Connect with us

MANGALORE

ಮೂಡುಬಿದಿರೆ: ನಾಳೆಯಿಂದ ಆಳ್ವಾಸ್‌ನಲ್ಲಿ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

Published

on

ಮೂಡುಬಿದಿರೆ: ಆಳ್ವಾಸ್‌ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಆಶ್ರಯದಲ್ಲಿ ಮಾ. 2ರಿಂದ 6 ರವರೆಗೆ 67ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


ದೇಶದ 29 ರಾಜ್ಯಗಳಿಂದ ಹಾಗೂ ಸಾರ್ವಜನಿಕ ವಲಯಗಳಿಂದ ಒಟ್ಟು 700 ಮಂದಿ ಕ್ರೀಡಾಪಟುಗಳು ಹಾಗೂ 500 ಮಂದಿ ಕ್ರೀಡಾಧಿಕಾರಿಗಳು ಈ ಕೂಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ತಂಡಗಳಲ್ಲದೆ ಭಾರತೀಯ ರೈಲ್ವೇಸ್, ಮೇಜರ್‌ಪೋರ್ಟ್ಸ್, ಕೆನರಾ ಬ್ಯಾಂಕ್, ಇಸ್ರೋ, ಡಿ.ಎ.ಇ. ತಂಡಗಳು ಭಾಗವಹಿಸಲಿದ್ದು,

ಇದು ರಾಷ್ಟ್ರದ ಅತ್ಯುನ್ನತ ಸ್ಪರ್ಧಾಕೂಟವಾಗಿರುತ್ತದೆ. ಪಂದ್ಯಾಟಗಳು ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದ್ದು 8 ಆವೆ ಮಣ್ಣಿನ ಅಂಗಣಗಳು ಸಜ್ಜುಗೊಂಡಿದೆ.

ರಾಷ್ಟ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ಫೈನಲ್ಸ್ ಸಹಿತ ಪ್ರಮುಖ ಪಂದ್ಯಗಳನ್ನು ಒಳಾಂಗಣ ಹೊನಲು ಬೆಳಕಿನ ಕೃತಕ ಹುಲ್ಲು ಹಾಸಿನ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು,

ವೀಕ್ಷಕರಿಗೆ ಅನುಕೂಲವಾಗುವಂತೆ ಡಿಜಿಟಲ್ ಸ್ಕೋರಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪಂದ್ಯಾವಳಿಯನ್ನು ನೇರ ಪ್ರಸಾರ ಮಾಡಲು ದೇಶದ ಹೆಸರಾಂತ ಇSI ಕ್ರೀಡಾ ನೆಟ್‌ವರ್ಕ್ ಮಾಧ್ಯಮ ಮುಂದಾಗಿದ್ದು,

ಪಂದ್ಯಾವಳಿಗಳನ್ನು ನೇರ ಪ್ರಸಾರದ ಮೂಲಕ ದೇಶದೆಲ್ಲೆಡೆ ವೀಕ್ಷಿಸಬಹುದು. ಕರ್ನಾಟಕ ರಾಜ್ಯ ಪ್ರತಿನಿಧಿಸುವ 10 ಜನರ ತಂಡದಲ್ಲಿ ಮಹಿಳಾ ಹಾಗೂ ಪುರುಷರ ಎರಡೂ ತಂಡಗಳಲ್ಲಿ ತಲಾ 7 ಜನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ಮಾರ್ಚ್ 2 ರಂದು ಸಂಜೆ 4:30 ಕ್ಕೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಚಾಂಪಿಯನ್‌ಶಿಪ್‌ನ್ನು ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಪಂದ್ಯಾವಳಿಗಳು ಮಾರ್ಚ್ 3 ರಂದು ಮುಂಜಾನೆ ಆರಂಭವಾಗಲಿದ್ದು ಮಾರ್ಚ್ 6 ರ ಸಂಜೆ 6.30 ರ ನಂತರ ಆಳ್ವಾಸ್ ಪುತ್ತಿಗೆ ಕ್ಯಾಂಪಸ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಫೈನಲ್ಸ್ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

Published

on

ಉಪ್ಪಿನಂಗಡಿ : ಕೋವಿಶೀಲ್ಡ್‌ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.


ಗಾರೆ ಕೆಲಸ ಮಾಡಿಕೊಂಡು ಆರೋಗ್ಯವಾಗಿದ್ದ 27 ವರ್ಷದ ಜನಾರ್ದನ ಎಂಬ ಯುವಕ ಅಸು ನೀಗಿದ್ದಾನೆ. ಉಪ್ಪಿನಂಗಡಿ ಸಮೀಪದ ನಿನ್ನಿಕಲ್ಲು ನಿವಾಸಿಯಾಗಿದ್ದ ಜನಾರ್ದನ ಮೇಸ್ತ್ರಿಯಾಗಿ ಗಾರೆ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ರಜೆ ಹಾಕಿ ಬಂದಿದ್ದ ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ನಿದ್ರೆಗೆ ಜಾರಿದ ಜನಾರ್ದನ್ ಮತ್ತೆ ಮೇಲೆದ್ದಿಲ್ಲ.

ಇದನ್ನೂ ಓದಿ : ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

ಮಗ ಮಲಗಿದ್ದಾನೆ ಅಂತ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು ಸಂಜೆ ಬಂದು ಮಗನನ್ನು ಎಬ್ಬಿಸಿದಾಗಲೇ ವಿಚಾರ ಗೊತ್ತಾಗಿದೆ. ಕರೆದರೂ ಮಗ ಎದ್ದಿಲ್ಲ ಎಂದು ತಾಯಿ ಮಗನನ್ನು ಅಲುಗಾಡಿಸಿ ಎಚ್ಚರಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಆ ವೇಳೆ ಯಾವುದೇ ರೆಸ್ಪಾನ್ಸ್‌ ಇಲ್ಲದ ಕಾರಣ ತಾಯಿಗೆ ಅನುಮಾನ ಬಂದು ಉಸಿರು ಪರಿಶೀಲಿಸಿದಾಗ ಮಗ ಮೃ*ತಪಟ್ಟಿರುವುದು ಆರಿವಾಗಿದೆ.

 

Continue Reading

DAKSHINA KANNADA

ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ

Published

on

ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ “ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು”.

ಇಲ್ಲಿ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ, ಭಕ್ತರ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುತ್ತದೆ ಎಂಬ ನಂಬಿಕೆಯಿದೆ. ಈ ಕ್ಷೇತ್ರದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯ ಏರುತ್ತಿವೆ. ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿವೆ.

ಇದೀಗ ಶಿಥಿಲಾವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದು, ಆ ಪ್ರಕಾರ ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ( ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದೆ. ಅಂತೆಯೇ, ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು, ಅದರ ಪುನಃ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆದಿದೆ.

ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮ ನಡೆಯಿತು. ಇದೇ ಸಂದರ್ಭ ದೈವಸ್ಥಾನದ ಪುನಃ ಪ್ರತಿಷ್ಠಾ ಕಾರ್ಯಕ್ಕಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು, ಊರಿನ ಪರ ಊರಿನ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.

Continue Reading

LATEST NEWS

Trending