Connect with us

DAKSHINA KANNADA

ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ..

Published

on

ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಡುಪಿ ಜಿಲ್ಲೆಯ ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು.

ಮಂಗಳೂರು ವಿ.ವಿ. ಯ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ.

ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿದ್ದರು. ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAMನ ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು.

MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರ ತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು.

ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು.ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.

ಸಂತಾಪ: ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending