LATEST NEWS
ಸ್ಟೆಟಸ್‌ನಲ್ಲಿ ವಿವಾದಾತ್ಮಕ ಫೋಟೊ ಅಪ್‌ಲೋಡ್ : ಯುವಕನ ಮೇಲೆ 300 ಜನರ ತಂಡದಿಂದ ದಾಳಿ..!
Published
3 years agoon
By
Adminಚನ್ನಗಿರಿ: ವಿವಾದಾತ್ಮಕ ಫೋಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ ಯುವಕನ ಮನೆಯ ಮೇಲೆ ಸುಮಾರು 300 ಜನರಿದ್ದ ಗುಂಪು ಬುಧವಾರ ರಾತ್ರಿ ದಾಳಿ ಮಾಡಿದ ಘಟನೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಯುವಕ ಹಾಗೂ ಆತನ ತಾಯಿ ಗಾಯಗೊಂಡಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ.
ನಲ್ಲೂರು ಗ್ರಾಮದ ನವೀನ್ (25) ಎಂಬ ಯುವಕ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ವಿವಾದಾತ್ಮಕ ಫೋಟೊವನ್ನು ಹಾಕಿಕೊಂಡಿದ್ದ.
ಇದರಿಂದ ಕೆರಳಿದ ಒಂದು ಸಮುದಾಯದವರು ಬುಧವಾರ ರಾತ್ರಿ ಬಡಿಗೆ, ಮಾರಕಾಸ್ತ್ರಗಳೊಂದಿಗೆ ಯುವಕನ ಮನೆಯ ಮುಂದೆ ಜಮಾವಣೆಗೊಂಡಿದ್ದಾರೆ. ಕೆಲವರು ಮನೆಯೊಳಗೆ ನುಗ್ಗಿ ಯುವಕನ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ ಆತನ ತಾಯಿ ಸರೋಜಮ್ಮ (60) ಅವರ ಮೇಲೂ ಹಲ್ಲೆ ನಡೆಸಿದ್ದಾರೆ.
ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಗುಂಪು ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.ಗ್ರಾಮದಲ್ಲಿ ರಾತ್ರಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಬಂದು ಪರಿಸ್ಥಿತಿಯನ್ನು ಹತೋಟಿಗೆ ತಂದರು.
ನಂತರ ಸುದ್ದಿ ತಿಳಿದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರೂ ಗ್ರಾಮಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಮತ್ತಷ್ಟು ನಿಯಂತ್ರಿಸಲು ಯತ್ನಿಸಿದರು.
ಗಾಯಗೊಂಡ ನವೀನ್ ಹಾಗೂ ಸರೋಜಮ್ಮ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಗ್ರಾಮದಲ್ಲಿ ಪೊಲೀಸರು ಶಾಂತಿ ಸಭೆಯನ್ನು ನಡೆಸಿದ್ದು, ಬಿಗುವಿನ ವಾತಾವರಣ ಇದ್ದುದರಿಂದ ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
LATEST NEWS
ಹೆಲ್ಮೆಟ್ ಧರಿಸದೇ ಇದ್ದರೆ ಪೆಟ್ರೋಲ್ ಇಲ್ಲ: ಸರಕಾರದ ಆದೇಶ
Published
28 minutes agoon
13/01/2025By
NEWS DESK3ಮಂಗಳೂರು/ಲಕ್ನೋ : “ಹೆಲ್ಮೆಟ್ ಧರಿಸದೇ ಇದ್ದರೆ ಪೆಟ್ರೋಲ್ ಇಲ್ಲ” ಎಂಬ ನೀತಿ ಜಾರಿಗೊಳಿಸಲು ಉತ್ತರಪ್ರದೇಶ ಸರಕಾರ ಮುಂದಾಗಿದೆ.
ರಾಜ್ಯದ ನಗರಗಳ ಮಿತಿಯಲ್ಲಿ ನಿಯಮ ಜಾರಿಗೆ ಪ್ರಸ್ತಾವಿಸಲಾಗಿದೆ. ಇದರ ಜೊತೆಗೆ ಹಿಂಬದಿ ಸವಾರರೂ ಸೇರಿ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು
ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೂ ರಾಜ್ಯ ಸರಕಾರ ಸೂಚಿಸಿದೆ.
LATEST NEWS
ಇಂದಿನಿಂದ ಮಹಾ ಕುಂಭಮೇಳ; ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ ಭಾರತ
Published
41 minutes agoon
13/01/2025ಮಂಗಳೂರು/ಉತ್ತರ ಪ್ರದೇಶ : “ಹಿಂದೆ ನಡೆದಿದ್ದ ಪೂರ್ಣ ಮಹಾಕುಂಭ ಮೇಳದ ಸಮಯದಲ್ಲಿ ಈಗಿನ ಯಾರೂ ಬದುಕಿರಲಿಲ್ಲ. ಮುಂದೆ ನಡೆಯುವ ಮಹಾ ಕುಂಭಮೇಳದ ಸಮಯಕ್ಕೆ ಸಹ ನಾವ್ಯಾರೂ ಬದುಕಿರುವುದಿಲ್ಲ”. 144 ವರ್ಷಗಳ ನಂತರ ನಡೆಯುತ್ತಿರುವ ಐತಿಹಾಸ ಪ್ರಸಿದ್ಧ ಮಹಾ ಕುಂಭಮೇಳಕ್ಕೆ ಪ್ರಯಾಗ್ ನಗರ ಸಜ್ಜಾಗಿದೆ. ಅತ್ಯಂತ ಅಪರೂಪದ ಕುಂಭಮೇಳ ಇದಾಗಿದ್ದು ‘ಮಹಾಕುಂಭ ಮೇಳ’ ಎಂದು ಕರೆಯಲಾಗುತ್ತದೆ. 44 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳ ಇಂದಿನಿಂದ (ಜನವರಿ 13) ಪ್ರಾರಂಭವಾಗಿ ಫೆಬ್ರವರಿ 26 ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳಲಿದೆ.
ಈ ಪವಿತ್ರ ಕಾರ್ಯಕ್ರಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಪವಿತ್ರ ನದಿಯಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ಕಳೆದು ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆ 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದ್ದು, ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ. ಕುಂಭಮೇಳದ ಮೂಲವು ಹಿಂದೂ ಪುರಾಣಗಳಲ್ಲಿ, ವಿಶೇಷವಾಗಿ ಸಮುದ್ರ ಮಂಥನದ ಕಥೆಯಲ್ಲಿದೆ. ದೇವತೆಗಳು (ದೇವರುಗಳು) ಮತ್ತು ಅಸುರರು (ರಾಕ್ಷಸರು) ಅಮರತ್ವದ ಅಮೃತವಾದ ಅಮೃತವನ್ನು ಪಡೆಯುವ ಪ್ರಯತ್ನದಲ್ಲಿದ್ದಾಗ ಅಮೃತದಿಂದ ತುಂಬಿದ ಕುಂಭ (ಮಡಿಕೆ) ಹೊರಹೊಮ್ಮಿತು. ರಾಕ್ಷಸರಿಂದ ಅದನ್ನು ರಕ್ಷಿಸಲು, ಮೋಹಿನಿಯ ವೇಷದಲ್ಲಿರುವ ಭಗವಾನ್ ವಿಷ್ಣುವು ಮಡಿಕೆಯನ್ನು ಸ್ವಾಧೀನಪಡಿಸಿಕೊಂಡ. ಈ ರೀತಿ ವಶಪಡಿಸಿಕೊಂಡು ಕೊಂಡೊಯ್ಯುತ್ತಿದ್ದಾಗ ಅಮೃತದ ಹನಿಗಳು ಬಿದ್ದ ನಾಲ್ಕು ಸ್ಥಳಗಳೇ ಇಂದಿನ ಪ್ರಯಾಗರಾಜ್, ಹರಿದ್ವಾರ, ಉಜ್ಜಯಿನಿ ಮತ್ತು ನಾಸಿಕ್ ಕ್ಷೇತ್ರಗಳಾಗಿವೆ. ಈ ಸ್ಥಳಗಳು ಪವಿತ್ರ ಸ್ಥಳಗಳಾಗಿ ಪೂಜಿಸಲ್ಪಡುವುದರಿಂದ ಅಲ್ಲಿಯೇ ಕುಂಭಮೇಳವನ್ನು ಆಚರಿಸಲಾಗುತ್ತದೆ.
ಕುಂಭ ಮೇಳೆ ನಡೆಯುವ ಸಂಧರ್ಭದಲ್ಲಿ ನಾಗಾ ಸಾಧುಗಳು ಆಗಮಿಸಿ ಶಾಹಿ ಸ್ನಾನದಲ್ಲಿ ಪಾಲ್ಗೊಳ್ಳುತ್ತಾರೆ.ಮಹಾಕುಂಭ ಮೇಳದಲ್ಲಿ ಭಾಗವಹಿಸುವ ನಾಗ ಸಾಧುಗಳ ಜೀವನವು ಸಾಮಾನ್ಯ ಜನರಿಂದ ಪ್ರತ್ಯೇಕವಾಗುವುದರೊಂದಿಗೆ ನಿಗೂಢವಾಗಿರುತ್ತದೆ. ಲೌಕಿಕ ಭೋಗಗಳಿಂದ ದೂರವಿದ್ದು ದೇವರ ಆರಾಧನೆಯಲ್ಲಿ ಆಳವಾಗಿ ತಲ್ಲೀನರಾಗುವ ಈ ಸಾಧುಗಳಲ್ಲಿ 13 ಅಖಾಡಗಳಿವೆ(ಪಂಗಡ), ಅದರಲ್ಲಿ ಏಳು ಶೈವ(ಶಿವನ ಆರಾಧಕರು) ಮತ್ತು ತಲಾ ಮೂರು ವೈಷ್ಣವ(ವಿಷ್ಣುವಿನ ಆರಾಧಕರು) ಹಾಗೂ ಉದಾಸೀನ(ಸಿಖ್) ಅಖಾಡಗಳಿವೆ. ಆಧ್ಯಾತ್ಮಿಕ ಮತ್ತು ರಕ್ಷಣಾತ್ಮಕ ಕೆಲಸಗಳೆರಡನ್ನೂ ಅಖಾಡದ ಸಾಧುಗಳು ನಿರ್ವಹಿಸುತ್ತಾರೆ. ಸನಾತನ ಜೀವನ ವಿಧಾನವನ್ನು ಸಂರಕ್ಷಿಸಲು ಜಗದ್ಗುರು ಆದಿ ಶಂಕರಾಚಾರ್ಯರು ಎಂಟನೇ ಶತಮಾನದಲ್ಲಿ ಈ ಅಖಾಡಗಳನ್ನು ಸ್ಥಾಪಿಸಿದರು.
ಈ ಬಾರಿ ಶಾಹಿ ಸ್ನಾನ ನಡೆಯುವ ದಿನಗಳು :
ಜನವರಿ 13( ಪುಷ್ಯ ಪೂರ್ಣಿಮಾ ಸ್ನಾನ)
ಜನವರಿ 15 (ಮಕರ ಸಂಕ್ರಾಂತಿ ಸ್ನಾನ)
ಜನವರಿ 29(ಮೌನಿ ಅಮಾವಾಸ್ಯೆ ಸ್ನಾನ)
ಫೆಬ್ರುವರಿ 03(ಬಸಂತ್ ಪಂಚಮಿ ಸ್ನಾನ)
ಫೆಬ್ರುವರಿ 12(ಮಾಘಿ ಹುಣ್ಣಿಮೆ ಸ್ನಾನ)
ಫೆಬ್ರುವರಿ 26(ಮಹಾ ಶಿವರಾತ್ರಿ ಸ್ನಾನ)
ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳ ನಡೆಯುವ ಸ್ಥಳದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲು ಬರೋಬ್ಬರಿ 5,500 ಕೋಟಿ ರೂಪಾಯಿಗಳ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ವಿಶೇಷ ಮುತುವರ್ಜಿ ವಹಿಸಿದ್ದು, ಮಹಾ ಕುಂಭಮೇಳ ಯಶಸ್ವಿಯಾಗಿ ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಇದು “ಡಿಜಿಟಲ್ ಮಹಾಕುಂಭ ಮೇಳವಾಗಿದ್ದು” ವಿಶೇಷವಾಗಿ 328 ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಹೊಂದಿರುವ ಸಿಸಿಟಿವಿಗಳು ಸೇರಿ ಒಟ್ಟು 2600 ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಜೊತೆಗೆ ಹೊಸ ತಂತ್ರಜ್ಞಾನ ಹೊಂದಿರುವ ನೀರಿನ ಒಳಗಡೆ ಚಲಿಸುವ ಡ್ರೋನ್ ಗಳನ್ನು ಈ ಬಾರಿ ಬಳಸಲಾಗುತ್ತಿದೆ.
ಸುಮಾರು 37 ಸಾವಿರ ಪೋಲಿಸರನ್ನು ಹಾಗೂ 14 ಸಾವಿರ ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. 10,200 ಸ್ವಚ್ಛತಾ ಕಾರ್ಮಿಕರನ್ನು ನಿಯೋಜಿಸಲಾಗಿದೆ. ಮಹಾ ಕುಂಭಮೇಳ ನಡೆಯುವ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಪೌರಾಣಿಕ ಪ್ರಾಮುಖ್ಯತೆಯನ್ನು ಸಾರುವ 30 ವಿವಿಧ ಕಮಾನುಗಳನ್ನು ನಿರ್ಮಾಣ ಮಾಡಲಾಗಿದ್ದು ಭಕ್ತರಿಗೆ ದೇವ ಲೋಕದ ದಿವ್ಯ ದರ್ಶನ ಅನುಭವವಾಗಲಿದೆ. ಸುಮಾರು 12 ಕಿ.ಮೀ ನಲ್ಲಿ ತಾತ್ಕಾಲಿಕ ಘಟ್‌ಗಳನ್ನು ನಿರ್ಮಾಣ ಮಾಡಲಾಗಿದೆ, 450 ಕಿ.ಮೀ ನಷ್ಟು ಪೈಪ್‌ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಈ ಅದ್ಭುತವಾದ ಕಾರ್ಯಕ್ರಮವನ್ನು ಲೈವ್ ಪ್ರಸಾರ ಮಾಡಲು ಅಮೆರಿಕ, ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ಸೇರಿದಂತೆ 82 ದೇಶಗಳು ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಿವೆ.
LATEST NEWS
ಸಾರ್ವಜನಿಕರೇ ಎಚ್ಚರ: ಸಂಕ್ರಾಂತಿ ಹಬ್ಬದ ಗಿಫ್ಟ್ ಹೆಸರಿನಲ್ಲಿ ಬರುವ ಈ ಲಿಂಕ್ ಕ್ಲಿಕ್ ಮಾಡಬೇಡಿ.!
Published
57 minutes agoon
13/01/2025By
NEWS DESK2ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ವಂಚಕರು ವಿವಿಧ ರೀತಿಯಲ್ಲಿ ಜನರನ್ನು ವಂಚಿಸುತ್ತಿದ್ದು, ಇದೀಗ ಸಂಕ್ರಾಂತಿಗೆ ಶಾಪಿಂಗ್ ಮಾಡಿ ಹಬ್ಬದ ದಿನದಂದು ಉಚಿತ ರೀಚಾರ್ಜ್ ಪಡೆಯಿರಿ ಸೇರಿದಂತೆ ಹಲವು ಉಡುಗೊರೆ ಇರುವ ಮೆಸೇಜ್ ಕಳುಹಿಸಿ ವಂಚನೆ ಎಸಗುತ್ತಿದ್ದಾರೆ.
ನಿಮ್ಮ ಫೋನ್ ಮತ್ತು ವಾಟ್ಸಾಪ್ ಸಂಖ್ಯೆಗಳಿಗೆ ಬಂದಿರುವ ಸಂದೇಶಗಳನ್ನು ನೋಡಿದರೆ ಬ್ಯಾಂಕ್ ಖಾತೆಗಳಲ್ಲಿರುವ ಹಣವೆಲ್ಲಾ ಖಾಲಿಯಾಗಲಿದೆ ಎಂದು ಸೈಬರ್ ಕ್ರೈಂ ಪೊಲೀಸರು ಎಚ್ಚರಿಸಿದ್ದಾರೆ. ಇ-ಕಾಮರ್ಸ್ ವೆಬ್‌ಸೈಟ್‌ಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹೆಸರಿನಲ್ಲಿ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಸಂಕ್ರಾಂತಿ ಹಬ್ಬದ ಉದ್ದೇಶದಿಂದ ವಾಟ್ಸಪ್ ಗ್ರೂಪ್ ಗಳನ್ನು ಆಯೋಜಿಸಿ ಆಹ್ವಾನ ನೀಡಲಾಗುತ್ತಿದೆ. ಹೊಸ ಬಟ್ಟೆ, ವಾಹನ ಖರೀದಿಗೆ ರಿಯಾಯಿತಿ ನೀಡುವಂತೆ ಇ-ಮೇಲ್ ಹಾಗೂ ವಾಟ್ಸ್ ಆಪ್ ನಂಬರ್ ಗಳಿಗೆ ಜಾಹೀರಾತುಗಳನ್ನು ಕಳುಹಿಸಲಾಗುತ್ತಿದೆ. ಇತ್ತೀಚಿಗೆ ಸಿಎಂ ಹೆಸರಿನಲ್ಲಿ ಉಚಿತ ರೀಚಾರ್ಜ್ ಆಫರ್ ಎಂದು ಲಿಂಕ್ ಕಳುಹಿಸುತ್ತಿದ್ದಾರೆ. ರೂ.749 ಮೌಲ್ಯದ 3 ತಿಂಗಳ ರೀಚಾರ್ಜ್ ಎಲ್ಲರಿಗೂ ಉಚಿತ ಮತ್ತು ಸೀಮಿತ ಅವಧಿಗೆ ಮಾತ್ರ ಎಂದು ಲಿಂಕ್ ಕಳುಹಿಸುತ್ತಿದ್ದಾರೆ. ಕ್ಲಿಕ್ ಮಾಡಿದವರ ಫೋನ್‌ಗಳನ್ನು ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಖಾಲಿ ಮಾಡುತ್ತಿದ್ದಾರೆ.
LATEST NEWS
ಹಸುಗಳ ಕೆಚ್ಚಲು ಕೊ*ಯ್ದ ಪ್ರಕರಣ; ಆರೋಪಿಯೋರ್ವನ ಬಂಧನ
ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ
ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು
ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
Trending
- FILM7 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- BIG BOSS2 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- FILM5 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS3 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!