Connect with us

    DAKSHINA KANNADA

    ಕಳಚಿದ ಯಕ್ಷಗಾನದ ಮತ್ತೊಂದು ಕೊಂಡಿ : ಯಕ್ಷ ಪ್ರತಿಭೆ ಮಲ್ಪೆ ಎಂ.ಆರ್. ವಾಸುದೇವ ಸಾಮಗರು ನಿಧನ..!

    Published

    on

    ಕಳಚಿದ ಯಕ್ಷಗಾನದ ಮತ್ತೊಂದು ಕೊಂಡಿ : ಯಕ್ಷ ಪ್ರತಿಭೆ ಮಲ್ಪೆ ಎಂ.ಆರ್. ವಾಸುದೇವ ಸಾಮಗರು ನಿಧನ..!

    ಉಡುಪಿ: ಯಕ್ಷಗಾನದ ಮತ್ತೊಂದು ಕೊಂಡಿ ಕಳಚಿದೆ. ಯಕ್ಷಗಾನ ತಾಳಮದ್ದಳೆಯ ಅರ್ಥದಾರಿ ಮಲ್ಪೆ ವಾಸುದೇವ ಸಾಮಗರು (71) ಇಂದು ಶನಿವಾರ ನಿಧನರಾದರು.  

    ಮೃತರಿಗೆ ಪತ್ನಿ ಹಾಗೂ ಒಬ್ಬರು ಪುತ್ರ ಇದ್ದಾರೆ. ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಸಾಮಗರು ಚಿಕಿತ್ಸೆಗೆ ಸ್ಪಂದಿಸದೆ ಬೆಳಗಿನ ಜಾವ 3ಗಂಟೆಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಮಲ್ಪೆ ವಾಸುದೇವ ಸಾಮಗರು ಯಕ್ಷ ದಿಗ್ಗಜರೆರೆನಿಸಿಕೊಂಡಿದ್ದ ಪ್ರಸಿದ್ಧ ಹರಿದಾಸರಾದ ಮಲ್ಪೆ ರಾಮದಾಸ ಸಾಮಗರ ಪುತ್ರರು. ಮಲ್ಪೆ ಶಂಕರ ನಾರಾಯಣ ಸಾಮಗರು ಇವರ ದೊಡ್ಡಪ್ಪ ಹಾಗೂ ಗುರುಗಳು.

    ತೆಂಕು ಹಾಗೂ ಬಡಗು ಎರಡೂ ಯಕ್ಷಗಾನ ಪ್ರಕಾರಗಳಲ್ಲಿ ಹಿರಿಯ ಕಲಾವಿದರಾಗಿದ್ದ ವಾಸುದೇವ ಸಾಮಗರು 80 ಪ್ರಸಂಗಗಳ ಪುಸ್ತಕ ರಚಿಸಿದ್ದಾರೆ. ಅವರ ನಿಧನದಿಂದ ಯಕ್ಷಗಾನ ವಿದ್ವತ್ ಪರಂಪರೆಯ ಅಮೂಲ್ಯ ಕೊಂಡಿ ಕಳಚಿದಂತಾಗಿದೆ.

    ತೆಂಕು-ಬಡಗು ತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟ ವಾಸುದೇವ ಸಾಮಗರ ತಂದೆ ಮತ್ತು ದೊಡ್ಡಪ್ಪ ಆಗಿನ ಮಹಾನ್‌ ಕಲಾವಿದರು ಮತ್ತು ಹರಿದಾಸರಾದ ಕಾರಣ ಇವರು ಸಹಜವಾಗಿಯೇ ಯಕ್ಷಗಾನದ ಒಲವು ಹೊಂದಿದ್ದರು.

    ಕೋಟ ಶ್ರೀಧರ ಹಂದೆಯವರ ಒತ್ತಾಸೆಯ ಮೇರೆಗೆ ಪ್ರಥಮ ಬಾರಿಗೆ ದೊಡ್ಡ ಕೂಟದಲ್ಲಿ ಅರ್ಥದಾರಿಯಾಗಿ ಗಮನ ಸೆಳೆದು ಅವರದ್ದೇ ಯಜಮಾನಿಕೆಯ ಅಮೃತೇಶ್ವರಿ ಮೇಳದಲ್ಲಿ ವೃತ್ತಿರಂಗಕ್ಕೆ ಕಾಲಿಟ್ಟರು.

    ನಾರಣಪ್ಪ ಉಪ್ಪೂರರ ಒಡನಾಟದದಲ್ಲಿ ಪರಿಪೂರ್ಣ ಕಲಾವಿದರಾಗಿ ಆ ಮೇಳದಲ್ಲಿ ಗುರುತಿಸಿಕೊಂಡರು.ಅಲ್ಲಿ ದೊಡ್ಡ ಸಾಮಗರು, ಚಿಟ್ಟಾಣಿಯವರು, ಕೋಟ ವೈಕುಂಠ, ಎಂ.ಎ.ನಾಯಕ್‌, ನಗರ ಜಗನ್ನಾಥ ಶೆಟ್ಟಿ, ಗೋಡೆ ನಾರಾಯಣ ಹೆಗಡೆಯವರಂತ ಘಟಾನುಘಟಿಗಳ ಸಾಂಗತ್ಯ ದೊರೆಯಿತು.

    ಆಗ ಪ್ರದರ್ಶನಗೊಳ್ಳುತ್ತಿದ್ದ ಯಕ್ಷಲೋಕ ವಿಜಯ ಪ್ರಸಂಗದ ಪ್ರದೀಪನ ಪಾತ್ರ ಅವರಿಗೆ ಅಪಾರ ಜನಮನ್ನಣೆ ಗಳಿಸಿಕೊಟ್ಟಿತು.

    BELTHANGADY

    ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ

    Published

    on

    ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.


    ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
    ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    Published

    on

    ಮಂಗಳೂರು : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌  ಬಂಧಿತರು.  ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್‌ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್‌ನ ಸಹಕಾರದಲ್ಲಿ ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಂಡು  ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.

    Continue Reading

    DAKSHINA KANNADA

    ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    Published

    on

    ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್‌ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.
    ಗುತ್ತಿಗೆದಾರರಿಂದ ಲಂಚ ಸ್ವೀಕಾರ:
    ಪಿಡಬ್ಲ್ಯೂಡಿ ಕ್ಲಾಸ್‌ ವನ್‌ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆ ವಹಿಸಿ ಕೆಲಸ ನಿರ್ವಹಿಸುತ್ತಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯವರು ದೂರು ನೀಡಿದ್ದಾರೆ. ಕಾಮಗಾರಿಯ ಮೊತ್ತ 9,77,154 ರೂಪಾಯಿಗಳ ಬಿಲ್ಲು ಮಂಜೂರಾತಿಯಾಗಿದ್ದು, ಜೂನಿಯ‌ರ್ ಎಂಜಿನಿಯರ್ ನಾಗರಾಜು ಅವರು 37,000 ರೂಪಾಯಿ ಹಾಗೂ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು ಮುಂಗಡವಾಗಿ 7000 ರೂ. ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು.
    ಈ ದೂರಿನ ಹಿನ್ನೆಲೆಯಿಂದ ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಪಟ್ಟಣ ಪಂಚಾಯಿತಿ ದಾಳಿಗೆ ವ್ಯವಸ್ಥೆ ಮಾಡಿ ಆರೋಪಿಗಳಾದ ಜೂನಿಯರ್ ಎಂಜಿನಿಯರ್ ನಾಗರಾಜುರಿಂದ 30 ಸಾವಿರ ರೂಪಾಯಿ ಹಾಗೂ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿಯವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಅವರನ್ನು ಸೆರೆ ಹಿಡಿಯಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಡಾ. ಉಪಾಧೀಕ್ಷಕರಾದ ಗಾನಾ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

    ವಿಡಿಯೋ ನೋಡಿ:

    Continue Reading

    LATEST NEWS

    Trending