Connect with us

DAKSHINA KANNADA

ಸುರತ್ಕಲ್ ಟೋಲ್ ಗೇಟ್ ಪ್ರದೇಶದಲ್ಲಿ sec 144 ಜಾರಿ, ಎಲ್ಲಾ ಪ್ರತಿಭಟನೆ ಸಭೆ, ಧರಣಿಗಳಿಗೆ ನಿರ್ಬಂಧ..!

Published

on

ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ ಅಧಿಕೃತವಾಗಿ ಬಾರದ ಹಿನ್ನೆಲೆಯಲ್ಲಿ ಅಕ್ಟೋಬರ್ 28 ಶುಕ್ರವಾರದಿಂದ ಅಹೋ ರಾತ್ರಿ ಅನಿರ್ಧಿಷ್ಟವಧಿ ಧರಣಿ ನಡೆಸಲು ಟೋಲ್ ವಿರೋಧಿ ಸಮಿತಿ ನಿರ್ಧರಿಸಿದ ಕಾರಣ ಧರಣಿ ನಡೆಸಲು ಉದ್ದೇಶಿಸಲಾದ ಸುರತ್ಕಲ್ ಟೋಲ್ ಗೇಟ್ ನ 200 ಮೀಟರ್ ಸುತ್ತ ಮುತ್ತ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಹೋರಾಟ ಕೈ ಬಿಡುವಂತೆ ಗುರುವಾರ ಹೆದ್ದಾರಿ ಅಧಿಕಾರಿಗಳು, ಟೋಲ್ ವಿರೋಧಿ ಸಮಿತಿಯ ಪಧಾಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ದ,ಕ. ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತುರ್ತು ಸಭೆ ನಡೆಸಿದಾಗ ಟೋಲ್ ತೆರವಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದ್ರೆ ಗಜೆಟ್ ನೊಟಿಫಿಕೇಷನ್ ಗೆ ಕಾಲವಕಾಶ ಬೇಕಾದ ಕಾರಣ ಉದ್ದೇಶಿಸಲಾಗಿದ್ದ ಧರಣಿ ಸತ್ಯಾಗೃಹವನ್ನು 10 ದಿನ ಮುಂದೂಡುವಂತೆ ಹೈವೇ ಅಧಿಕಾರಿಗಳು ಮನವಿ ಮಾಡಿದ್ದರು.

ಆದ್ರೆ ಜಿಲ್ಲಾಧಿಕಾರಿಲೂ ಮತ್ತು ಹೈವೇ ಅಧಿಕಾರಿಗಳ ಮನವಿಯನ್ನು ಹೋರಾಟ ಸಮಿತಿ ತಿರಸ್ಕರಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಿದ್ದರು.

ಈ ಹಿನ್ನೆಯಲ್ಲೆ ಕಾನೂನು ಸುವ್ಯವಸ್ಥೆಗೆ ಭಂಗ ಬರುತ್ತೆ ಎಂದು ಮಂಗಳೂರು ಪೊಲೀಸರು ಆಯುಕ್ತರಿಗೆ ಮನವಿ ಮಾಡಿದ್ದರರಿಂದ ಇದೀಗ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ,

ಶುಕ್ರವಾರ ಮುಂಜಾನೆ 6 ರಿಂದ ನವೆಂಬರ್ 3 ರ ಸಂಜೆ ಆರ ವರೆಗೆ ಟೋಲ್ ಗೇಟ್ ವ್ಯಾಪ್ತಿಯ 200 ಮೀಟರ್ ಸುತ್ತಳತೆಯಲ್ಲಿ ಸೆಕ್ಷನ್ 144 ರ ಅನ್ವಯ ನಿಷೇದಾಜ್ಞೆ ಜಾರಿ ಗೊಳಿಸಲಾಗಿದ್ದು ಈ ಪ್ರದೇಶದಲ್ಲಿ ಪ್ರತಿಭಟನೆ, ಸಭೆ ಗಳನ್ನು ನಿಷೇಧಿಸಲಾಗಿದೆ.

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending