Connect with us

    LATEST NEWS

    ಯುವಕರಲ್ಲೇ ಯಾಕೆ ಹೆಚ್ಚಾಗುತ್ತಿದೆ ಹೃದಯಾಘಾತ: ICMRಗೆ ಪತ್ರ ಬರೆದ ಪತ್ರಕರ್ತ ರಾಜಾರಾಂ ತಲ್ಲೂರು

    Published

    on

    ಬೆಂಗಳೂರು: ರಾಜ್ಯದಲ್ಲಿ 30 ರಿಂದ 55ರ ಪ್ರಾಯದವರಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚುತ್ತಿರುವುದು ಮತ್ತು ಅದಕ್ಕೆ ಕಾರಣ ಪತ್ತೆ ಹಚ್ಚುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್) ಬಹಿರಂಗ ಪತ್ರ ಬರೆದಿದ್ದಾರೆ.


    ಅದರ ಯಥಾವತ್ತು ಇಲ್ಲಿದೆ
    ಇಂದು ನಾನು ಒಂದು ಕಳವಳದೊಂದಿಗೆ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ದೇಶದಾದ್ಯಂತ, ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ನಡೆದಿರುವ ಒಂದು ವಿಲಕ್ಷಣವಾದ ಬೆಳವಣಿಗೆಯತ್ತ ನಾನು ನಿಮ್ಮ ಗಮನವನ್ನು ಸೆಳೆಯಬಯಸುತ್ತೇನೆ.

    ಐಸಿಎಂಆರ್‌ ಈ ಘಟನೆಗೆ ಸಂಬಂಧಿಸಿದಂತೆ ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯಾಚರಿಸುವುದು ಅತ್ಯಗತ್ಯ ಎಂದು ನನಗನ್ನಿಸಿದ ಹಿನ್ನೆಲೆಯಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ.

    ಕೋವಿಡ್ ಜಗನ್ಮಾರಿಯ ಅವಧಿಯಲ್ಲಿ, ಕೋವಿಡ್ ಕಾರಣಕ್ಕಾಗಿ ಸಂಭವಿಸಿದ ಜೀವನಷ್ಟಗಳ ಜೊತೆ ಜೊತೆಗೇ ಹೃದಯಾಘಾತದ ಕಾರಣಕ್ಕೆ ಸಾವುಗಳು ಸಂಭವಿಸಿವೆ. ಈಗ ಕೋವಿಡ್ ತೀವ್ರತೆ ಕಡಿಮೆ ಆದ ಬಳಿಕವೂ ಈ ಸಾವಿನ ಸರಣಿ ಮುಂದುವರಿದಿದ್ದು, ದೇಶದೊಳಗೆ ದೊಡ್ಡ ಸಂಖ್ಯೆಯಲ್ಲಿ ಜನರು ಹೃದಯಾಘಾತಕ್ಕೆ ಬಲಿ ಆಗುತ್ತಿದ್ದಾರೆ.

    ರಾಜಾರಾಂ ತಲ್ಲೂರು 

    ಅದರಲ್ಲೂ ವಿಶೇಷವಾಗಿ, 30-55ರ ಪ್ರಾಯ ವರ್ಗದಲ್ಲೇ ಈ ರೀತಿಯ ಸಾವುಗಳು ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಕಳೆದ ಒಂದು ವಾರದಲ್ಲೇ ಈ ಪ್ರದೇಶದ ಪತ್ರಿಕೆಗಳಲ್ಲಿ ಕನಿಷ್ಠ 5-6ಇಂತಹ ಸಾವಿನ ವರದಿಗಳು ನನಗೆ ಓದಲು ಸಿಕ್ಕಿವೆ. ದೇಶದಾದ್ಯಂತವೂ ಇದೇ ಪರಿಸ್ಥಿತಿ ಇದೆ ಎಂಬುದು ನನ್ನ ಅಭಿಪ್ರಾಯ.

    ಹೀಗೆ ಅನಿರೀಕ್ಷಿತವಾಗಿ ನಿಧನ ಹೊಂದಿದವರೆಲ್ಲರೂ ಎಳೆಯರು ಮತ್ತು ಆರೋಗ್ಯವಂತರಾಗಿ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರು.

    ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಐಸಿಎಂಆರ್‌ ನಂತಹ ಸುಸಜ್ಜಿತ ಸಂಶೋಧನಾ ಸಂಸ್ಥೆ ಈ ವಿಚಾರದಲ್ಲಿ ಆಳವಾಗಿ ಅಧ್ಯಯನ/ ಸಂಶೋಧನೆ ನಡೆಸಿ, ಕಾರಣವನ್ನು ಪತ್ತೆಹಚ್ಚುವುದು ಬಹಳ ಮುಖ್ಯ ಎಂದು ನಾನು ನಂಬಿದ್ದೇನೆ.
    ರೀತಿಯ ಹಠಾತ್ ಸಾವಿನ ಬಗ್ಗೆ ಜನಸಾಮಾನ್ಯರಲ್ಲಿ ಹಲವು ಅಪನಂಬಿಕೆಗಳು ತಲೆ ಎತ್ತಿವೆ. ಈ ರೀತಿಯ ಸಾವುಗಳಿಗೆ ಕೋವಿಡೋತ್ತರ ದೀರ್ಘಕಾಲಿಕ ಪರಿಣಾಮಗಳು ಅಥವಾ ಕೋವಿಡ್ ಲಸಿಕೆ ಅಥವಾ ಮಾನಸಿಕ ಒತ್ತಡ / ಜೀವನ ಶೈಲಿ ಕಾರಣ ಆಗಿರಬಹುದೆಂಬ ಸಂಶಯಗಳು ಜನಮನದಲ್ಲಿ ಬೆಳೆಯುತ್ತಿವೆ.

    ಈ ಮರಣದ ಆಘಾತಗಳು ಅದಕ್ಕೆ ತುತ್ತಾದವರ ಕುಟುಂಬಗಳಲ್ಲಿ ಸಾಮಾಜಿಕ, ಆರ್ಥಿಕ ಸಂಕಟಗಳಿಗೆ ಕಾರಣವಾಗುತ್ತಿವೆ. ಯಾಕೆಂದರೆ, ಹೀಗೆ ಮೃತಪಟ್ಟಿರುವ ಹೆಚ್ಚಿನವರು ತಮ್ಮ ಕುಟುಂಬಗಳ ವರಮಾನದ ಆಧಾರಸ್ಥಂಭಗಳಾಗಿದ್ದವರು.

    ಇಂತಹ ಪ್ರಕರಣಗಳು ಹೆಚ್ಚಾದಲ್ಲಿ ಇದು ಸಾಮಾಜಿಕವಾಗಿ-ಆರ್ಥಿಕವಾಗಿ ಕ್ಷೋಭೆಗೆ ಕಾರಣವಾದರೂ ಅಚ್ಚರಿ ಇಲ್ಲ.

    ಐಸಿಎಂಆರ್‌ ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಾರಂಭಿಸಬೇಕು ಮತ್ತು ಈ ರೀತಿಯ ಸಾವುಗಳ ಮಾಹಿತಿಗಳನ್ನು ಸಂಗ್ರಹಿಸಿ, ಅದಕ್ಕೆ ಕಾರಣಗಳ ವಿಶ್ಲೇಷಣೆ ನಡೆಸಬೇಕು. ಅಂತಹ ಜೀವನಷ್ಟವನ್ನು ತಡೆಯಲು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಮೂಲಕ ನಾನು ಒತ್ತಾಯಿಸುತ್ತೇನೆ.

    ತಮ್ಮಿಂದ ಸಕಾರಾತ್ಮಕವಾದ ಮತ್ತು ಸಮಾಧಾನಕರವದ ಪ್ರತಿಕ್ರಿಯೆ ತಡಮಾಡದೇ ಬಂದೀತೆಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಅವರು ಭಾರತೀಯ ವೈದ್ಯವಿಜ್ಞಾನ ಸಂಶೋಧನಾ ಸಂಸ್ಥೆಯ ಮಹಾನಿರ್ದೇಶಕ ರಾಜೇಶ್ ಭೂಷಣ್ ಅವರಿಗೆ ಪತ್ರ ಬರೆದಿದ್ದಾರೆ.

    LATEST NEWS

    Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು

    Published

    on

    ಭಂಡಾರ ಔತಣದಲ್ಲಿ ನಾಲ್ವರು ಯುವಕರ ಗುಂಪು ಮಿಂಚಿನ ವೇಗದಲ್ಲಿ ಆಹಾರ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸಳೆದಿದೆ.

    X ನಲ್ಲಿ ಹಂಚಿಕೊಳ್ಳಲಾದ ಕ್ಲಿಪ್ ನಲ್ಲಿ, ಕೆಂಪು ಶರ್ಟ್ ಮತ್ತು ಕಪ್ಪು ಪ್ಯಾಂಟ್‌ ಧರಿಸಿರುವ ನಾಲ್ವರು ಯುವಕರು ಜನರ ಸಾಲಿನಲ್ಲಿ ವೇಗವಾಗಿ ಚಲಿಸುತ್ತ ಪೇಪರ್ ಪ್ಲೇಟ್, ಕಪ್ ಮತ್ತು ಬೌಲ್‌ಗಳನ್ನು ಹಾಕುವುದನ್ನು ನೋಡಬಹುದಾಗಿದೆ.

    ನಿಖರತೆಯೊಂದಿಗೆ ಏಕಕಾಲದಲ್ಲಿ ಇವರುಗಳು ಆಹಾರ ಬಡಿಸುವುದನ್ನು ವಿಡಿಯೋ ಒಳಗೊಂಡಿದೆ. ಮೊದಲ ಗುಂಪು ಕಾರ್ಯನಿರ್ವಹಿಸುತ್ತಿದ್ದಂತೆ, ಎರಡನೇ ಗುಂಪು ಅದೇ ವೇಗದ ಚಲನೆಯನ್ನು ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆಯುತ್ತದೆ. “MBBS (ಮಾಸ್ಟರ್ ಇನ್ ಭಂಡಾರ ಮತ್ತು ಬ್ಯಾಚುಲರ್ ಆಫ್ ಸರ್ವಿಂಗ್)” ಎಂಬ ಶೀರ್ಷಿಕೆಯ ಈ ವೀಡಿಯೋ ಬಳಕೆದಾರರು ಬಡಿಸುವ ಅವರ ವೇಗ ಮತ್ತು ಕೌಶಲ್ಯದ ಬಗ್ಗೆ ವಿಸ್ಮಯ ವ್ಯಕ್ತಪಡಿಸಿದ್ದಾರೆ.

    Watch Video:

    Continue Reading

    LATEST NEWS

    ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ

    Published

    on

    ಮೈಸೂರು: ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿದ್ಯಾಸಿರಿ ಯೋಜನೆಯಡಿ ಒದಗಿಸುವ 1500 ರೂ. ವಿದ್ಯಾರ್ಥಿ ವೇತನವನ್ನು ಮುಂದಿನ ವರ್ಷದಿಂದ 2000ಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

    ಮೈಸೂರಿನ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು ಇವು ಎಂದು ತಿಳಿಸಿದರು.

    ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅನ್ನಭಾಗ್ಯ ಸಿಗಲಿ ಎನ್ನುವ ಉದ್ದೇಶದಿಂದಲೇ ಆ ಯೋಜನೆ ಶುರು ಮಾಡಿದ್ದಾಗಿ ಹೇಳಿದರು.

    ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿಯ ಸ್ವತ್ತು ಕೂಡಾ ಅಲ್ಲ. ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ. ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿಎಸ್‌ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

    Continue Reading

    Baindooru

    ಜಾರ್ಖಂಡ್‌ನಲ್ಲಿ ಬಿಗ್‌ ಟ್ವಿಸ್ಟ್‌; ಜೆಎಂಎಂ ಮುನ್ನಡೆ – ಎನ್‌ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ

    Published

    on

    ರಾಂಚಿ: ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ.

    ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು. ಆದರೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಮತ್ತೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಬೆಳಗ್ಗೆ 10.30ಕ್ಕೆ ರಾಜ್ಯದ 81 ಸ್ಥಾನಗಳ ಪೈಕಿ 51ರಲ್ಲಿ ಇಂಡಿಯಾ ಮೈತ್ರಿಕೂಟ ಮುಂದಿದೆ. 28 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.

    ಜಾರ್ಖಂಡ್ ವಿಧಾನಸಭೆಗೆ ಬಹುಮತಕ್ಕೆ 41 ಸ್ಥಾನಗಳು ಅಗತ್ಯವಿದೆ. ರಾಜ್ಯಕ್ಕೆ ನ.13 ರಂದು ಮೊದಲ ಹಂತದ ಮತದಾನವು 43 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನ ನಡೆದಿತ್ತು.

    ಮ್ಯಾಟ್ರಿಜ್ ಪ್ರಕಾರ, ಎನ್‌ಡಿಎ 42-47 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಜೆಎಂಎಂ ನೇತೃತ್ವದ ಮೈತ್ರಿಕೂಟವು 25-30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಬಹುದು ಎಂದು ಸಮೀಕ್ಷೆಗಳು ಹೇಳಿತ್ತು. ಆದರೆ, ಬಹುಪಾಲು ಸಮೀಕ್ಷೆಗಳು ಉಲ್ಟ ಆದಂತಿದೆ. ಆದಾಗ್ಯೂ, ಆಕ್ಸಿಸ್ ಮೈ ಇಂಡಿಯಾ ಮತ್ತು ಪಿ ಮಾರ್ಕ್ ಸಮೀಕ್ಷೆ ಭಿನ್ನವಾಗಿತ್ತು. ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್‌ 49-59 ಮತ್ತು ಎನ್‌ಡಿಎ ಮೈತ್ರಿಕೂಟ 37-47 ಸ್ಥಾನ ಪಡೆಯಬಹುದು ಎಂದು ಅಂದಾಜಿಸಿದ್ದವು. ಬಹುಪಾಲು ಇದು ನಿಜವಾದಂತೆ ಕಾಣುತ್ತಿದೆ.

    Continue Reading

    LATEST NEWS

    Trending