ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಐದು ತಾಲೂಕುಗಳಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಈ ಹಿಂದೆ ಜು.27ರಂದು ಹೊರಡಿಸಿದ್ದ ನಿಷೇಧಾಜ್ಞೆಯ ಅವಧಿ ಇಂದು ಮಧ್ಯರಾತ್ರಿ 12ಕ್ಕೆ ಮುಕ್ತಾಯಗೊಳ್ಳಲಿರುವುದರಿಂದ ನಿಷೇಧಾಜ್ಞೆ ಅವಧಿಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.