Monday, May 23, 2022

ಮಂಗಳೂರು ವಕೀಲರ ಸಂಘದ ಹಿರಿಯ ಸದಸ್ಯರಾದ ಜೋಡುಮಠ ರಾಮಚಂದ್ರ ಭಟ್ ವಿಧಿವಶ

ಮಂಗಳೂರು: ಮಂಗಳೂರು ವಕೀಲರ ಸಂಘದ ಹಿರಿಯ ಸದಸ್ಯರಾದ ಜೋಡುಮಠ ರಾಮಚಂದ್ರ ಭಟ್ ಇವರು ಇಂದು ಭಗವಂತನ ಪಾದವನ್ನು ಸೇರಿದ್ದಾರೆ.

ಶ್ರೀ ಜೆ. ಆರ್. ಭಟ್ ಸರ್ ಇವರು ನಮ್ಮ ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿದ್ದು ಸರಕಾರಿ ವಕೀಲರು ಹಾಗೂ ಹೆಚ್ಚುವರಿ ಅಭಿಯೋಜಕರೂ ಅಗಿದ್ದರು.

ಅವರು ಕಸ್ಟಂ ಇಲಾಖೆಯ ವಿಶೇಷ ಅಭಿಯೋಜಕರೂ ಆಗಿದ್ದರು ಮತ್ತು ಹಲವಾರು ಕಿರಿಯ ವಕೀಲರಿಗೆ ವೃ ತ್ತಿಯಲ್ಲಿ ಉತ್ತಮ ಮಾರ್ಗದರ್ಶನವನ್ನು ನೀಡುತ್ತಿದ್ದರು.

ಅವರು ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗಗಳಲ್ಲಿ ಪರಿಣಿತಿ ಹೊಂದಿದ್ದರು. ಇವರ ಅಗಲುವಿಕೆಯಿಂದ ಮಂಗಳೂರು ವಕೀಲರ ಸಂಘವು ಒಬ್ಬ ಮೇಧಾವಿ, ನಿಷ್ಟಾವಂತ ಮತ್ತು ಎಲ್ಲರೊಂದಿಗೆ ಬೆರೆಯುವ ಸೌಮ್ಯ ಸ್ವಭಾವದ ಮೃದುಮಾತಿನ ಹಿರಿಯ ಸಹೋದ್ಯೋಗಿಯನ್ನು ಕಳೆದುಕೊಂಡಿದೆ.

ಇನ್ನು IAS ಪರೀಕ್ಷೆ ಪಾಸಾಗಿದ್ದು ಇವರ ಅಗಲುವಿಕಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷ ಜಿನೇಂದ್ರ ಕುಮಾರ್ ಹಾಗೂ ಮುಂತಾದ ಗಣ್ಯರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...