Friday, July 1, 2022

ಜಾಗ ಸಮತಟ್ಟು ಮಾಡುತ್ತಿದ್ದ  ಟಿಪ್ಪರ್ ನಡಿಗೆ ಬಿದ್ದು ಕಾರ್ಮಿಕ ಸಾವು..!

ಜಾಗ ಸಮತಟ್ಟು ಮಾಡುತ್ತಿದ್ದ  ಟಿಪ್ಪರ್ ನಡಿಗೆ ಬಿದ್ದು ಕಾರ್ಮಿಕ ಸಾವು..!

ಮಂಗಳೂರು: ಜಮೀನು ಸಮತಟ್ಟು ಕಾಮಗಾರಿ ನಡೆಸುವ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮಧ್ಯ ಪ್ರದೇಶ ಮೂಲದ 28 ವರ್ಷದ ರಾಮಪ್ರಸಾದ್  ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟ ಕಾರ್ಮಿಕನಾಗಿದ್ದಾನೆ.ಪಕ್ಷಿ ಕೆರೆಯ ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ ಜಮೀನನ್ನು, ಮನೆ ನಿವೇಶನಕ್ಕಾಗಿ ಸಮತಟ್ಟು ಮಾಡುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ.ಜೆಸಿಬಿ ಸಹಾಯದಿಂದ ಸಮತಟ್ಟು ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ನಡಿಗೆ ಬಿದ್ದ ರಾಮಪ್ರಸಾದ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಣೆ: ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೆಲವು ಕಡೆ...

ಮುಲ್ಕಿ: ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿ ಜೀವಾಂತ್ಯ…

ಮುಲ್ಕಿ: ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮುಲ್ಕಿಯ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ನಿನ್ನೆ ರಾತ್ರಿ ನಡೆದಿದೆ.ಮೃತ ವ್ಯಕ್ತಿಯನ್ನು...

ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ : ಇಂದು ಸಂಜೆ 7.30 ಪ್ರಮಾಣವಚನ..!

ಮುಂಬೈ : ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್​ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ...