Thursday, June 30, 2022

ಫ್ಯಾಟ್ ಸರ್ಜರಿ ವೇಳೆ ದುರಂತ ಅಂತ್ಯ ಕಂಡ ಕಿರುತೆರೆ ನಟಿ…

ಬೆಂಗಳೂರು: ದೇಹದ ಕೊಬ್ಬಿನಾಂಶ ತೆಗೆದು ಹಾಕುವ (ಫ್ಯಾಟ್‌) ಸರ್ಜರಿ ವೇಳೆ ಕಿರುತರೆ ನಟಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚೇತನಾ ರಾಜ್ (21) ಸಾವನ್ನಪ್ಪಿದ ಮೃತ ದುರ್ದೈವಿ.


ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ಇವರು ನವರಂಗ್ ಸರ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದರಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ.

ಮಗಳ ಸಾವಿನ‌ ಕುರಿತು ಪ್ರತಿಕ್ರಿಯಿಸಿರುವ ತಂದೆ ಗೋವಿಂದ ರಾಜ್, ‘ನಿನ್ನೆ ಬೆಳಗ್ಗೆ 8.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ನಮಗೆ ವಿಚಾರ ಗೊತ್ತಾಗಿ, ನಾವು ಬರುವ ಹೊತ್ತಿಗೆ ವೈದ್ಯರು ಸರ್ಜರಿ ನಡೆಸುತ್ತಿದ್ದರು. ಸಂಜೆ ಹೊತ್ತಿಗೆ ಶ್ವಾಸಕೋಶಕ್ಕೆ ಕೊಬ್ಬಿನ ಅಂಶ ತುಂಬಿ ಉಸಿರಾಟದ ತೊಂದರೆಯಾಗಿದೆ. ಆಸ್ಪತ್ರೆಯಲ್ಲಿ ಐಸಿಯು ಸೇರಿದಂತೆ ಯಾವುದೇ ವ್ಯವಸ್ಥೆ ಸೂಕ್ತವಾಗಿಲ್ಲ. ಈ ಹಿಂದೆ ಕೂಡ ಚೇತನಾ ರಾಜ್ ಫ್ಯಾಟ್ ಸರ್ಜರಿಗೆ ಕೇಳಿದ್ದಳು. ನಾವು ಬೇಡ ಎಂದು ಹೇಳಿದ್ದೆವು. ಹಾಗಾಗಿ ನಮ್ಮ ಗಮನಕ್ಕೆ ಬಾರದೇ ಸರ್ಜರಿಗೆ ಬಂದಿದ್ದಾಳೆ.


ಆಸ್ಪತ್ರೆ ನಿರ್ಲಕ್ಷ್ಯಕ್ಕೆ ನನ್ನ ಮಗಳು ಸಾವನ್ನಪ್ಪಿದ್ದಾಳೆ. ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ವೈದ್ಯರು ಸರ್ಜರಿಗೆ ಮುಂದಾಗಿದ್ದಾರೆ’ ಎಂದು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು.

ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟನೆ ಮಾಡಿದ್ದರು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿಯಲ್ಲಿ ನಾರಾಯಣ ಗುರು ಪಠ್ಯ ಸೇರ್ಪಡೆಗಾಗಿ ಜು.4 ರಂದು ಪ್ರತಿಭಟನೆ

ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ...

ಕರಾವಳಿಯಲ್ಲಿ ರಣಭೀಕರ ಮಳೆಗೆ ಹೈರಾಣಾದ ಜನತೆ-ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆ : ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.