Wednesday, June 29, 2022

ಹಿರಿಯ ಭಾಗವತ ಕಾಟುಕುಕ್ಕೆ ಕೊರಗಪ್ಪ ನಾಯ್ಕ (80) ಇನ್ನಿಲ್ಲ..!

ಮಂಗಳೂರು :  ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ದೀರ್ಘಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ ಅವರಿಗೆ 80 ವರ್ಷ ವಯಸ್ಸಾಗಿತ್ತು.

 

ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ ಆಕರ್ಷಿತರಾದ ಕೊರಗಪ್ಪ ನಾಯ್ಕರು ಭಾಗವತಿಕೆಯಲ್ಲಿಯೂ ಬಲಿಪ ಶೈಲಿಯ ಪ್ರತಿನಿಧಿಯಾಗಿದ್ದರು.

ಕಟೀಲು ಒಂದೇ ಮೇಳವಾಗಿದ್ದಾಗ ಸಂಗೀತಗಾರರಾಗಿ ಸೇರಿದ ಕೊರಗಪ್ಪ ನಾಯ್ಕರು ದೀರ್ಘಕಾಲ ಇರಾ ಗೋಪಾಲಕೃಷ್ಣ ಕುಂಡೆಚ್ಚ ಭಾಗವತರಿಗೆ ಸಹಾಯಕ ಭಾಗವತರಾಗಿ ಸೇವೆಸಲ್ಲಿಸಿದ್ದರು.

ಮುಖ್ಯ ಮದ್ದಲೆಗಾರರಾಗಿದ್ದ ನಿಡ್ಲೆ ನರಸಿಂಹ ಭಟ್ಟರು, ಅಡೂರು ಕೃಷ್ಣ ಮದ್ಲೆಗಾರರು, ಅಡೂರು ಸುಂದರ ರಾಯರಂಥವರ ಜತೆಗೆ ಒಡನಾಟ ಹೊಂದಿದ್ದರು. ದ್ದರು. 70-90 ರ ದಶಕಗಳಲ್ಲಿ ಕದ್ರಿ ವಿಷ್ಣು, ಕುಂಬಳೆ ಕುಟ್ಯಪ್ಪು, ಪಡ್ರೆ ಚಂದು, ಕುಂಞಿ ಕಣ್ಣ ಮಣಿಯಾಣಿ, ಪುತ್ತೂರು ಕೃಷ್ಣ ಭಟ್ಟ, ಸಂಪಾಜೆ ಶೀನಪ್ಪ ರೈ, ಮುಂದಿಲ ಕೃಷ್ಣ ಭಟ್ಟ, ಕೋಡಿ ಕುಷ್ಟ , ಅಜಾರು ಉಮೇಶ ಶೆಟ್ಟಿ, ಮುಂಡ್ಕೂರು ಕುಟ್ಟಿ ಶೆಟ್ಟಿ ಮೊದಲಾದವರು ಪಾತ್ರಧಾರಿಗಳಾಗಿದ್ದಾಗ ಕೊರಗಪ್ಪ ನಾಯ್ಕ ಅವರು ಭಾಗವತಿಕೆ ಮಾಡಿದ್ದರು.

ತಿರುಗಾಟದ ಕೊನೆಯಲ್ಲಿ ಕುಬಣೂರು ಶ್ರೀಧರ ರಾಯರಿಗೆ ಸಹಾಯಕ ಭಾಗವತರಾಗಿದ್ದರು, ಮದ್ದಲೆ ವಾದನವನ್ನೂ ಅರಿತಿದ್ದರು.

ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉದಯಪುರದ ಕೊಲೆ ಪ್ರಕರಣ ವ್ಯವಸ್ಥಿತ ಸಂಚು ಮತ್ತು ಭಯೋತ್ಪಾದನೆ ಆರಂಭದ ಭಾಗ : ನಳಿನ್ ಕುಮಾರ್ ಕಟೀಲ್ ..!

ಮಂಗಳೂರು :  ರಾಜಸ್ಥಾನದ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣ ಒಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದ್ದು, ಈ ಹಿಂದೆ ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ‌ನಡೆದಿತ್ತು ಎಂದು...

ಮುಲ್ಕಿಯಲ್ಲಿ ವಿದ್ಯುತ್ ಕಂಬಕ್ಕೆ ಗುದ್ದಿದ ಟೆಂಪೋ: ಚಾಲಕ ಜೀವಾಂತ್ಯ-ಇಬ್ಬರಿಗೆ ಗಂಭೀರ

ಮುಲ್ಕಿ: ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು ಟೆಂಪೋದಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಸಂಭವಿಸಿದೆ.ಮೃತ ಚಾಲಕನನ್ನು...

ಮಂಗಳೂರು: ನಾ ಕಾರಂತ ಪೆರಾಜೆಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯದ ಬದುಕನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ "ಬ್ರ‍್ಯಾಂಡ್ ಮಂಗಳೂರು" ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ನಾ ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ.ಸುಧಾ ಪತ್ರಿಕೆಯಲ್ಲಿ...