWS

    “SDPIಯನ್ನು ಟಾರ್ಗೆಟ್‌ ಮಾಡ್ತಿರುವ ಕಮೀಷನರ್‌ ಮತ್ತು ಪೊಲೀಸ್ರನ್ನ ಸುಮ್ನೇ ಬಿಡುವುದಿಲ್ಲ”

    Published

    on

    ಮಂಗಳೂರು: ಪೊಲೀಸರನ್ನು ಅವಾಚ್ಯ ನಿಂದಿಸಿದ ಪ್ರಕರಣದಲ್ಲಿ ಅನಾವಶ್ಯಕವಾಗಿ ಸಂಬಂಧಪಡದ ವ್ಯಕ್ತಿಗಳನ್ನು ಪೊಲೀಸ್‌ ಇಲಾಖೆ ಬಂಧಿಸುತ್ತಿದೆ.

    ಈ ಮೂಲಕ ಪೊಲೀಸ್‌ ಆಯುಕ್ತರ ತಂಡ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಈ ಬಗ್ಗೆ ಮಾನವಹಕ್ಕು ಆಯೋಗ ಮತ್ತು ಖಾಸಗಿ ದೂರು ದಾಖಲಿಸಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಪೊಲೀಸ್‌ ಇಲಾಖೆಯ ಮೇಲೆ ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಈ ಬಗ್ಗೆ ಎಸ್‌ಡಿಪಿಐ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿದ್ದನ್ನು ಎಸ್‌ಡಿಪಿಐ ಖಡಾಖಂಡಿತವಾಗಿ ಖಂಡಿಸುತ್ತೇವೆ. ಇದು ನಾಗರಿಕ ಸಮಾಜ ಒಪ್ಪುವ ವಿಚಾರವಲ್ಲ.

    ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿದ ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಿ ಅದನ್ನು ಎಸ್‌ಡಿಪಿಐ ಪ್ರಶ್ನಿಸುವುದಿಲ್ಲ.

    ಬದಲಾಗಿ ಈ ಘಟನೆ ನಂತರ ಪೊಲೀಸ್‌ ಇಲಾಖೆ ಎಸ್‌ಡಿಪಿಐ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದೆ.

    ಆದರೆ 3-4 ಬೆರಳೆಣಿಯ ಮಂದಿಯ ತಪ್ಪಿಗಾಗಿ ಸಂಬಂಧವೇ ಇಲ್ಲದ 10ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ ಎಂದರು.

    ಈ ಹಿಂದೆ ಜಿಲ್ಲಾಧಿಕಾರಿಯನ್ನೇ ಕಾಲರ್‌ ಪಟ್ಟಿ ಹಿಡಿಯುತ್ತೇವೆ ಎಂದ ಹಾಗೂ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ತವ್ಯನಿರತ ಸಬ್‌ಇನ್ಸ್‌ಪೆಕ್ಟರ್‌ನನ್ನು ‘ನಿನ್ನ ತಲೆಬೋಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡುತ್ತೇನೆಂದ’ ಸಂಘಪರಿವಾರದ ಜಗದೀಶ್‌ ಕಾರಂತನನ್ನು ಇವತ್ತಿನವರೆಗೂ ಬಂದಿಸಲು ಸಾಧ್ಯವಿಲ್ಲ.

    ಜೊತೆಗೆ ಪೂಂಜಾಲಕಟ್ಟೆಯ ಸೌಮ್ಯ ಎಂಬ ಮಹಿಳಾ ಸಬ್‌ಇನ್ಸ್‌ಪೆಕ್ಟರ್‌ ಅವರ ಕಾಲು ಮುರಿಯುತ್ತೇನೆ ಎಂದ ಸಂಘಪರಿವಾರದ ಗೂಂಡಾನನ್ನು ಬಂಧಿಸಿಲ್ಲ. ಡಿಸಿ ಕಾಲರ್‌ ಪಟ್ಟಿ ಹಿಡಿಯುತ್ತೇನೆ ಎನ್ನುವ ಪ್ರಕರಣದಲ್ಲಿ ಖುದ್ದು ಡಿಸಿ ದೂರು ನೀಡಿದ್ದಾರೆ ಆದರೂ ಇನ್ನೂ ಬಂಧಿಸಿಲ್ಲ.

    ಆದರೆ ಪೊಲೀಸ್‌ ನಿಂದನೆ ಪ್ರಕರಣದಲ್ಲಿ ಸಂಬಂಧವೇ ಇರದವರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಇದು ಪೊಲೀಸರ ತಾರತಮ್ಯ ನೀತಿ ತೋರಿಸುತ್ತದೆ.
    ಈ ಪ್ರಕರಣದಲ್ಲಿ ಜೊತೆಗೆ ಇದೇ ಪ್ರಕರಣದ ಎಫ್‌ಐಆರ್‌ನಲ್ಲಿ ಪೊಲೀಸರು ಕರ್ತವ್ಯಕ್ಕೆ ಅಡ್ಡಿ ಎಂಬ ಚಂದಮಾಮ ಕಥೆ ಕಟ್ಟಿದ್ದಾರೆ.

    ಪೊಲೀಸ್‌ ಆಯುಕ್ತರ ತಂಡ ಈ ರೀತಿಯ ನೀಚ ಕೆಲಸಕ್ಕಿಳಿದಿದ್ದಾರೆ. ಇದು ನಿಮಗೆ ಶೋಭೆ ತರುವುದಿಲ್ಲ ಎಂದ ಅವರು ನಿಮಗೆ ಸಂಘಪರಿವಾರದವರು ಸಂಬಳ ಕೊಡೋದಾ? ಅಥವಾ ನಮ್ಮ ತೆರಿಗೆಯಿಂದ ಸಂಬಳ ಕೊಡುದಾ? ಎಂದು ಪ್ರಶ್ನಿಸಿದರು.

    ಕತ್ತು ಸೀಳ್ತೇನೆ, ಕೊಲೆ ಮಾಡ್ತೇನೆ, ತಲೆ ತೆಗಿತೇನೆ ಎನ್ನುವ ಕ್ರಿಮಿನಲ್‌ ಆರೋಪಿ ಪ್ರಮೋದ್‌ ಮುತಾಲಿಕ್‌ಗೆ ಮಂಗಳೂರಿನ ಕಮೀಷನರ್‌ ಕಚೇರಿಗೆ ಕರೆಸಿ ರಾಜಮರ್ಯಾದೆ ನೀಡಿದ್ದಾರೆ.

    ಅದನ್ನು ನಮ್ಮ ಮುಖಂಡರು ವಿರೋಧಿಸಿದ್ದಕ್ಕೆ ಕಮೀಷನರ್‌ ಹಾಗೂ ಕೆಲ ಪೊಲೀಸ್‌ ಅಧಿಕಾರಿಗಳು ಎಸ್‌ಡಿಪಿಐನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದರು.

    ಈ ಪ್ರಕರಣದಲ್ಲಿ ಸಂಬಂಧವಿರದ ಯುವಕರನ್ನು ಬಂಧಿಸಿದರೆ ನಾವು ಕೈಕಟ್ಟಿ ಕೂರುವುದಿಲ್ಲ. ಮಾನವ ಹಕ್ಕುಗಳ ಆಯೋಗ ಹಾಗೂ ಖಾಸಗಿ ದೂರು ದಾಖಲಿಸಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ.

    ಬಜ್ಪೆ ಎಳನೀರು ವ್ಯಾಪಾರಿಗೆ ಥಳಿತ ಪ್ರಕರಣದಲ್ಲಿ ಆಯುಕ್ತರು ರಾಜಕೀಯ ಒತ್ತಡಕ್ಕೆ ಬಜ್ಪೆ ಠಾಣೆಯ ಇನ್ಸ್‌ಪೆಕ್ಟರ್‌ನನ್ನು ಸಸ್ಪೆಂಡ್‌ ಮಾಡಿದ್ದಾರೆ. ಇದೇ ಸಂಸದರು ಇನ್ಸ್‌ಪೆಕ್ಟರ್‌ ಮಾರುತಿ ನಾಯ್ಕ್‌ ಅವರನ್ನು ಏಕವಚನದಲ್ಲಿ ಬೈದಿದ್ದಾರೆ.

    ಆಗ ನಿಮ್ಮ ಈ ಕಾನೂನು ಚಾಲ್ತಿಗೆ ಬರುವುದಿಲ್ಲ ಎಂದರು.
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಅಕ್ಬರ್ ಬೆಳ್ತಂಗಡಿ, ಇರ್ಷಾದ್ ಅಜ್ಜಿನಡ್ಕ ಇದ್ದರು.

    LATEST NEWS

    ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮೃ*ತ್ಯು

    Published

    on

    ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

    ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃ*ತರು ಎಂದು ಗುರುತಿಸಲಾಗಿದೆ.

    ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ವಿಡಿಯೋ ನೋಡಿ:

    Continue Reading

    LATEST NEWS

    ಭರ್ಜರಿ ಶಾಕ್ ಕೊಟ್ಟ ಕೇಂದ್ರ ಸರ್ಕಾರ ! ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ !

    Published

    on

    ಮಂಗಳೂರು/ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.


    ವಿಂಡ್​ಫಾಲ್ ಟ್ಯಾಕ್ಸ್ ಎಂದರೇನು ?
    ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್​ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.

    ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್​ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.

    Continue Reading

    LATEST NEWS

    ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ

    Published

    on

    ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ‌ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.

    ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್‌ಗೆ ಆಟೋಗ್ರಾಫ್‌ನ್ನು ಸಹ ನೀಡಿದರು. ಇದೇ ವೇಳೆ ಅವನಿ ಲೆಖರಾ ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅಲ್ಲದೇ ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

    ಮಂಗಳವಾರ ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ಗಳು, ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ಗೆ ತೆರಳಿತ್ತು.

    ಕ್ರೀಡಾಪಟುಗಳ ಜೊತೆ ಮೋದಿ ಮಾತುಕತೆ ನಡೆಸಿದ ವೇಳೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಿಸಿಐ ಅಧ್ಯಕ್ಷ ದೇವೇಂದ್ರ ಜಜಾರಿಯಾ ಇದ್ದರು.

    Continue Reading

    LATEST NEWS

    Trending