Connect with us

    DAKSHINA KANNADA

    ಸುಳ್ಯದಲ್ಲಿ ಸರಣಿ ಅಪಘಾತ – ಒಬ್ಬ ಸಾವು, ಇನ್ನೋರ್ವ ಗಂಭೀರ..!

    Published

    on

    ಬೈಕ್ ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸೋಮವಾರ ರಾತ್ರಿ ನಡೆದಿದೆ.

    ಸುಳ್ಯ: ಬೈಕ್ ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸೋಮವಾರ ರಾತ್ರಿ ನಡೆದಿದೆ.

    ಇಲ್ಲಿನ ಮಾಣಿ – ಮೈಸೂರು ಹೆದ್ದಾರಿಯ ಸುಳ್ಯ ಸಮೀಪದ ಪಾಲಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ.

    ಸುಳ್ಯದ ಖಾಸಗಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ಅಧ್ಯಯನ ಮಾಡುತ್ತಿರುವ ಬೈಕ್ ಸವಾರ ಚಿಕ್ಕಬಳ್ಳಾಪುರದ 21ವರ್ಷದ ಸ್ವರೂಪ್ ಮೃತ ದುರ್ದೈವಿಯಾಗಿದ್ದಾರೆ.

    ಇನ್ನೋರ್ವ ಸಹಸವಾರ ಮಡಿಕೇರಿಯ 21ವರ್ಷದ ಸಂಭ್ರಮ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮಡಿಕೇರಿ ಕಡೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬೈಕ್ ಗೆ ಪಾಲಡ್ಕ ಎಂಬಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ಢಿಕ್ಕಿಯಾಗಿ ಪರಾರಿಯಾಗಿದೆ.

    ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಸುಳ್ಯ ಕಡೆ ಬರುತ್ತಿದ್ದ ಕಾರಿಗೆ ಢಿಕ್ಕಿಯಾಗಿದೆ.

    ಘಟನೆಯಲ್ಲಿ ಬೈಕ್ ಸವಾರ ಸ್ವರೂಪ್ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಸಂಭ್ರಮ್ ಗಾಯಗೊಂಡಿದ್ದಾರೆ.

    ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತ ಎಸಗಿದ ಪಿಕಪ್ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

    ಸುಳ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending