Connect with us

    LATEST NEWS

    ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

    Published

    on

    ಮಂಗಳೂರು/ನವದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಈಗ ನವದೆಹಲಿಯ ಆಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹಿಂದೆಯೂ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಾಲಿಸಲಾಗಿತ್ತು. ಆದರೆ ಆ ಸಮಯದಲ್ಲಿ ಆರೋಗ್ಯ ಸುಧಾರಿಸಿಕೊಂಡು ವಾಪಸ್ಸು ಆಗಿದ್ದರು. ಈ ಬಾರಿಯೂ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇದನ್ನೂ ಓದಿ: ನಟ ದರ್ಶನ್ ಗೆ ಜಾಮೀನು ಸಿಕ್ಕಿದ್ದು ಇದೇ ಕಾರಣಕ್ಕೆ ?

    96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕಳೆದ ಜುಲೈನಲ್ಲಿ ಅಡ್ವಾಣಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಆಗಸ್ಟ್ ನಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

     

    LATEST NEWS

    ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!

    Published

    on

    ಮಂಗಳೂರು/ಪಂಜಾಬ್: ಕಟ್ಟಡ ಕು*ಸಿತದಿಂದ ಹಿಮಾಚಲ ಪ್ರದೇಶದ 20 ವರ್ಷದ ಯುವತಿ ಸೇರಿದಂತೆ ಇಬ್ಬರು ಮೃ*ತಪಟ್ಟ ಘಟನೆ ಶನಿವಾರ (ಡಿ.21) ಸಂಜೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದ್ದು, ಹಲವರು ಇನ್ನೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಶಂ*ಕೆ ವ್ಯಕ್ತವಾಗಿ ತೀ*ವ್ರ ಪರಿಶೀಲನೆ ನಡೆಸುತ್ತಿದ್ದಾರೆ.

    ಥಿಯೋಗ್‌ನ ದೃಷ್ಟಿ ವರ್ಮ (20) ಓರ್ವ ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕಳೆದ ರಾತ್ರಿ ಅವಶೇಷಗಳಡಿ ಸಿಲುಕಿಕೊಂಡು ಗಂ*ಭೀರ ಸ್ಥಿತಿಯಲ್ಲಿದ್ದವರನ್ನು ರಕ್ಷಿಸಿ, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದರು. ಇಂದು(ಡಿ।22) ಬೆಳಗ್ಗೆ ಮತ್ತೊಬ್ಬ ವ್ಯಕ್ತಿಯ ಮೃ*ತದೇಹ ಪ*ತ್ತೆಯಾಗಿದ್ದು, ಅವರನ್ನು ಹರಿಯಾಣದ ಅಂಬಾಲಾ ಜಿಲ್ಲೆಯ ಅಭಿಷೇಕ್ ಎಂದು ಗುರುತಿಸಲಾಗಿದೆ.

    ಘಟನೆಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಪರೀಕ್, “ಪ್ರಾಥಮಿಕ ತನಿಖೆಯಲ್ಲಿ, ಕಟ್ಟಡದ ಮಾಲಕರು ಕಟ್ಟಡದ ಪಕ್ಕದಲ್ಲಿರುವ ನಿವೇಶನದಲ್ಲಿ ಯಾವುದೇ ಅನುಮತಿಯಿಲ್ಲದೆ ಮಣ್ಣು ತೋಡುತ್ತಿದ್ದರು” ಎಂದು ತಿಳಿಸಿದ್ದಾರೆ. ಕಳೆದ 17 ಗಂಟೆಗಳಿಂದ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಇನ್ನೂ ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಶಂ*ಕೆ ವ್ಯಕ್ತವಾಗಿದೆ. ಶೇ. 60ರಷ್ಟು ಕಟ್ಟಡದ ಅ*ವಶೇಷಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡದ ಮಾಲಕರಾದ ಪರ್ವಿಂದರ್ ಸಿಂಗ್ ಹಾಗೂ ಗಗನ್ ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಸ್ಥಳದಲ್ಲಿನ ಪರಿಸ್ಥಿತಿಯ ಮೇಲೆ ಫೋನ್ ಮೂಲಕ ನಿಗಾ ವಹಿಸಿದ್ದಾರೆ.

    Continue Reading

    LATEST NEWS

    ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !

    Published

    on

    ಮಂಗಳೂರು/ಮೆಲ್ಬೋರ್ನ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬೋರ್ನ್ ನ ಎಂಸಿಜಿಯಲ್ಲಿ ಡಿ.26ರಂದು ಆರಂಭವಾಗಲಿದೆ. ಈಗಾಗಲೇ ಸರಣಿ 1-1ರಿಂದ ಸಮಬಲವಾಗಿದ್ದು, ಮುನ್ನಡೆಗಾಗಿ ಉಭಯ ತಂಡಗಳು ಸಿದ್ದತೆಯಲ್ಲಿದೆ.

    ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಅದುವೇ ಗಾಯಾಳುಗಳ ಸಮಸ್ಯೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್ ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

    ಇದನ್ನೂ ಓದಿ: ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !

    ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

    ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್ ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

    ಕೆ.ಎಲ್.ರಾಹುಲ್ ಗೆ ಗಾಯ

    ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಕೆ.ಎಲ್.ರಾಹುಲ್ ಅವರ ಕೈ ಬೆರಳಿಗೆ ಏಟು ಬಿದ್ದ ಘಟನೆ ಸಂಭವಿಸಿದೆ. ಕೂಡಲೇ ಚಿಕಿತ್ಸೆ ನೀಡಲಾಯಿತು.

    ಇದೇನೂ ಗಂಭೀರ ಸ್ವರೂಪದ ಗಾಯವಲ್ಲ ಎನ್ನಲಾಗಿದೆಯಾದರೂ, ಮುಂದಿನ ನಿರ್ಣಾಯಕ ಪಂದ್ಯಕ್ಕೂ ಮುನ್ನ ಭಾರತೀಯ ತಂಡದಲ್ಲಿ ಗಾಯದ ಭೀತಿ ಎದುರಾಗಿದೆ.

    Continue Reading

    LATEST NEWS

    ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?

    Published

    on

    ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

    ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

    ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.

    ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!

    ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.

    ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.

    ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

     

     

    Continue Reading

    LATEST NEWS

    Trending