DAKSHINA KANNADA
ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’
Published
1 day agoon
ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.
ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.
DAKSHINA KANNADA
ಜ.10 ರಂದು ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ
Published
32 minutes agoon
07/01/2025By
NEWS DESK4ಮಂಗಳೂರು : ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10 ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು ಎಂದು ದೇವಳದ ಮ್ಯಾನೇಜಿಂಗ್ ಟ್ರಸ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು, ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ಮಹಾಕುಂಭ ಮೇಳಕ್ಕೆ ನಾಗಾಸಾಧುಗಳ ಗ್ರ್ಯಾಂಡ್ ಎಂಟ್ರಿ..!
ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತನಾಡಿ, ಅಂದು ಬೆಳಗ್ಗೆ 7 ರಿಂದ 8ರ ವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1 ರಿಂದ 3ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ
Published
2 hours agoon
07/01/2025By
NEWS DESK2ಮಂಗಳೂರು: ನಗರದಲ್ಲಿ ಕರ್ನಾಟಕದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್(DWR) ಅಳವಡಿಕೆ ಕಾರ್ಯ ಕೆಲವೇ ದಿನಗಳಲ್ಲಿ ಸಂಪೂರ್ಣಗೊಳ್ಳಲಿದೆ. ತಾಂತ್ರಿಕ ತೊಂದರೆಗಳಿಂದ ಸ್ವಲ್ಪ ವಿಳಂಬವಾದರೂ ಜನವರಿ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿದ್ದಾರೆ.
ಇಲಾಖೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ TMD ಬೆಂಗಳೂರು ಶನಿವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಪುವಿಯರಸನ್ ಅವರು, ಆರಂಭದಲ್ಲಿ ಜನವರಿ 15 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದ್ದ ರಾಡಾರ್ ಈಗ ಈ ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಪ್ರಾರಂಭಿಸುವ ಭರವಸೆ ಇದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ (KSNDMC) ಆಯೋಜಿಸಲಾದ ಕಾರ್ಯಾಗಾರವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಮತ್ತು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಕೃಷಿ ಹವಾಮಾನ ವಿಭಾಗದ ಕೊಡುಗೆಗಳೊಂದಿಗೆ ಹಲವಾರು ಟೆಕ್ನಿಕಲ್ ಸೆಷನ್ಸ್ ಗಳನ್ನು ಒಳಗೊಂಡಿತ್ತು.
ಕಾರ್ಯಾಗಾರದಲ್ಲಿ ಬೆಂಗಳೂರಿನಲ್ಲಿ S-ಬ್ಯಾಂಡ್ DWR ಅನ್ನು ಸ್ಥಾಪಿಸುವಲ್ಲಿ ಐಎಂಡಿ ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ಪುವಿಯರಸನ್ ಚರ್ಚಿಸಿದರು. ಯೋಜನೆಯು ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದೆ. ಏಕೆಂದರೆ ಐಎಂಡಿಗೆ ಟವರ್ ಮತ್ತು ಯುಟಿಲಿಟಿ ಕೋಣೆಗೆ 30×30 ಮೀಟರ್ ಪ್ಲಾಟ್ ಅಗತ್ಯವಿದೆ ಎಂದು ವಿವರಿಸಿದರು.
ಕದ್ರಿ ಬಳಿ ಸ್ಥಾಪಿಸಲಾಗುತ್ತಿರುವ ಮಂಗಳೂರು ರಾಡಾರ್ 250-300 ಕಿಮೀ ವ್ಯಾಪ್ತಿಯನ್ನು ಒಳಗೊಂಡಿದೆ. ಆಗುಂಬೆ, ಹುಲಿಕಲ್, ತಲಕಾವೇರಿ, ಕೆರೆಕಟ್ಟೆ ಮತ್ತು ಭಾಗಮಂಡಲ ಸೇರಿದಂತೆ ಮಾನ್ಸೂನ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಕರ್ನಾಟಕದ ಪ್ರದೇಶಗಳಿಗೆ ವರ್ಧಿತ ಹವಾಮಾನ ಮುನ್ಸೂಚನೆಯನ್ನು ಒದಗಿಸುತ್ತದೆ. ಪುವಿಯರಸನ್ ಅವರು ಧಾರವಾಡದಲ್ಲಿ X-ಬ್ಯಾಂಡ್ DWR ಯೋಜನೆಗಳನ್ನು ಮತ್ತು ಹೊನ್ನಾವರದಲ್ಲಿ S-ಬ್ಯಾಂಡ್ ರಾಡಾರ್ಗಳು ಮತ್ತು ಬಳ್ಳಾರಿಯಲ್ಲಿ C-ಬ್ಯಾಂಡ್ ರಾಡಾರ್ಗಳ ಪ್ರಸ್ತಾಪವನ್ನು ಪ್ರಸ್ತಾಪಿಸಿದರು.
ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಯಾವುದೇ ಡಾಪ್ಲರ್ ರಾಡಾರ್ ಇರುವುದಿಲ್ಲ. ಈ ಹಿನ್ನೆಲೆ ಕರ್ನಾಟಕವು ನಿಖರ ಹವಾಮಾನ ಮುನ್ಸೂಚನೆಗಾಗಿ ಗೋವಾ, ಹೈದರಾಬಾದ್, ಚೆನ್ನೈಯ ರಾಡಾರ್ಗಳನ್ನು ಅವಲಂಬಿಸಿದೆ.
ಕಾರ್ಯಾಗಾರದಲ್ಲಿ KSNDMC ನಿರ್ದೇಶಕ ಭೋಯಾರ್ ಹರ್ಷಲ್ ನಾರಾಯಣರಾವ್ ಅವರು ಕರ್ನಾಟಕದ ನೈಸರ್ಗಿಕ ವಿಕೋಪಗಳ ದುರ್ಬಲತೆಯನ್ನು ಚರ್ಚಿಸಿದರು. ರಾಜ್ಯದಲ್ಲಿ ಶೇ.80ರಷ್ಟು ಬರಪೀಡಿತವಾಗಿದ್ದು, ಕಳೆದ 23 ವರ್ಷಗಳಲ್ಲಿ 16 ವರ್ಷ ಬರಗಾಲಕ್ಕೆ ತುತ್ತಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಕೊಡಗಿನಂತಹ ಜಿಲ್ಲೆಗಳಲ್ಲಿ ಭೂಕುಸಿತದಿಂದ ವ್ಯಾಪಕ ಹಾನಿ ಉಂಟಾಗಿದೆ. 2018 ರಿಂದ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ಭೂಕುಸಿತಗಳು ಸಂಭವಿಸಿವೆ ಎಂದರು.
DAKSHINA KANNADA
ರಿವಾಲ್ವರ್ನಿಂದ ಆಕಸ್ಮಿಕವಾಗಿ ಸಿ*ಡಿದ ಗುಂ*ಡು; ಯುವಕನಿಗೆ ಗಂಭೀ*ರ ಗಾ*ಯ
Published
3 hours agoon
07/01/2025By
NEWS DESK4ಮಂಗಳೂರು : ಆಟದ ಪಿಸ್ತೂಲ್ ಎಂದು ಭಾವಿಸಿ ಟೇಬಲ್ ಮೇಲಿದ್ದ ರಿಯಲ್ ರಿವಾಲ್ವರ್ ಎತ್ತಿಕೊಂಡು ಹೊಟ್ಟೆಗೆ ಇಟ್ಟು ಟ್ರಿಗರ್ ಅದುಮಿದ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮಂಗಳೂರಿನ ಹೊರವಲಯ ವಾಮಂಜೂರು ಬಳಿ ಈ ಘಟನೆ ನಡೆದಿದೆ. ಗಾಯಾಳು ಹೆಸರು ಸಫ್ವಾನ್ ಎಂಬ ಮಾಹಿತಿ ಲಭ್ಯವಾಗಿದೆ.
ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಬಜಾರ್ನಲ್ಲಿ ಜನವರಿ 6 ರಂದು ಈ ಘಟನೆ ನಡೆದಿದ್ದು, ಸೆಕೆಂಡ್ ಹ್ಯಾಂಡ್ ಐಟಂ ಖರೀದಿ ಮಾಡಲು ಈತ ಅಂಗಡಿಯೊಂದಕ್ಕೆ ಬಂದಿದ್ದ. ಭಾಸ್ಕರ್ ಎಂಬವರು ಅಂಗಡಿಯ ಟೇಬಲ್ ಮೇಲೆ ರಿವಾಲ್ವರ್ ಇರಿಸಿ ಒಳಗೆ ಹೋದ ಸಂದರ್ಭದಲ್ಲಿ ಸಫ್ವಾನ್ ರಿವಾಲ್ವಾರ್ ಕೈಗೆತ್ತಿಕೊಂಡಿದ್ದಾನೆ.
ಇದನ್ನೂ ಓದಿ : 19 ವರ್ಷದಿಂದ ತಲೆ ಮರೆಸಿಕೊಂಡಿದ್ದ ಸೇನಾ ಸಿಬ್ಬಂದಿ..! AI ತಂತ್ರಜ್ಞಾನದಿಂದ ಅಂದರ್..!
ಆಟದ ಪಿಸ್ತೂಲ್ ಇರಬೇಕು ಎಂದು ಅದನ್ನು ಕೈನಲ್ಲಿ ಹಿಡಿದು ತಮಾಷೆಗೆ ಹೊಟ್ಟೆಗೆ ಇಟ್ಟು ಟ್ರಿಗರ್ ಅದುಮಿದ್ದಾನೆ. ರಿವಾಲ್ವರ್ ನಿಂದ ಸಿಡಿದ ಗುಂ*ಡು ಆತನ ಹೊಟ್ಟೆಗೆ ನುಸುಳಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
LATEST NEWS
ಪಾಳುಬಿದ್ದ ಮನೆಯ ಫ್ರಿಡ್ಜ್ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆ!
ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ
ಮಹಾಕುಂಭ ಮೇಳಕ್ಕೆ ನಾಗಾಸಾಧುಗಳ ಗ್ರ್ಯಾಂಡ್ ಎಂಟ್ರಿ..!
ಐಸಿಸಿಯಿಂದ ಹೊಸ ನಿಯಮ ರೂಪಿಸಲು ಚಿಂತನೆ; ಟು-ಟೈರ್ ಟೆಸ್ಟ್ ನಿಯಮಕ್ಕೆ ಸಿದ್ದತೆ ?
Trending
- DAKSHINA KANNADA6 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- DAKSHINA KANNADA4 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- BIG BOSS3 days ago
2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?
- BIG BOSS4 days ago
BBKS11: ಬಿಗ್ ಬಾಸ್ ವೀಕ್ಷಕರ ಮನಗೆದ್ದ ಮೋಕ್ಷಿತಾ ಮಾತು.. ಫ್ಯಾನ್ಸ್ಗಳಿಂದ ಫುಲ್ ಮಾರ್ಕ್ಸ್!