BELTHANGADY
ಹಿರಿಯ ದಲಿತ ನಾಯಕ ಪಿ.ಡೀಕಯ್ಯ ಸಾವು ಪ್ರಕರಣ-CID ತನಿಖೆಗೆ ಆದೇಶ
ಬೆಳ್ತಂಗಡಿ: ಹಿರಿಯ ಹೋರಾಟಗಾರ, ದಲಿತ ನಾಯಕ, ಬಹುಜನ ಚಳುವಳಿಯ ನೇತಾರ ಪಿ ಡೀಕಯ್ಯ ಸಾವಿನ ಪ್ರಕರಣವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ಒಪ್ಪಿಸಿದೆ.
ಜುಲೈ 6ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ ಡೀಕಯ್ಯ ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜುಲೈ 8ರಂದು ನಿಧನರಾಗಿದ್ದರು.
ಬಳಿಕ ಅಂಗಾಂಗ ದಾನ ಮಾಡಲಾಗಿತ್ತು. ಜುಲೈ 9ರಂದು ಬೆಳ್ತಂಗಡಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬೌದ್ಧ ಧರ್ಮದ ಪ್ರಕಾರ ಹುಟ್ಟೂರು ತಾಲೂಕಿನ ಕಣಿಯೂರು ಗ್ರಾಮದ ಪೊಯ್ಯದಲ್ಲಿ ಧಪನ ಕಾರ್ಯ ನಡೆದಿತ್ತು. ಬಳಿಕ ಜುಲೈ 15ರಂದು ಪಿ ಡೀಕಯ್ಯ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಿದರು.
ಜುಲೈ 18 ರಂದು ಬೆಳ್ತಂಗಡಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಶವವನ್ನು ಹೊರತೆಗೆದು ಜಿಲ್ಲೆಯ ವೈದ್ಯಕಾರಿಗಳ ತಂಡದ ಜೊತೆಗೆ ಶವ ಪರೀಕ್ಷೆ ಮಾಡಲಾಗಿತ್ತು. ಘಟನೆಯ ಬಗ್ಗೆ ವಿಸ್ಕೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು.
ಈ ಮಧ್ಯೆ ಡೀಕಯ್ಯ ಅವರು ಕುಟುಂಬಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಐಡಿ ತನಿಖೆಗೆ ಒತ್ತಾಯಿಸಿದ್ದರು.
ನವೆಂಬರ್ 4 ರಂದು ಘಟನೆಯ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಐಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ. ಒಟ್ಟಾರೆ ಇಡೀ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!