ಮಹಾ ಸಿಎಂಗೆ ಕರೆ ಮಾಡಿದ ಭೂಗತ ಪಾತಕಿ ದಾವೂದ್ ಇಬ್ರಾಹಿಂ : ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಸರ್ಪಗಾವಲು..!
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಕರೆ ಮಾಡಿದ್ದಾರೆ.
ದಾವೂದ್ ನಿಂದ ಎರಡು ಕರೆಗಳು ಸಿಎಂ ನಿವಾಸಕ್ಕೆ ಬಂದಿರುವುದನ್ನು ಮುಂಬೈ ಪೊಲಿಸರು ಖಚಿತ ಪಡಿಸಿಕೊಂಡಿದ್ದಾರೆ.
ಕರೆಗಳು ಬಂದ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ಮುಖ್ಯಮಂತ್ರಿ ಜೊತೆಗೆ ಮಾತನಾಡಬೇಕು ಎಂದು ದಾವುದ್ ಇಬ್ರಾಹಿಂ ಎರಡು ಬಾರಿ ಕರೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.