Monday, July 4, 2022

ಬಂಟ್ವಾಳದಲ್ಲಿ ಸರಣಿ ಅಪಘಾತ: ಗಂಟೆಗಟ್ಟಲೆ ಟ್ರಾಫಿಕ್‌ ಜಾಂ

ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ ವೋಲ್ವೋ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ಅಡ್ಡಲಾಗಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ.


ಘಟನೆಯಿಂದ 3 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ. ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು.‌ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪೌರಕಾರ್ಮಿಕರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ಉಪನಾಯಕ ಖಾದರ್

ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ.ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ...

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ರಾಜ್ಯದಲ್ಲೇ ಮೊದಲ ಬಾರಿಗೆ ಎಡಿಜಿಪಿ ಬಂಧನ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.ಪೊಲೀಸ್ ನೇಮಕಾತಿ...

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...