Wednesday, August 12, 2020

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಸಿಸಿಟಿವಿ ಭದ್ರತೆ, 144 ಸೆಕ್ಷನ್ ಜಾರಿ

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಮಾ.4) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಈ ಬಾರಿ ಒಟ್ಟಾರೆ 1,016 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಈ ಬಾರಿ ಒಟ್ಟು 6 ಲಕ್ಷದ 80 ಸಾವಿರದ 049 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 2 ಲಕ್ಷದ 16 ಸಾವಿರದ 930 ವಿದ್ಯಾರ್ಥಿಗಳು,

ವಾಣಿಜ್ಯ ವಿಭಾಗದಲ್ಲಿ 2 ಲಕ್ಷದ 61 ಸಾವಿರದ 674 ಹಾಗೂ ಕಲಾ ವಿಭಾಗದಲ್ಲಿ 2 ಲಕ್ಷದ 445 ವಿದ್ಯಾರ್ಥಿಗಳು ಸೇರಿದಂತೆ,

ಒಟ್ಟು 3 ಲಕ್ಷದ 41 ಸಾವಿರದ 618 ಬಾಲಕಿಯರು ಮತ್ತು 3 ಲಕ್ಷದ 38 ಸಾವಿರದ 431 ಬಾಲಕರು ಪರೀಕ್ಷೆ ಬರೆಯಲಿದ್ದಾರೆ.

ಇಂದಿನಿಂದ ಮಾರ್ಚ್ 23ರವರೆಗೆ ಪರೀಕ್ಷೆ ನಡೆಯುತ್ತಿದೆ.

ವಿಶೇಷ ಭದ್ರತೆ: ಪ್ರಶ್ನೆ ಪತ್ರಿಕೆಗಳು ಆಯಾ ಜಿಲ್ಲೆಗಳ ಜಿಲ್ಲಾ ಖಜಾನೆಗಳಿಂದ ತೀವ್ರ ಭದ್ರತೆ ನಡುವೆ ತೆರೆಯಲಾಗುತ್ತದೆ.

ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಘಟಕಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ.

ಈ ಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಅಕ್ರಮಗಳ ಮೇಲೆ ಜಿಲ್ಲಾಧಿಕಾರಿ ಕಚೇರಿಯಿಂದಲೇ ನಿಗಾ ಇಡಲಾಗುತ್ತದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಇತರೆ ಯಾವುದೇ ಅಕ್ರಮಗಳು ನಡೆಯದಂತೆ ಕಣ್ಗಾವಲಿಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಬಳಿ ಇರುವ ಫೋಟೋಕಾಪಿ ಅಂಗಡಿ, ಸೈಬರ್ ಕೆಫೆ, ಕಂಪ್ಯೂಟರ್ ಮತ್ತು ಕೋಚಿಂಗ್ ಕೇಂದ್ರಗಳನ್ನು ಬಂದ್ ಮಾಡಲು ಸೂಚನೆ ಹೊರಡಿಸಲಾಗಿದೆ.

ಪರೀಕ್ಷಾ ಅಕ್ರಮದಲ್ಲಿ ತೊಡಗುವವರಿಗೆ ತಲಾ ಐದು ಲಕ್ಷ ರೂಪಾಯಿ ದಂಡ ಹಾಗೂ ಐದು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರ ಪ್ರತಿಭಟನೆ

ಇತ್ತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರ ಮಧ್ಯೆ ಅತ್ತ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ‘ಕಪ್ಪುಪಟ್ಟಿ ಧರಿಸಿ’ ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ನಡೆಸಲು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ತೀರ್ಮಾನಿಸಿದೆ.

ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸುವ ಹಿನ್ನಲೆ ಕುಮಾರ ನಾಯಕ್‌ ಸಮಿತಿ ವರದಿ ಜಾರಿಗೆ ತರುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಮೂರು ಬಾರಿ ಭಾರಿ ಪ್ರತಿಭಟನೆ ನಡೆಸಲಾಗಿದೆ.

ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ಪಿಯುಸಿ ಪರೀಕ್ಷೆ ವೇಳೆ ಕಪ್ಪುಪಟ್ಟಿ ಧರಿಸಿ ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್‌. ನಿಂಗೇಗೌಡ ತಿಳಿಸಿದ್ದಾರೆ.

ವದಂತಿ ಹರಡಬೇಡಿ:

ಪಿಯುಸಿ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಕುರಿತು ಸುಳ್ಳು ಸುದ್ದಿ/ವದಂತಿ ಹರಡದಂತೆ ಎಚ್ಚರಿಕೆ ವಹಿಸಬೇಕು.

ಜೊತೆಗೆ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಅನಗತ್ಯ ಆತಂಕವಾಗದಂತೆ ಸಹಕರಿಸೋಣ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಗತ್ಯವಾಗಿ ಏನೇನು ಇಟ್ಟುಕೊಳ್ಳಬೇಕೆಂದನ್ನು ಕೂಡ ಅವರು ಹೇಳಿದ್ದಾರೆ.

ಇನ್ನು ಪರೀಕ್ಷಾ ಕೊಠಡಿಯಲ್ಲಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುವುದು ಒಳ್ಳೆಯದಲ್ಲ, ಹಾಗೆ ಮಾಡದಂತೆ ಕೂಡ ಅವರು ಉಪನ್ಯಾಸಕರಿಗೆ ಮನವಿ ಮಾಡಿಕೊಂಡಿದ್ದಾರೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.