Tuesday, October 19, 2021

ಕೆನಡಾದಲ್ಲಿ ಸೆಪ್ಟೆಂಬರ್‌ 5ನ್ನು ʼಗೌರಿ ಲಂಕೇಶ್‌ ದಿನʼ ಎಂದು ಆಚರಿಸಲು ನಿರ್ಧಾರ

ಬೆಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್‌ಗೆ ಗೌರವ ಸಲ್ಲಿಸುವ ಸಲುವಾಗಿ ಕೆನಡಾದ ʼಸಿಟಿ ಆಫ್‌ ಬಾನಬಿʼ ಸೆಪ್ಟೆಂಬರ್‌ 5ನ್ನು ʼಗೌರಿ ಲಂಕೇಶ್‌ ದಿನʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ಗೌರಿ ಲಂಕೇಶ್‌ ಸಹೋದರಿ ಕವಿತಾ ಲಂಕೇಶ್‌ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ.


‘ಹಿಂದುತ್ವವಾದಿ ಬಿಜೆಪಿ ಸರಕಾರದ ವಿರುದ್ಧ ಬರೆಯುತ್ತಿದ್ದ ಗೌರಿ ಅವರನ್ನು 2017ರ ಸೆಪ್ಟೆಂಬರ್‌ 5ರಂದು ಕೊಲೆಗೈಯಲಾಯಿತು.

2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದಂದಿನಿಂದ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಏರಿಕೆಯಾಗಿದ್ದು, ಇದರ ವಿರುದ್ಧ ಗೌರಿ ಲಂಕೇಶ್‌ ಹೋರಾಟ ಮಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕೆಲ ಬೆಂಬಲಿಗರು ಅವರ ಸಾವಿಗೆ ಸಂತೋಷ ವ್ಯಕ್ತಪಡಿಸಿದ್ದರು ಎಂದೂ ಕವಿತಾ ಲಂಕೇಶ್‌ ತಮ್ಮ ಪೋಸ್ಟ್‌ ನಲ್ಲಿ ಉಲ್ಲೇಖಿಸಿದ್ದಾರೆ.
ಬಾನಬಿ ಸಿಟಿಯು ಸೆಪ್ಟೆಂಬರ್‌ 5ನ್ನು ಗೌರಿ ಲಂಕೇಶ್‌ ದಿನವಾಗಿ ಆಚರಿಸಲು ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಅಲ್ಲಿನ ಮೇಯರ್‌ ಮೈಕ್‌ ಹರ್ಲಿ, “ನ್ಯಾಯ ಮತ್ತು ಸತ್ಯಕ್ಕಾಗಿ ಎದ್ದು ನಿಂತ ದಿಟ್ಟ ಭಾರತೀಯ ಪತ್ರಕರ್ತೆ ಗೌರಿ ಲಂಕೇಶ್”‌ ಎಂದು ಪ್ರಶಂಸಿಸಿದ್ದಲ್ಲದೇ,

ಮಾನವ ಹಕ್ಕುಗಳಿಗಾಗಿ ಮತ್ತು ದುರಾಡಳಿತದ ವಿರುದ್ಧ ನಿಂತು ಅವರು ತಮ್ಮ ಜೀವವನ್ನು ಸಮರ್ಪಿಸಿದರು” ಎಂದು ಮೇಯರ್‌ ತಿಳಿಸಿದ್ದಾಗಿ ಪೋಸ್ಟ್‌ ನಲ್ಲಿ ಉಲ್ಲೇಖಿಸಲಾಗಿದೆ.

ಜೊತೆಗೆ ಈ ಸಂಬಂಧ ಘೋಷಣಾಪತ್ರವನ್ನೂ ತಮ್ಮ ಪೋಸ್ಟ್‌ ನಲ್ಲಿ ಪ್ರಕಟಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...