Home ಬಂಟ್ವಾಳ ಹಿರಿಯ ಛಾಯಾಗ್ರಾಹಕ ಸ್ಟುಡಿಯೋ ಮಾಲಕ ಪದ್ಮನಾಭ ರಾವ್ ಇನ್ನಿಲ್ಲ

ಹಿರಿಯ ಛಾಯಾಗ್ರಾಹಕ ಸ್ಟುಡಿಯೋ ಮಾಲಕ ಪದ್ಮನಾಭ ರಾವ್ ಇನ್ನಿಲ್ಲ

ಹಿರಿಯ ಛಾಯಾಗ್ರಾಹಕ ಸ್ಟುಡಿಯೋ ಮಾಲಕ ಪದ್ಮನಾಭ ರಾವ್ ಇನ್ನಿಲ್ಲ

ಬಂಟ್ವಾಳ: ಹಿರಿಯ ಛಾಯಾಗ್ರಾಹಕ, ಕಲಾವಿದ ಪಲ್ಲವಿ ಸ್ಟುಡಿಯೋ ಮಾಲಕ ಪದ್ಮನಾಭ ರಾವ್ ಅವರು ನಿಧನರಾಗಿದ್ದಾರೆ. ರಾವ್ ಅವರು ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗಳನ್ನು ಅಗಲಿದ್ದಾರೆ.

ಬಂಟ್ವಾಳ ತಾಲೂಕಿನ ಬಿಸಿ ರೋಡ್‌ ಪರಿಸರದಲ್ಲಿ ಪದ್ದಣ್ಣ ಎಮದೇ ಖ್ಯಾತರಾಗಿದ್ದ 63 ವರ್ಷ ರಾವ್‌ ಅವರು ಕೆಲ ತಿಂಗಳಿನಿಂದ ಆರೋಗ್ಯದಿಂದ ಬಳಲುತ್ತಿದ್ದರು.

ತೀವ್ರ ಆನಾರೋಗ್ಯದ ಹಿನ್ನಲೆ ಗದಗದಲ್ಲಿರುವ ಪತ್ನಿಯ ತಾಯಿ ಮನೆಗೆ ಕರೆದುಕೊಂಡು ಹೋಗಿದ್ದರು. ಆದರೆ ತೀವ್ರ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ಪಿ.ಯು.ಸಿ ವರಗೆ ವಿದ್ಯಾಭ್ಯಾಸ ಮಾಡಿದ ಪದ್ಮನಾಭ ರಾವ್ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದರು.

ಉದ್ಯೋಗ ಕ್ಕೆ ರಾಜೀನಾಮೆ ನೀಡಿದ ಬಳಿಕ ಛಾಯಾಗ್ರಾಹಣ ಬದುಕನ್ನು ನೆಚ್ಚಿಕೊಂಡಿದ್ದರು. 1984 ರಲ್ಲಿ ಕಪ್ಪು ಬಿಳುಪು ಛಾಯಗ್ರಾಹಣದ ಮೂಲಕ ಛಾಯಾಗ್ರಾಹಣ ಬದುಕಿಗೆ ಪಾದಾರ್ಪಣೆ ಮಾಡಿದ ಇವರು ಬಳಿಕ ಛಾಯಾಗ್ರಹಣ ದ ಅನೇಕ ಏಳುಬೀಳುಗಳನ್ನು ಕಂಡವರು.

ಬಂಟ್ವಾಳ ಪೋಟೋ ಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿಯೂ ಸೇವೆ ನೀಡಿದ್ದಾರೆ. ಅನೇಕ ಸಾಮಾಜಿಕ ಚಟುವಟಿಕೆಗಳ ಮೂಲಕ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು.ನಾಟಕ ಕಲಾವಿದರಾಗಿಯೂ ಅನೇಕ ನಾಟಕಗಳಲ್ಲಿ ಪಾತ್ರ ಮಾಡಿದ್ದರು.ಇವರ ಪಲ್ಲವಿ ಸ್ಟುಡಿಯೋ ಅನೇಕ ಛಾಯಾಗ್ರಾಹಕ ರಿಗೆ ವೃತ್ತಿ ಬದುಕು ನೀಡಿದೆ ಜೊತೆಗೆ ಅನೇಕ ಕಲಾವಿದರಿಗೂ ಆಶ್ರಯ ನೀಡಿತ್ತು.

ಪದ್ಮರಾವ್ ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ.ರಮಾನಾಥ ರೈ, ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಮೋಹನ್ ಬಿ, ಛಾಯಾಗ್ರಾಹಕ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ತಾಲೂಕು ಅಧ್ಯಕ್ಷ ಕುಮಾರ ಸ್ವಾಮಿ ಸಹಿತ ಆನೇಕರು ಸಂತಾಪ ಸೂಚಿಸಿದ್ದಾರೆ.

ವಿಡಿಯೋಗಾಗಿ..

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...