ಕೊರೋನಾ ಎಫೆಕ್ಟ್: ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿ
ಉಡುಪಿ: ಕರ್ನಾಟಕದಲ್ಲಿ ಕಿಲ್ಲರ್ ಕರೋನಾ ವೈರಸ್ ಹಾವಳಿ ಜೋರಾಗಿದ್ದು, ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಜಗದೀಶ್ ಈ ಆದೇಶ ಹೊರಡಿಸಿದ್ದಾರೆ.
ಕರೋನಾ ವೈರಸ್ ಹರಡದಂತೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದ್ದು, ಜನ ಸೇರುವ ಎಲ್ಲಾ ಕಾರ್ಯಕ್ರಮಗಳು ಸಂಪೂರ್ಣ ರದ್ದಾಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಿಗೆ ಹಾಗೂ ಅರ್ಚಕರಿಗೆ ಮಾತ್ರ ಅವಕಾಶವಿದ್ದು, ಧಾರ್ಮಿಕ ಕೇಂದ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಪೂಜೆ ಮತ್ತಿತರ ವಿಶೇಷ ಸೇವೆಗಳಿಗೆ ಅವಕಾಶ ಇಲ್ಲ ಚರ್ಚ್ ಮಸೀದಿ ದೇವಸ್ಥಾನಕ್ಕೆ ಗುಂಪು ಗುಂಪಿನಲ್ಲಿ ಭಕ್ತಾದಿಗಳು ಪ್ರವೇಶಿಸುವಂತಿಲ್ಲ . ಪ್ರವಾಸಿ ತಾಣಗಳು ತಕ್ಷಣದಿಂದ ಸಂಪೂರ್ಣವಾಗಿ ಸ್ತಬ್ಧವಾಗಬೇಕು.
ವಾರದ ಸಂತೆಗಳಿಗೆ ಕೂಡ ನಿರ್ಬಂಧ ಹೇರಲಾಗಿದೆ. ಹಾಸ್ಟೆಲ್ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಒಂದುವೇಳೆ ಉಳಿದುಕೊಳ್ಳಲು ಇಚ್ಚಿಸುವವರು ಸಂಪೂರ್ಣ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದ್ದು, ಮುಂದಿನ ಆದೇಶ ಬರುವ ತನಕ ಸೆಕ್ಷನ್ ಜಾರಿಯಲ್ಲಿರುತ್ತದೆ ಅಂತ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ..
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.