Connect with us

DAKSHINA KANNADA

ಜಿಲ್ಲೆಯಲ್ಲಿ ಸಂಘ ಪರಿವಾರದ ಪುಂಡಾಟಿ ನಿಯಂತ್ರಿಸಿ: SDPI ಎಚ್ಚರಿಕೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳ ಹಿಂದೆ ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರ ಕಾಣದ ಕೈಗಳು ಕೆಲಸ ಮಾಡುತ್ತಿದೆ.

ಹಲವಾರು ಸಮಯಗಳಿಂದ ಶಾಂತಿಯಿಂದ ಇದ್ದ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ರಾಜಕೀಯ ಮೈಲೇಜ್ ಗಳಿಸುವ ನಿಟ್ಟಿನಲ್ಲಿ ಕೋಮು ಭಾವನೆಗಳನ್ನು ಕೆರಳಿಸಿ

ತನ್ನ ಮತ ಬ್ಯಾಂಕ್ ಭದ್ರ ಗೊಳಿಸಲು ಬಿಜೆಪಿ ಮುಖಂಡರ ಅಣತಿಯಂತೆ ಕಿಡಿಗೇಡಿಗಳು ಸಮಾಜದ ಶಾಂತಿ ಕದಡುವ ದುಷ್ಕ್ರತ್ಯದಲ್ಲಿ ತೊಡಗಿ ಕೊಂಡಿದ್ದಾರೆ.

ಸರಕಾರ ಹಾಗೂ ಸಂಬಂದಪಟ್ಟ ಇಲಾಖೆ ಕೂಡಲೆ ಮಧ್ಯಪ್ರವೇಶಿಸಿ ಸಮಾಜ ವಿರೋಧಿ ಶಕ್ತಿಗಳನ್ನು ಹದ್ದು ಬಸ್ತಿನಲ್ಲಿಟ್ಟು ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು

SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಸರಕಾರ ಹಾಗೂ ಜಿಲ್ಲಾಡಳಿತದ ವನ್ನು ಒತ್ತಾಯಿಸಿದ್ದಾರೆ.

ಆಯುಧ ಪೂಜೆಯ ಹೆಸರಿನಲ್ಲಿ ಭಜರಂಗದಳದ ಮುಖಂಡರು ಹರಿತವಾದ ತ್ರಿಶೂಲಗಳನ್ನು ಹಂಚುವ ಮೂಲಕ ಸಂಘವರಿವಾರವು ಗಲಭೆ,

ಗುಂಪು ಘರ್ಷಣೆ, ಚೂರಿ ಇರಿತಕ್ಕೆ ಮುನ್ನುಡಿ ಬರೆದಿದೆ, ಅದರ ಮುಂದುವರಿದ ಭಾಗವಾಗಿ ಅನೈತಿಕ ಪೊಲೀಸ್ ಗಿರಿ ನಿತ್ಯ ನಿರಂತರವಾಗುತಿದೆ,

ಬೆಳ್ತಂಗಡಿ ತಾಲೂಕಿನ ಜಾರಿಗೆಬೈಲ್ ನಲ್ಲಿ ಅಮಾಯಕ ಮುಸ್ಲಿಂ ಸಹೋದರರಿಬ್ಬರ ಮೇಲೆ ಬಿಜೆಪಿ ಮುಖಂಡನಿಂದ ತಳುವಾರು ಮತ್ತು ತ್ರಿಶೂಲದಿಂದ ದಾಳಿ,

ಗಂಜೀಮಠದ ಮನಾಲದಲ್ಲಿ ಯುವಕನ ಮೇಲೆ ಹಲ್ಲೆ, ಮಂಗಳೂರಿನಲ್ಲಿ ಮುಸ್ಲಿಂ ಮಾಲಕತ್ವದ ಸಾರಿಗೆ ಬಸ್ಸಿನ ಮೇಲೆ ಕಲ್ಲು ತೂರಾಟ,

ಮಾಣಿಯಲ್ಲಿ ನಡೆದ ಅಪಘಾತ ವೊಂದನ್ನು ನೆಪವಾಗಿಸಿ ಮುಸ್ಲಿಂ ಯುವಕನ ಮೇಲೆ ಪೊಲೀಸರ ಸಮ್ಮುಖದಲ್ಲೇ ನಡೆದ ಗುಂಪು ಹಲ್ಲೆ,

ಪುತ್ತೂರು ತಾಲೂಕಿನ ಕೊಂಬೆಟ್ಟು ಸರಕಾರಿ ಕಾಲೇಜಿನಲ್ಲಿ ABVP ಹಾಗೂ ಸ್ಥಳೀಯ ಭಜರಂಗದಳದ ಗೂಂಡಾಗಳಿಂದ

ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ತ್ರಿಶೂಲ ದಾಳಿ ನಡೆದಿದ್ದು ಈ ಘಟನೆಯಿಂದ ದಾಳಿಗೊಳಗಾದ ವಿದ್ಯಾರ್ಥಿಗಳು,

ಯುವಕರು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಈ ಎಲ್ಲಾ ಘಟನೆಗಳು ಸಂಘಪರಿವಾರ

ಹಾಗೂ ಬಿಜೆಪಿ ನಾಯಕರ ಪೂರ್ವಯೋಚಿತ ಕ್ರತ್ಯವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಮತ್ತು ಜಿಲ್ಲೆಯಲ್ಲಿ ವ್ಯವಸ್ಥಿತ ಗಲಭೆಯ ಮುನ್ಸೂನೆಯೇ ಎಂದು ಎಸ್ಡಿಪಿಐ ಪ್ರಶ್ನಿಸುತ್ತದೆ.

ಆಯುಧ ಪೂಜೆಯ ಹೆಸರಿನಲ್ಲಿ ಭಜರಂಗದಳ ತ್ರಿಶೂಲ ದೀಕ್ಷೆ ನಡೆಸಿದಾಗಲೇ ಆಯೋಜಕರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು

ಎಂದು SDPI ಜಿಲ್ಲಾಡಳಿತದ ಮೇಲೆ ಒತ್ತಡ ಹೇರಿತ್ತು. ಆದರೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮ್ರಧು ದೋರಣೆಯ ಪರಿಣಾಮ ಇಂದು ಜಿಲ್ಲೆಯ ಜನತೆ ಅನುಭವಿಸುತ್ತಿದ್ದಾರೆ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಜವಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳೊಂದಿಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ

ಎಂಬ ಸಂಘಪರಿವಾರದ ಸಂಸ್ಕೃತಿಯಲ್ಲಿ ಮಾತನಾಡಿದ ನಂತರ ಜಿಲ್ಲೆಯಲ್ಲಿ ಬಹುತೇಕ ವ್ಯವಸ್ಥಿತ ರೀತಿಯಲ್ಲಿ ದಾಳಿಗಳು ನಡೆದಿದೆ.

ಜಿಲ್ಲೆಯ ಉನ್ನತ ಸ್ಥಾನದಲ್ಲಿರುವ ಮಾನ್ಯ ಜಿಲ್ಲಾಧಿಕಾರಿ ಗಳ ಕೊರಳ ಪಟ್ಟಿ ಹಿಡಿಯುತ್ತೇವೆ,

ಮಹಿಳಾ ಸಬ್ ಇನ್ಸ್ಪೆಕ್ಟರ್ ರವರ ಕಾಲು ಮುರಿಯುತ್ತೇವೆ ಎಂದು ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಹಿಂದೂ ಸಂಘಟನೆಯ ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವಾಗ

ಅವರ ವಿರುದ್ಧ ಪ್ರಕರಣ ದಾಖಲಾದರೂ ಆರೋಪಿಗಳನ್ನು ಬಂಧಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ.

ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ ಈ ರೀತಿಯ ಅವಮಾನಗಳು-ಬೆದರಿಕೆಗಳಾದರೆ ಜಿಲ್ಲೆಯ ಜನಸಾಮಾನ್ಯರ ಪಾಡೇನು ಎಂದು SDPI ಪ್ರಶ್ನಿಸುತ್ತಿದೆ
ಜಿಲ್ಲೆಯಲ್ಲಿ ಇಷ್ಟೆಲ್ಲಾ ಗಂಭೀರ ಸ್ವರೂಪದ ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿರುವಾಗ ಸರಕಾರ ಮತ್ತು ಪೊಲೀಸ್ ಇಲಾಖೆ ನಿಷ್ಕ್ರಿಯ ಧೋರಣೆ ತಳೆಯುವುದಾದರೆ

SDPI ಕೈಕಟ್ಟಿ ಕುಳಿತು ಕೊಳ್ಳುದಿಲ್ಲ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡುತ್ತಿದ್ದೇವೆ .

ಭಾರತದಲ್ಲಿ ಬದುಕುವ ಎಲ್ಲಾ ಭಾರತೀಯರಿಗೆ ಕಾನೂನು ಒಂದೇ ರೀತಿಯಲ್ಲಿ ಅನ್ವಯಿಸುತ್ತದೆ, ಸರಕಾರ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ಧೋರಣೆಯಿಂದ ಹೊರ ಬರಬೇಕು ಇಲ್ಲದಿದ್ದರೆ

ಜಿಲ್ಲೆಯಲ್ಲಿ ಏನಾದರೂ ಅನಾಹುತ ಅಥವಾ ಅರಾಜಕತೆ ಸ್ರಷ್ಟಿಯಾದರೆ ಅದಕ್ಕೆ ಜಿಲ್ಲಾಡಳಿತ ನೇರ ಹೊಣೆಯಾಗಲಿದೆ ಎಂದು ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending