Connect with us

LATEST NEWS

ಕೊಡಗು ಜಿಲ್ಲೆಯಲ್ಲಿ ಮುಂದಿನ 4 ದಿನ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಡಾ.ಸತೀಶ್‌ ಆದೇಶ

Published

on

ಕೊಡಗು: ಆ.26ರಂದು ಕಾಂಗ್ರೆಸ್​​ನಿಂದ ಮಡಿಕೇರಿ‌ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ ಆ.24 ಬೆಳಗ್ಗೆ 6 ಗಂಟೆಯಿಂದ ಆ.27 ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್‌ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ.

ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ ನಿರಾಕರಿಸಲಾಗಿದೆ.

ಆ. 24ರ ಬೆಳಿಗ್ಗೆ 6 ಗಂಟೆಯಿಂದ ಆ.27ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

LATEST NEWS

ಇಸ್ರೋ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

Published

on

ಮಂಗಳೂರು/ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷರನ್ನಾಗಿ ವಿ. ನಾರಾಯಣನ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಇಸ್ರೋ ಹಾಲಿ ಅಧ್ಯಕ್ಷ ವಿ. ಸೋಮನಾಥ್ ಅವರಿಂದ ಅಧಿಕಾರವನ್ನು ನಾರಾಯಣನ್ ಅವರು ಜ. 14ರಂದು ವಹಿಸಿಕೊಳ್ಳಲಿದ್ದಾರೆ.

ಕೇಂದ್ರ ಸಂಪುಟದ ನೇಮಕಾತಿಗಳ ಸಮಿತಿಯು ನಾರಾಯಣನ್ ಅವರನ್ನು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇಸ್ರೋ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಇದನ್ನೂ ಓದಿ: ಚೀನಾ ಸೈನಿಕರ ಕಾಲರ್ ನಲ್ಲಿ ಗುಂಡು ಪಿನ್ ಏಕಿದೆ ಗೊತ್ತಾ ?

ರಾಕೆಟ್ ಮತ್ತು ಬಾಹ್ಯಾಕಾಶ ನೌಕೆಗಳ ಸಂಚಲನೆಯ ವಿಷಯ ಪರಿಣಿತರಾಗಿರುವ ನಾರಾಯಣನ್ ಅವರು ಸದ್ಯ ಕೇರಳದ ತಿರುವನಂತಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಇಸ್ರೋದ ‘ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್’ ನ (LPSC) ನಿರ್ದೇಶಕರಾಗಿ 2018ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

Continue Reading

International news

ಚೀನಾ ಸೈನಿಕರ ಕಾಲರ್ ನಲ್ಲಿ ಗುಂಡು ಪಿನ್ ಏಕಿದೆ ಗೊತ್ತಾ ?

Published

on

ಮಂಗಳೂರು/ಬೀಜಿಂಗ್ : ಸಾಮಾನ್ಯವಾಗಿ ಭಾರತೀಯ ಸೇನೆ ಮತ್ತು ಚೀನಾ ಸೇನೆಯ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಚೀನಾದ ಸೈನಿಕರ ತರಬೇತಿಯಲ್ಲಿ, ಯೋಧರ ಕೊರಳಪಟ್ಟಿಗಳ ಮೇಲೆ ಗುಂಡು ಪಿನ್ ಗಳನ್ನು ಅಂಟಿಸಿರುವುದು, ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗುತ್ತಿವೆ.

ಮಿಲಿಟರಿ ಸೇವೆಯಲ್ಲಿ ಸೈನಿಕರು ನಡೆಯುವ ರೀತಿ, ಚಲಿಸುವ ಅಥವಾ ನಿಂತಿರುವ ರೀತಿಯಲ್ಲಿ ವಿಶೇಷ ಗಮನ ಹರಿಸುತ್ತಾರೆ. ಸೈನಿಕರು ತಮ್ಮ ಎದೆಯನ್ನು ಮೇಲಕ್ಕೆತ್ತಿ, ಕುತ್ತಿಗೆಯನ್ನು ನೇರವಾಗಿ ಮತ್ತು ಕೈಗಳನ್ನು ನೇರವಾಗಿ ನಿಲ್ಲಬೇಕು ಎಂಬ ನಿಯಮ ಇದೆ. ಈ ನಿಯಮ ಚೀನಾದ ಸೇನೆಯಲ್ಲೂ ಇದೆ.

ಚೀನಾದ ಸೈನಿಕರ ಸಮವಸ್ತ್ರದ ಕೊರಳಪಟ್ಟಿಗಳ ಮೇಲೆ ಗುಂಡುಪಿನ್ ಗಳನ್ನು ಅಂಟಿಕೊಂಡಿರುವ ರೀತಿಯಲ್ಲಿ ಇರಿಸಲಾಗುತ್ತದೆ. ಇದಕ್ಕೆ ಒಂದು ಕಾರಣವೂ ಇದೆ. 2009ರಲ್ಲಿ ನ್ಯೂಯಾರ್ಕ್ ಟೈಮ್ಸ್ ಈ ಬಗ್ಗೆ ವರದಿ ಮಾಡಿತ್ತು. ಸೈನಿಕರು ತಮ್ಮ ಕುತ್ತಿಗೆಯನ್ನು ಸದಾ ಗಟ್ಟಿಯಾಗಿರಿಸಲು ಈ ರೀತಿಯಾಗಿ ಪಿನ್ ಗಳನ್ನು ಧರಿಸುತ್ತಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ಕುತ್ತಿಗೆಯನ್ನು ಬಾಗಿಸಿದಾಗ ಪಿನ್ ಗಳು ಕುತ್ತಿಗೆಗೆ ಚುಚ್ಚುವ ರೀತಿಯಲ್ಲಿ ಕಾಲರ್ ನಲ್ಲಿ ಇರಿಸಲಾಗಿದೆ. ಸೈನಿಕರು ತಮ್ಮ ಕುತ್ತಿಗೆಯನ್ನು ಸದಾ ನೇರವಾಗಿರಿಸಲು ಈ ರೀತಿ ಮಾಡಲಾಗುತ್ತದೆ. ಅಲ್ಲದೆ, ಸದಾ ಅಲರ್ಟ್ ಆಗಿರಲು ಈ ರೀತಿ ಮಾಡಲಾಗುತ್ತದೆ. ಇದನ್ನು ಹೆಚ್ಚಾಗಿ ಪರೇಡ್ ಸಂದರ್ಭಗಳಲ್ಲಿ ಅನುಸರಿಸಲಾಗುತ್ತದೆ.

ಪ್ರತಿಯೊಬ್ಬ ಸೈನಿಕನಿಗೂ ಈ ವಿಧಾನ ಅನ್ವಹಿಸುವುದಿಲ್ಲ. ಬದಲಾಗಿ ಕುತ್ತಿಗೆ ನೇರವಾಗಿರಿಸದ ಸೈನಿಕರಿಗೆ ಇದನ್ನು ಬಳಸುತ್ತಾರೆ ಮತ್ತು ಇದರಿಂದ ಅವರ ಭಂಗಿಯನ್ನು ಸರಿಪಡಿಸಲಾಗುತ್ತದೆ.

Continue Reading

DAKSHINA KANNADA

ಜ.10 ರಂದು ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ

Published

on

ಮಂಗಳೂರು :  ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10 ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು  ಎಂದು ದೇವಳದ ಮ್ಯಾನೇಜಿಂಗ್ ಟ್ರಸ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು, ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ  ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ಮಹಾಕುಂಭ ಮೇಳಕ್ಕೆ ನಾಗಾಸಾಧುಗಳ ಗ್ರ್ಯಾಂಡ್ ಎಂಟ್ರಿ..!

ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತನಾಡಿ, ಅಂದು ಬೆಳಗ್ಗೆ 7 ರಿಂದ 8ರ ವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1 ರಿಂದ 3ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ  ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

 

Continue Reading

LATEST NEWS

Trending

Exit mobile version