DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 8ರ ಮುಂಜಾನೆವರೆಗೆ ಸೆಕ್ಷನ್ 144 ಜಾರಿ
Published
2 years agoon
By
Adminಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಇಂದಿನಿಂದ (ಆ. 5) ರಿಂದ ಆ. 8ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಕೆಲವು ನಿಬರ್ಂಧಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿವರ ಇಂತಿದೆ
ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಆ.05 ರಿಂದ 08 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಮುಚ್ಚುವುದು.
ಮಾಲ್, ಚಿತ್ರಮಂದಿರಗಳು/ಸಿನೆಮಾ ಹಾಲ್, ಪಬ್ಗಳನ್ನು ಜಿಲ್ಲೆಯಾದ್ಯಂತ ಆ.05 ರಿಂದ 08ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವರೆಗೆ ಮುಚ್ಚುವುದು.
ಸಾರ್ವಜನಿಕರು ತುರ್ತು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯದಿಂದ ಹೊರಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ.
ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಅಟೋರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾಲಕ್ಕೆ ಅವಕಾಶವಿರುತ್ತದೆ ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಜಿಲ್ಲೆಯಲ್ಲಿ ಎಲ್ಲಾ ಸಭೆ ಸಮಾರಂಭಗಳನ್ನು, ಸಾಂಸ್ಕøತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ ಜಾತ್ರೆಗಳನ್ನು ಮುಂದೂಡುವುದು. ಮತ್ತು ಈಗಾಗಲೇ ನಿಗದಿಪಡಿಸಲಾಗಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
2 days agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?