Connect with us

LATEST NEWS

ಕೂಲಿ ಕೆಲಸಕ್ಕಿಳಿದ ಪದ್ಮಶ್ರೀ ಪುರಸ್ಕೃತ!

Published

on

ಹೈದರಾಬಾದ್ : ‘ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ’ ಎಂಬಂತೆ ಅನೇಕ ಕಲಾವಿದರು ಕಲಾಪೋಷಣೆಯಲ್ಲಿ ತೊಡಗಿಕೊಂಡಿರುತ್ತಾರೆ. ಅಂತಹ ಕಲಾವಿದರಲ್ಲಿ ಕೆಲವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವ ಕೆಲಸಗಳೂ ನಡೆಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಎಲೆ ಮರೆಯ ಕಾಯಿಯಂತಿರುವ ಕಲಾವಿದರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಶಸ್ತಿಯೇನೋ ಸಿಗುತ್ತದೆ. ಒಂದಷ್ಟು ಜನ ಮನ್ನಣೆಯೂ ಸಿಗುತ್ತದೆ. ಆದರೆ, ಬದುಕು? ಹಾಗೇ  ಉಳಿದಿರುತ್ತೆ. ಅದಕ್ಕೆ ಸಾಕ್ಷಿ ಈ ಸಾಧಕ.

ಹೌದು, ಇವರು ಎರಡು ವರ್ಷಗಳ ಹಿಂದೆಯಷ್ಟೇ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಆದ್ರೆ, ಈಗ ಹೊಟ್ಟೆಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರೇ ಸಂಗೀತ ಸಾಧಕ ತೆಲಂಗಾಣದ ಸಾಧಕ ದರ್ಶನಂ ಮೊಗುಳಯ್ಯ. ಅವರು ಕೆಲಸ ಮಾಡುತ್ತಿರುವ ಫೋಟೋ, ವೀಡಿಯೋ ವೈರಲ್ ಆಗಿವೆ.


ದರ್ಶನಂ ಮೊಗುಳಯ್ಯ ಸಂಗೀತ ವಾದನವಾದ ಕಿನ್ನೇರವನ್ನು ನುಡಿಸುವಲ್ಲಿ ಖ್ಯಾತರು, ಆ ವಾದನಕ್ಕೆ ರಾಷ್ಟ್ರೀಯ ಗೌರವ ಸಿಗುವಲ್ಲಿ ದರ್ಶನಂ ಮೊಗುಳಯ್ಯ ಅವರ ಪಾತ್ರ ಹಿರಿದು. ಹೀಗಾಗಿಯೇ ಕೇಂದ್ರ ಸರ್ಕಾರವು 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಆಗ ರಾಷ್ಟ್ರಪತಿಯಾಗಿದ್ದ ರಾಮನಾಥ್‌ ಕೋವಿಂದ್‌ ಅವರು ದರ್ಶನಂ ಮೊಗುಳಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಇದಾದ ಬಳಿಕ ದರ್ಶನಂ ಮೊಗುಳಯ್ಯ ಅವರನ್ನು ಇಡೀ ದೇಶವೇ ಮೆಚ್ಚಿಕೊಂಡಿತ್ತು. ‘ವ್ಹಾ’ ಎಂದಿತ್ತು. ಆದರೆ, ಈಗಿನ ಪರಿಸ್ಥಿತಿ ಕೇಳಿದ್ರೆ ‘ಅಯ್ಯೋ’ ಎನ್ನುವಂತಿದೆ.

ಕೂಲಿ ಕೆಲಸ ಮಾಡ್ತಿದ್ದಾರೆ ಪದ್ಮಶ್ರೀ ಪುರಸ್ಕೃತ :


ದರ್ಶನಂ ಮೊಗುಳಯ್ಯ ತಮ್ಮ ಸಾಧನೆಗಾಗಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಆದರೆ, ಈಗ ತಮ್ಮ 73ನೇ ವಯಸ್ಸಿನಲ್ಲಿ ಹೈದರಾಬಾದ್ ಬಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕುಟುಂಬಕ್ಕೆ ಇವರೇ ಆಧಾರ ಸ್ತಂಭ. ಹಾಗಾಗಿ ಮೂರು ಹೊತ್ತಿನ ಊಟಕ್ಕಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಫೋಟೊಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಇವರ ದುಸ್ಥಿತಿ ಕಂಡು ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಸುರಕ್ಷತೆಗೆ ಬಂತು ‘ವುಮೆನ್ ಸೇಫ್ಟೀ’ ಅಪ್ಲಿಕೇಷನ್‌..!

ಒಂದು ಕೋಟಿ ರೂ. ಎಲ್ಲಿ ಹೋಯ್ತು ?

ದರ್ಶನಂ ಮೊಗುಳಯ್ಯ ಸಾಧನೆಗೆ ಸರ್ಕಾರವೇನೋ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದೆ. ಇದರ ಬೆನ್ನಲ್ಲೇ ತೆಲಂಗಾಣ ಸರ್ಕಾರವು ಅವರಿಗೆ ಒಂದು ಕೋಟಿ ರೂ. ಪ್ರೋತ್ಸಾಹ ಧನವನ್ನೂ ನೀಡಿತ್ತು. ಅಂದಿನ ಸಿಎಂ ಕೆ.ಚಂದ್ರಶೇಖರ್‌ ರಾವ್‌ ಒಂದು ನಿವೇಶನವನ್ನೂ ಮಂಜೂರು ಮಾಡಿದ್ದರು.

ಆದರೆ, ಸರ್ಕಾರ ಕೊಟ್ಟ ಪ್ರೋತ್ಸಾಹಧನದಲ್ಲಿ ಒಂದಷ್ಟು ಹಣವನ್ನು ಮಗಳ ಮದುವೆಗೆ ಖರ್ಚು ಮಾಡಿದ ಅವರು, ಉಳಿದ ಹಣವನ್ನು ಸಾಲ ತೀರಿಸಲು, ಕುಟುಂಬದ ತುರ್ತು ಸಂದರ್ಭಗಳಿಗೆ ಬಳಸಿದ್ದಾರಂತೆ. ಹಾಗಾಗಿ, ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

LATEST NEWS

ಕೊನೆಗೂ ಮೌನ ಮುರಿದ ಎಚ್‌ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?

Published

on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ದೇವೇಗೌಡರವರು ಮೌನ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ನಮ್ಮದೇನು ತಕರಾರಿಲ್ಲ. ಆದರೆ ರೇವಣ್ಣ ವಿಚಾರದಲ್ಲಿ ಜನರಿಗೆ ಸತ್ಯ ಗೊತ್ತಿದೆ.  ರೇವಣ್ಣ ಪ್ರಕರಣ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ ರೇವಣ್ಣರನ್ನು ಯಾವ ರೀತಿ ಸಿಲುಕಿಸಿದ್ದಾರೆ. ಕೇಸ್ ಹೇಗೆ ದಾಖಲು ಮಾಡಿದ್ದಾರೆ ಎಂದು ನಮಗೆ ತಿಳಿದಿದೆ. ಕೋರ್ಟ್‌ನಲ್ಲಿ ಜಡ್ಜ್‌ಮೆಂಟ್ ನಡೀತಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

devegowda

ಇದನ್ನೂ ಓದಿ..; ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

ಇಂದು 92ನೇ ಹುಟ್ಟು ಹಬ್ಬ ಹಿನ್ನೆಲೆ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ದೇವೇಗೌಡರು ಈಗಾಗಲೇ ಈ ಘಟನೆ ಬಗ್ಗೆ ಕುಮಾರಾಸ್ವಾಮಿ ಅವರು ನಮ್ಮ ಕುಟುಂಬದ ಪರವಾಗಿ ಮಾತನಾಡಿದ್ದಾರೆ.  ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಅನೇಕರ ಹೆಸರು ಇದೆ, ಆದರೆ ನಾನು ಅವರ ಹೆಸರನ್ನು ಹೇಳಲು ಬಯಸುವುದಿಲ್ಲ. ಇನ್ನು ಸಂತ್ರಸ್ಥ ಮಹಿಳೆಯರಿಗೆ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರೆಲ್ಲರಿಗೂ ಶಿಕ್ಷೆ ಆಗಬೇಕು. ಈ ಕುರಿತಾಗಿ ಕುಮಾರಸ್ವಾಮಿಯವರು ಬಿಡಿ ಬಿಡಿಯಾಗಿ ತಿಳಿಸಿದ್ದಾರೆಎಂದು ಹೇಳಿದರು. .

Continue Reading

FILM

ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

Published

on

ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಚಂದು ಹಾಗೂ ಪವಿತ್ರಾ ಜಯರಾಂ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಪವಿತ್ರಾ ಹಾಗೂ ಚಂದು ಇಬ್ಬರೂ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿದ್ದರು. ಇಬ್ಬರು ಜೊತೆಯಾಗಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದರು. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ದರ್ಶನ್ ಸಿನಿಮಾಗೆ ಪವಿತ್ರಾ ಅವರಿಗೆ ಆಫರ್ ಬಂದಿತ್ತು. ಹೀಗಾಗಿ ಇವರಿಬ್ಬರು ಜೊತೆಯಾಗಿ ಬೆಂಗಳೂರಿಗೆ ಬಂದಿದ್ದರು. ಹಿಂತಿರುಗುವಾಗ ಪ್ರಯಾಣಿಸುತ್ತಿರುವ ಕಾರು ಅಪಘಾತವಾಗಿತ್ತು. ಈ ವೇಳೆ ನಟಿ ಪವಿತ್ರಾ ಜಯರಾಂ ಸಾ*ವನ್ನಪ್ಪಿದ್ದರು. ಚಂದು ಗಾಯಗೊಂಡಿದ್ದರು.

ಇದನ್ನೂ ಓದಿ : ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

ಪವಿತ್ರಾ ಸಾವಿಗೆ ತೀವ್ರ ನೊಂದಿದ್ದ ಚಂದು ಸೋಶಿಯಲ್ ಮೀಡಿಯಾದಲ್ಲಿ ಮಿಸ್ ಯೂ ಎಂದು ಪವಿತ್ರಾ ಜೊತೆಗಿನ ವೀಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.

 

Continue Reading

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

LATEST NEWS

Trending