Thursday, March 23, 2023

ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಆಸಾರಾಂ ಬಾಪುಗೆ 2ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ..

2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಹಮದಾಬಾದ್:‌ 2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆಸಾರಾಂ ಈಗಾಗಲೇ ಜೋಧ್‌ಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

2018 ರಲ್ಲಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ (ಪೋಕ್ಸೋ) ಕಾಯ್ದೆಯಡಿಯಲ್ಲಿ ಅವರನ್ನು ಅಪರಾಧಿ ಎಂದು ಘೋಷಿಸಲಾಗಿತ್ತು.

ಅಕ್ಟೋಬರ್ 2013 ರಲ್ಲಿ, ಸೂರತ್ ಮೂಲದ ಮಹಿಳೆಯೊಬ್ಬರು ಆಸಾರಾಂ ಮತ್ತು ಅವರ ಪತ್ನಿ, ಮಗ ಮತ್ತು ಮಗಳು ಸೇರಿದಂತೆ ಇತರ ಏಳು ಜನರ ವಿರುದ್ಧ ಅತ್ಯಾಚಾರ ಮತ್ತು ಅಕ್ರಮ ಬಂಧನದ ಪ್ರಕರಣವನ್ನು ದಾಖಲಿಸಿದ್ದರು.

ಆರೋಪಿಗಳ ಪೈಕಿ ಒಬ್ಬರು ವಿಚಾರಣೆ ವೇಳೆ ಮೃತಪಟ್ಟಿದ್ದರು.ಸೋಮವಾರ, ಗಾಂಧಿನಗರ ನ್ಯಾಯಾಲಯವು 2013 ರ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ಘೋಷಿಸಿತ್ತು. ಆದರೆ ಅವರ ಪತ್ನಿ, ಮಗ ಮತ್ತು ಮಗಳನ್ನು ದೋಷಮುಕ್ತಗೊಳಿಸಿತ್ತು.

LEAVE A REPLY

Please enter your comment!
Please enter your name here

Hot Topics

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...