Connect with us

LATEST NEWS

ಎರಡನೇ ಮಹಾಯುದ್ಧದ ಬಾಂಬ್ ಈಗ ಸ್ಫೋಟ; ಹೇಗೆ ಗೊತ್ತಾ ??

Published

on

ಮಂಗಳೂರು/ಜಪಾನ್; 2ನೇ ಮಹಾಯುದ್ಧದಲ್ಲಿ ಬಾಂಬ್ ಒಂದು ಸ್ಫೋಟಗೊಳ್ಳದೇ ಜಪಾನ್‌ನಲ್ಲಿ ಭೂಮಿ ಒಳಗೆ ಹೂತು ಹೋಗಿತ್ತು. ಅಮೇರಿಕದ ಬರೋಬ್ಬರಿ 500 ಪೌಂಡ್ (226 ಕೆ.ಜಿ ) ತೂಕದ ಬಾಂಬ್ 85 ವರ್ಷದ ಬಳಿಕ ಇದಕ್ಕಿದ್ದಂತೆ ಜಪಾನ್ ಮಿಯಕಾಜಿ ವಿಮಾನ ನಿಲ್ಧಾಣದ ಟ್ಯಾಕ್ಸೀ ವೇ ನಲ್ಲಿ ಸ್ಫೋಟವಾಗಿದೆ.


ಸ್ಫೋಟದ ತೀವ್ರತೆಗೆ ರಸ್ತೆಯ ಡಾಬರು ಕಿತ್ತು 6-7 ಅಡಿ ಎತ್ತರದವರೆಗೆ ಕಾರಂಜಿಯಂತೆ ಚಿಮ್ಮಿದೆ. ವಿಮಾನ ನಿಲ್ಧಾನದ ಸಮೀಪವಿರುವ ವಿಮಾನಯಾನ ಶಾಲೆಯಿಂದ ಈ ದೃಶ್ಯ ಸೆರೆ ಹಿಡಿಯಲಾಗಿದ್ದು, ಸಾಮಜಿಕ ಜಾಲತಾಣದಲ್ಲಿ ಈ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಸ್ಫೋಟದಿಂದಾಗಿ ಟ್ಯಾಕ್ಸಿ ವೇನಲ್ಲಿ 7 ಮೀ. ಸುತ್ತಳತೆಯ 3 ಅಡಿ ಆಳದ ಬೃಹತ್‌ ಗುಂಟಿ ಆಗಿದೆ. ಯಾವುದೇ ಸಾವಿ-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Baindooru

ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ

Published

on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ಉದ್ಯಮಿ ಎಂ.ಕೆ.ಪೋತ್‌ರಾಜ್, ಉದ್ಯಮಿ ಕಲಬುರಗಿಯ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು, ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

Continue Reading

kerala

ಹಾಸ್ಟೆಲ್‌ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ

Published

on

ಮಂಗಳೂರು/ಕೇರಳ: ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್‌ನ ಮೂರನೇ ಮಹಡಿಯಿಂದ ಬಿದ್ದು ಮೃ*ತಪಟ್ಟ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಘಟನೆಗೆ ಸಹಪಾಠಿಗಳ ಪ್ರಚೋದನೆಯೇ ಕಾರಣವೆಂದು ಮೂವರು ಗೆಳತಿಯರನ್ನು ಬಂಧಿಸಲಾಗಿದೆ.

ಅಮ್ಮು ಸಜೀವ್ (21) ಮೃ*ತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪಠಾಣಪುರಂ ನಿವಾಸಿ ಅಲೀನಾ, ಚಂಗನಾಶ್ಶೇರಿ ನಿವಾಸಿ ಅಕ್ಷಿತಾ ಮತ್ತು ಕೊಟ್ಟಾಯಂ ನಿವಾಸಿ ಅಂಜನಾ ಬಂಧಿತ ಆರೋಪಿಗಳು ಎನ್ನಲಾಗಿದೆ. ಚುಟ್ಟಿಪಾರ ಎಸ್‌ಎಸ್‌ಇ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿನಿ ಅಮ್ಮು ನವೆಂಬರ್ 15 ರಂದು ಹಾಸ್ಟೆಲ್ ಕಟ್ಟಡದ ಮೇಲಿನಿಂದ ಬಿದ್ದು ಸಾ*ವನ್ನಪ್ಪಿದ್ದರು. ಆದರೆ ಆಕೆ ಆ*ತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕುಟುಂಬದವರು ಪಟ್ಟು ಹಿಡಿದು, ಸಹಪಾಠಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದಾರೆ.

 

ಇದನ್ನೂ ಓದಿ : ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ

 

ಅಮ್ಮು ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಲು ಕೇವಲ ಒಂದೇ ಒಂದು ತಿಂಗಳು ಬಾಕಿ ಇದ್ದು, ಸಾವಿಗೆ ಶರಣಾಗುವ ಮೂಲಕ ತನ್ನ ಆಸೆ, ಕನಸ್ಸುಗಳನ್ನು ನುಚ್ಚನೂರು ಮಾಡಿಕೊಂಡಿದ್ದಾಳೆ.  ಈ ಬಗ್ಗೆ ತನಿಖೆ ಆಗಬೇಕು. ಸಾ*ವಿನಲ್ಲಿ ನಿಗೂಢತೆ ಇದೆ ಎಂದು ಪೋಷಕರು ಆರೋಪಿಸಿದ್ದಾರೆ. ಹಾಸ್ಟೆಲ್‌ನಲ್ಲಿದ್ದ  ವಿದ್ಯಾರ್ಥಿಗಳ ಕಿರುಕುಳವೇ ಮಗಳ ಸಾ*ವಿಗೆ ಕಾರಣ ಎಂದು ಕುಟುಂಬಸ್ಥರು ವಾದಿಸಿದ್ದಾರೆ. ಸದ್ಯ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್.

Continue Reading

Baindooru

ಕಾಸರಗೋಡು: ಮಹಿಳಾ ಪೊಲೀಸ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

Published

on

ಕಾಸರಗೋಡು: ಪೋಲೀಸ್‌ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.

ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್‌ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ ಎಂಬಾಕೆ ತನ್ನ ಪತಿಯಿಂದಲೇ ಕೊಲೆಗೀಡಾದ ಮಹಿಳೆ. ಈಕೆ ಕೊಲೆ ನಡೆಯುವಾಗ ತಡೆಯಲು ಬಂದ ಆಕೆಯ ತಂದೆ ವಾಸು ಎಂಬವರ ಕೊರಳು, ಹೊಟ್ಟೆಗೆ ಕತ್ತಿ ಇರಿತ, ಕಡಿತಗಳ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗುರುವಾರ (ನ.21) ಮುಸ್ಸಂಜೆ ಈ ದುಷ್ಕೃತ್ಯ ನಡೆದಿದ್ದು, ಆರೋಪಿ ರಾಜೇಶ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.

ಪತಿ-ಪತ್ನಿಯರಾದ ರಾಜೇಶ ಮತ್ತು ದಿವ್ಯಶ್ರೀ ಕಳೆದ ಕೆಲ ಸಮಯಗಳಿಂದ ಒಟ್ಟಿಗೆ ಬದುಕುತ್ತಿರಲಿಲ್ಲ. ಅವರ ದಾಂಪತ್ಯದಲ್ಲಿ ಸಮಸ್ಯೆಗಳಿದ್ದ ಕಾರಣ ಈರ್ವರೂ ಬೇರೆಯೇ ವಾಸಿಸುತ್ತಿದ್ದರು. ಗುರುವಾರ ಸಂಜೆ ಪತ್ನಿ ಮನೆಯಲ್ಲಿದ್ದಾಳೆಂದು ತಿಳಿದೇ ಬಂದ ಆರೋಪಿ ಆಕೆಯನ್ನು ಆಕ್ರಮಿಸಿ, ಓಡಿಸಿ ಕೊಲೆಗೈದನೆಂದೂ, ಈ ವೇಳೆ ತಡೆಯಲು ಬಂದ ಮಾವನನ್ನೂ ಆಕ್ರಮಿಸಿ ಕೊಲೆಗೆತ್ನಿಸಿದನೆಂದೂ ಮಾಹಿತಿ ಲಭಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೃತ ಪೋಲೀಸ್ ಉದ್ಯೋಗಿ ದಿವ್ಯಶ್ರೀಯ ಪತಿ ರಾಜೇಶನನ್ನು ಪೋಲೀಸರು ಬಂಧಿಸಿದ್ದಾರೆ.

Continue Reading

LATEST NEWS

Trending

Exit mobile version