DAKSHINA KANNADA
ಚಂದನ ವಾಹಿನಿಯಲ್ಲಿ ಸೆ. 24 ರಿಂದ ‘ಅಂಬರ್ ಮರ್ಲೆರ್’ ತುಳು ಸೀರಿಯಲ್ ಪ್ರಸಾರ
ಚಂದನ ವಾಹಿನಿಯಲ್ಲಿ ಮುಂಬರುವ ಸೆ. 24 ರವಿವಾರದಿಂದ ಮೊದಲ್ಗೊಂಡು ಪ್ರತಿ ರವಿವಾರ ಮಧ್ಯಾಹ್ನ 1.30 ರಿಂದ 2 ಗಂಟೆ ವರೆಗೆ ‘ಅಂಬರ್ ಮರ್ಲೆರ್’ ತುಳು ಧಾರಾವಾಹಿ ಪ್ರಸಾರವಾಗಲಿದೆ.
ಮಂಗಳೂರು: ಚಂದನ ವಾಹಿನಿಯಲ್ಲಿ ಮುಂಬರುವ ಸೆ. 24 ರವಿವಾರದಿಂದ ಮೊದಲ್ಗೊಂಡು ಪ್ರತಿ ರವಿವಾರ ಮಧ್ಯಾಹ್ನ 1.30 ರಿಂದ 2 ಗಂಟೆ ವರೆಗೆ ‘ಅಂಬರ್ ಮರ್ಲೆರ್’ ತುಳು ಧಾರಾವಾಹಿ ಪ್ರಸಾರವಾಗಲಿದೆ.
ಈ ಎಪಿಸೋಡ್ ಸುಮಾರು 6 ತಿಂಗಳ ಕಾಲ ಪ್ರಸಾರವಾಗಲಿದೆ. ಇದು ಹಾಸ್ಯ ಭರಿತ ಧಾರಾವಾಹಿ.
ತುಳು ಭಾಷಿಗರೆಲ್ಲರೂ ವೀಕ್ಷಿಸಲೇ ಬೇಕಾದ ಸೀರಿಯಲ್. ಹಳ್ಳಿಯ ಜನರು ನೋಡ ಬೇಕೆಂದು ಮಧ್ಯಾಹ್ನ ವೇಳೆಯನ್ನು ಆಯ್ಕೆ ಮಾಡಲಾಗಿದೆ.
ತುಳು ನಾಡಿನ 75 ಕ್ಕೂ ಅಧಿಕ ನಾಟಕ ಮತ್ತು ಸಿನೆಮಾ ಕಲಾವಿದರು ನಟಿಸಿದ್ದಾರೆ.
ನವೀನ್ ಪಡೀಲ್, ಸುಂದರ ರೈ ಮಂದಾರ, ಕಾಂತಾರ ಖ್ಯಾತಿಯ ದೀಪಕ್ ರೈ, ರಂಜನ್ ಬೋಳೂರು, ಅರುಣ್ ಚಂದ್ರ ಬಿ.ಸಿ.ರೋಡ್, ಸುನಿಲ್ ನೆಲ್ಲಿಗುಡ್ಡೆ ಮತ್ತಿತರ ಪ್ರಮುಖರು ಭಾಗವಹಿಸಿದ್ದಾರೆ ಎಂದು ಎಪಿಸೋಡ್ ನಿದೇಶಕ ಪ್ರಜ್ವಲ್ ಅತ್ತಾವರ ಪತ್ರಿಕಾ ಗೋಷ್ಢಿಯಲ್ಲಿ ತಿಳಿಸಿದರು.
ಎಲ್ಲಾ ವರ್ಗಗಳ ವೀಕ್ಷಕರಿಗೂ ತಲುಪ ಬೇಕೆಂದು ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ಸ್ಕ್ರಿಪ್ಟ್ ರೈಟರ್ ಅರುಣ್ ಚಂದ್ರ ಬಿ.ಸಿ.ರೋಡ್ ತಿಳಿಸಿದರು.
ಕಲಾವಿದ ರಂಜನ್ ಬೋಳೂರು, ಕೆಮರಾ ಮೆನ್ ಧನು ರೈ ಪುತ್ತೂರು, ಸುಂದರ, ಉಮೇಶ್ ಪೂಜಾರಿ ಅವರು ಸುದ್ದಿ ಗೋಷ್ಠಿಯಲ್ಲಿದ್ದರು.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
DAKSHINA KANNADA
Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!
ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್