Connect with us

DAKSHINA KANNADA

ಹಿರಿಯ ಕಾರ್ಮಿಕ ಮುಂದಾಳು ಗಿರಿಯಪ್ಪ ಇನ್ನಿಲ್ಲ..! 

Published

on

ಮಂಗಳೂರು:  ಹಿರಿಯ ಕಾರ್ಮಿಕ ನಾಯಕರೂ, CPIM ಸದಸ್ಯರಾದ ಕಾಂ.ಗಿರಿಯಪ್ಪರವರು (81ವರ್ಷ) ಅಸೌಖ್ಯದಿಂದಾಗಿ ಇಂದು  ಮುಂಜಾನೆ ಉಳ್ಳಾಲ ಕೋಡಿಯಲ್ಲಿರುವ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಕಾಂ.ಗಿರಿಯಪ್ಪರವರು ಹಂಚು ಕಾರ್ಖಾನೆಯಲ್ಲಿ ದುಡಿಯುವ ಮೂಲಕ ಕಾರ್ಮಿಕರ ಅದೆಷ್ಟೋ ನೋವು ನಲಿವುಗಳಿಗೆ ಸ್ಪಂದಿಸಿದರು.

ಆ ಮೂಲಕ ಹಂಚು ಕಾರ್ಮಿಕರ ನಾಯಕರಾಗಿ ಹೊರ ಹೊಮ್ಮಿದರು.ಇತರ ಜನವಿಭಾಗದ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಕಮ್ಯುನಿಸ್ಟ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಬೆಳೆದರು.

ತನ್ನ ಯೌವನಾವಸ್ಥೆಯಲ್ಲಿ ಹಂಚು ಕಾರ್ಮಿಕರ ಸಮರಧೀರ ಹೋರಾಟವೊಂದರಲ್ಲಿ ಭಾಗವಹಿಸಿದ್ದನ್ನು ನೆಪವೊಡ್ಡಿ ಕಾರ್ಖಾನೆಯ ಮಾಲಕರು ಕಾಂ.ಗಿರಿಯಪ್ಪರವರನ್ನು ಕೆಲಸದಿಂದ ವಜಾಗೊಳಿಸಿದರು.

ತಕ್ಷಣ ಕಾರ್ಯಪ್ರವ್ರತ್ತರಾದ ಹಂಚು ಕಾರ್ಮಿಕರ ಸಂಘಟನೆಯ ಹಾಗೂ ಪಕ್ಷದ ಜಿಲ್ಲಾ ನಾಯಕತ್ವ ಕಾಂ.ಗಿರಿಯಪ್ಪರವರನ್ನು ಬೋಳಾರದಲ್ಲಿರುವ ಹಂಚು ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಚೇರಿ ಕಾರ್ಯದರ್ಶಿಯನ್ನಾಗಿ ನೇಮಿಸಿದರು.

ಅಂದಿನಿಂದ 35 ವರ್ಷಗಳಿಗೂ ಮಿಕ್ಕಿ ಬೋಳಾರದ ಕಚೇರಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಕಾಂ.ಗಿರಿಯಪ್ಪರವರು ಕಳೆದ 8 ವರ್ಷಗಳಿಂದ ಸೇವೆಯಿಂದ ಬಿಡುಗಡೆ ಹೊಂದಿದ್ದರು.

ಕಳೆದ 5 ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿರುವ ಕಾಂ.ಗಿರಿಯಪ್ಪರವರ ಅಗಲುವಿಕೆ ದುಡಿಯುವ ವರ್ಗದ ಚಳುವಳಿಗೆ ತೀರಾ ನಷ್ಟವುಂಟಾಗಿದೆ ಎಂದು CPIM ತಿಳಿಸಿದೆ.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending